ಕಾರ್ಗಿಲ್ ಯುದ್ಧದ ವೇಳೆ ಪಾಕ್ ಸೈನಿಕರ ಬಳಿ ಆಯುಧವೂ ಇರಲಿಲ್ಲ: ನವಾಜ್ ಷರೀಫ್
ಇಸ್ಲಾಮಾಬಾದ್, ಅಕ್ಟೋಬರ್ 26: ಭಾರತದ ವಿರುದ್ಧ 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದ ವೇಳೆ ಪಾಕಿಸ್ತಾನದ ಸೈನಿಕ ಬಳಿ ಸರಿಯಾಗಿ ಶಸ್ತ್ರಾಸ್ತ್ರಗಳೂ ಇರಲಿಲ್ಲ ಎಂದು ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ. ಕೆಲವೇ ಜನರಲ್‌ಗಳು ಯುದ್ಧದ ಹಿಂದೆ ಇದ್ದರೇ ಹೊರತು ಸೇನೆಯಲ್ಲ ಎಂದು ಪಾಕಿಸ್ತಾನ್ ಮುಸ್ಲಿಂ ಲೀಗ್-ಎನ್ (ಪಿಎಂಎಲ್-ಎನ್) ಮುಖ್ಯಸ್ಥರೂ ಆಗಿರುವ ಷರೀಫ್ ಹೇಳಿದ್ದಾರೆ.
'ನಮ್ಮ ಧೈರ್ಯಶಾಲಿ ಯೋಧರ ಸಾವನ್ನು ಕಂಡ ಮತ್ತು ಜಗತ್ತಿನ ಮುಂದೆ ಪಾಕಿಸ್ತಾನ ತಲೆತಗ್ಗಿಸುವಂತೆ ಅವಮಾನಿಸಿದ ಕಾರ್ಗಿಲ್ ಯುದ್ಧವನ್ನು ಆರಂಭಿಸುವ ತೀರ್ಮಾನವನ್ನು ಸೇನೆ ತೆಗೆದುಕೊಂಡಿರಲಿಲ್ಲ, ಬದಲಾಗಿ ಕೆಲವೇ ಜನರಲ್‌ಗಳು ತೆಗೆದುಕೊಂಡಿದ್ದರು' ಎಂದು ಇಮ್ರಾನ್ ಖಾನ್ ಸರ್ಕಾರದ ವಿರುದ್ಧ 11 ವಿರೋಧಪಕ್ಷಗಳ ಮೈತ್ರಿಕೂಟ ನಡೆಸುತ್ತಿರುವ ಪಾಕಿಸ್ತಾನ್ ಡೆಮಾಕ್ರಟಿಕ್ ಚಳವಳಿಯ ಸಮಾವೇಶದಲ್ಲಿ ಷರೀಫ್ ತಿಳಿಸಿದ್ದಾರೆ.
'ಎಂತಹ ಸನ್ನಿವೇಶದಲ್ಲಿ ಅವರು ಸೇನೆಯನ್ನು ಮಾತ್ರವಲ್ಲ, ಇಡೀ ದೇಶ ಮತ್ತು ಸಮುದಾಯವನ್ನು ಯುದ್ಧಕ್ಕೆ ದೂಡಿದ್ದರೆಂದರೆ ಅದರಿಂದ ಏನನ್ನೂ ಸಾಧಿಸುವುದು ಸಾಧ್ಯವಿರಲಿಲ್ಲ. ಎತ್ತರದ ಪರ್ವತ ಪ್ರದೇಶಗಳಿಗೆ ನಮ್ಮ ಧೈರ್ಯಶಾಲಿ ಸೈನಿಕರನ್ನು ಕಳುಹಿಸಿದಾಗ ಅವರು ಬಳಲಿ ಹೋಗಿದ್ದರು, ಏಕೆಂದರೆ ಅವರಿಗೆ ಆಹಾರವೇ ಇರಲಿಲ್ಲ' ಎಂದು ಆರೋಪಿಸಿದ್ದಾರೆ.

'ಸೈನಿಕರ ಬಳಿ ಆಯುಧಗಳೂ ಇರಲಿಲ್ಲ. ಅವರು ತಮ್ಮ ಜೀವಗಳನ್ನು ತ್ಯಾಗ ಮಾಡಿದರು. ಆದರೆ ಅದರಿಂದ ದೇಶ ಅಥವಾ ಸಮುದಾಯ ಸಾಧಿಸಿದ್ದೇನು? ಎಂದು ಪ್ರಶ್ನಿಸಿದ್ದಾರೆ. ಪರ್ವೇಜ್ ಮುಷರಫ್ ಮತ್ತು ಅವರ ಸಹವರ್ತಿಗಳು ತಮ್ಮ ವೈಯಕ್ತಿಕ ಲಾಭಗಳಿಗಾಗಿ ಸೇನೆಯನ್ನು ಬಳಸಿಕೊಂಡು ಅವರನ್ನು ಅವಮಾನಿಸಿದರು ಎಂದು ಲಂಡನ್‌ನಿಂದ ಕಳುಹಿಸಿರುವ ವಿಡಿಯೋ ಭಾಷಣದಲ್ಲಿ ಹೇಳಿದ್ದಾರೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications