ಸೆಪ್ಟೆಂಬರ್ ಮಧ್ಯದಿಂದ ಪಾಕಿಸ್ತಾನದಲ್ಲಿ ಶಾಲಾ, ಕಾಲೇಜು ಪುನರಾರಂಭ
ಇಸ್ಲಾಮಾಬಾದ್, ಆಗಸ್ಟ್ 29: ಸೆಪ್ಟೆಂಬರ್ ಮಧ್ಯದಿಂದ ಪಾಕಿಸ್ತಾನದಲ್ಲಿ ಶಾಲಾ, ಕಾಲೇಜುಗಳು ಪುನರಾರಂಭಗೊಳ್ಳಲಿವೆ.
Recommended Video
China ಗಡಿಗೆ ಎಂಟ್ರಿ ಕೊಟ್ಟ ಭಾರತೀಯ ಸೇನೆ | Oneindia Kannada
ಪ್ರಧಾನಿ ಇಮ್ರಾನ್ ಖಾನ್ ಈ ಕುರಿತು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಾಷ್ಟ್ರೀಯ ಸಮನ್ವಯ ಸಮಿತಿ ಸಭೆಯಲ್ಲಿ ಕೊವಿಡ್ 19 ಬಿಕ್ಕಟ್ಟಿನ ಕುರಿತು ಚರ್ಚಿಸಲಾಯಿತು. ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ತೃಪ್ತಿ ವ್ಯಕ್ತಪಡಿಸಿದ್ದಾರೆ.
ಶನಿವಾರ ಬೆಳಗ್ಗೆ 8 ಗಂಟೆವರೆಗಿನ ಹಿಂದಿನ 24 ತಾಸುಗಳಲ್ಲಿ 319 ಮಂದಿ ಸೋಂಕಿತರಾಗಿದ್ದು, ಈ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್‌ನಿಂದ ಸತ್ತವರ ಸಂಖ್ಯೆ 6284 ಏರಿಕೆಯಾಗಿದೆ. ಕೊರೊನಾ ಸೋಂಕಿತರು ಸಂಖ್ಯೆಯು 2.95 ಲಕ್ಷಕ್ಕೆ ಹೆಚ್ಚಿದೆ.

ಪ್ರೌಢಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳನ್ನು ಪುನರಾರಂಭಿಸಲು ನಿರ್ಧರಿಸಲಾಗಿದೆ. ಹಿರಿಯ ಮತ್ತು ಕಿರಿಯ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳನ್ನು ಸಧ್ಯಕ್ಕೆ ಆರಂಭಿಸದಿರಲು ನಿಶ್ಚಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications