ಪಾಕಿಸ್ತಾನ - ಸೌದಿ ಅರೇಬಿಯಾ ನಡುವೆ ಮಹತ್ವದ ರಕ್ಷಣಾ ಒಪ್ಪಂದ - ಭಾರತ ಹೇಳಿದ್ದೇನು ?
Pakistan-Saudi Arabia: ಮಹತ್ವದ ಬೆಳವಣಿಗೆಯಲ್ಲಿ ಪಾಕಿಸ್ತಾನ ಹಾಗೂ ಸೌದಿ ಅರೇಬಿಯಾ ರಕ್ಷಣಾ ಒಪ್ಪಂದಕ್ಕೆ ಸಹಿಹಾಕಿದ್ದು. ಪಾಕಿಸ್ತಾನವು ವಿವಿಧ ಮುಸ್ಲಿಂ ರಾಷ್ಟ್ರಗಳೊಂದಿಗೆ ಕೈಜೋಡಿಸುತ್ತಿದೆ. ಭಾರತ - ಪಾಕಿಸ್ತಾನದ ನಡುವೆ ಈಚೆಗೆ ಯುದ್ಧ ನಡೆದ ಮೇಲೆ ಎರಡೂ ದೇಶಗಳು ರಕ್ಷಣಾ ಕ್ಷೇತ್ರದಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳನ್ನು ಮಾಡಿಕೊಳ್ಳುತ್ತಿವೆ.
ಭಾರತ ಹಾಗೂ ಪಾಕಿಸ್ತಾನದ ನಡುವೆ ಈಚೆಗೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದಿತ್ತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿಯೇ ಪಾಕಿಸ್ತಾನಕ್ಕೆ ಟರ್ಕಿ ಸೇರಿದಂತೆ ಕೆಲವೊಂದು ಮುಸ್ಲಿಂ ರಾಷ್ಟ್ರಗಳು ಪರೋಕ್ಷವಾಗಿ ಬೆಂಬಲ ನೀಡಿದ್ದವು. ಆದರೆ ಬದಲಾದ ರಾಜಕೀಯ ಹಾಗೂ ಭೌಗೋಳಿಕ ಸನ್ನಿವೇಶದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ವಿವಿಧ ರಾಷ್ಟ್ರಗಳು ಒಂದಾಗುತ್ತಿವೆ. ಇರಾನ್‌ಗೆ ಪಾಕಿಸ್ತಾನ ಸೇರಿದಂತೆ ಹಲವು ರಾಷ್ಟ್ರಗಳು ಬೆಂಬಲ ಸೂಚಿಸಿವೆ.

ಈ ರೀತಿ ಇರಾನ್‌ಗೆ ಬೆಂಬಲ ಸೂಚಿಸಿದ ರಾಷ್ಟ್ರಗಳಲ್ಲಿ ಪಾಕಿಸ್ತಾನವೂ ಒಂದು. ಪಾಕಿಸ್ತಾನದ ಬಳಿ ಪರಮಾಣು ಇದೆ. ಇದನ್ನು ಇರಾನ್ ಬಳಸಿಕೊಳ್ಳಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಪರಮಾಣು ಕೇಂದ್ರಗಳನ್ನು ನಾಶ ಮಾಡಿರುವುದಾಗಿ ಅಮೆರಿಕಾ ಹೇಳಿಕೊಂಡಿತ್ತು. ಇಷ್ಟೆಲ್ಲ ಬೆಳವಣಿಗೆಯು ಕಳೆದ ಆರು ತಿಂಗಳ ಅವಧಿಯಲ್ಲಿ ನಡೆದಿದೆ. ಇದೀಗ ಸದ್ದಿಲ್ಲದೆ ಮಹತ್ವದ ಒಪ್ಪಂದಗಳಿಗೆ ಪಾಕಿಸ್ತಾನವು ಸಹಿ ಹಾಕುತ್ತಿದೆ. ಇದರ ನಡುವೆ ಭಾರತವೂ ಸಹ ಹಲವು ಮಹತ್ವದ ಹೆಜ್ಜೆಗಳನ್ನು ಇರಿಸಿದೆ.
ಪಾಕಿಸ್ತಾನ ಹಾಗೂ ಸೌದಿ ಅರೇಬಿಯಾ ರಾಷ್ಟ್ರಗಳು ರಕ್ಷಣಾ ಒಪ್ಪಂದವೊಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದಲ್ಲಿ ಉಭಯ ರಾಷ್ಟ್ರಗಳ ಮೇಲೆ ಯಾರ ವಿರುದ್ಧವಾದರೂ ದಾಳಿ ನಡೆದರೆ ಅದನ್ನು ಎರಡೂ ದೇಶಗಳ ಮೇಲೆ ಆಗಿರುವ ದಾಳಿ ಎಂದೇ ಪರಿಗಣಿಸಲಾಗುತ್ತದೆ. ಅಲ್ಲದೇ ಎರಡೂ ರಾಷ್ಟ್ರಗಳು ಪ್ರತಿರೋಧಿಸಲಿವೆ ಎಂದು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಘೋಷಿಸಲಾಗಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಈ ಎರಡೂ ರಾಷ್ಟ್ರಗಳ ಮೇಲೆ ಯಾವುದೇ ರಾಷ್ಟ್ರಗಳು ದಾಳಿ ಅಥವಾ ಕಾರ್ಯಾಚರಣೆ ಮಾಡಿದರೂ ಎರಡೂ ರಾಷ್ಟ್ರಗಳು ಒಂದಾಗಲಿವೆ.
ಕತಾರ್‌ನಲ್ಲಿ ಹಮಾಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಈಚೆಗೆ ದಾಳಿ ಮಾಡಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ಹಾಗೂ ಸೌದಿ ಅರೇಬಿಯಾ ಎರಡೂ ದೇಶಗಳು ಒಂದಾಗಿವೆ. ಇನ್ನು ಈ ಎರಡೂ ರಾಷ್ಟ್ರಗಳ ನಡುವಿನ ಒಪ್ಪಂದವು ಭಾರತದ ರಾಷ್ಟ್ರೀಯ ಭದ್ರತೆ, ಪ್ರಾದೇಶಿಕತೆ ಹಾಗೂ ಜಾಗತಿಕ ಸ್ಥಿರತೆಯ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂದು ಅಥವಾ ಪರಿಣಾಮ ಬೀರಲಿದೆ ಎನ್ನುವ ಬಗ್ಗೆ ಅಧ್ಯಯನ ನಡೆಸುವುದಾಗಿ ಭಾರತ ಹೇಳಿದೆ.
ಇನ್ನು ಕೊಲ್ಲಿ ರಾಷ್ಟ್ರಗಳು ಹಲವು ವರ್ಷಗಳಿಂದ ಭದ್ರತೆಗೆ ಅಮೆರಿಕಾ ದೇಶವನ್ನೇ ಅವಲಂಬಿಸಿವೆ. ಆದರೆ ಇತ್ತೀಚಿನ ದಿನಗಳಲ್ಲಿ ನಡೆದಿರುವ ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಲ್ಲಿ ಕೊಲ್ಲಿ ರಾಷ್ಟ್ರಗಳ ಮೇಲೆ ಪರಿಣಾಮ ಬೀರಿದೆ. ಇರಾನ್ ಸಹ ಈಚೆಗೆ ಕತಾರ್‌ನಲ್ಲಿನ ಅಮೆರಿಕಾದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿತ್ತು. ಈ ಎಲ್ಲಾ ಕಾರಣಗಳಿಗೆ ಈಗ ನಡೆದಿರುವ ಒಪ್ಪಂದವು ಮಹತ್ವ ಪಡೆದುಕೊಂಡಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications