ಹಿಜಾಬ್ ವಿವಾದ: ಭಾರತದ ಅಧಿಕಾರಿಗಳಿಗೆ ಪಾಕ್ ಸಮನ್ಸ್
ಇಸ್ಲಾಮಾಬಾದ್, ಫೆಬ್ರವರಿ 10: ಹಿಜಾಬ್ ವಿವಾದದ ಕುರಿತು ಭಾರತದ ಅಧಿಕಾರಿಗಳಿಗೆ ಪಾಕಿಸ್ತಾನ ಸಮನ್ಸ್ ನೀಡಿದೆ.
ಭಾರತದಲ್ಲಿ ಮುಸಲ್ಮಾನರ ವಿರುದ್ಧ ಧಾರ್ಮಿಕ ಅಸಹಿಷ್ಣುತೆ, ತಾರತಮ್ಯ ಹಾಗೂ ನಕಾರಾತ್ಮಕ ನಿಲುವುಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಕುರಿತು ಪಾಕಿಸ್ತಾನ ಗಂಭೀರವಾಗಿ ಕಳವಳ ವ್ಯಕ್ತಪಡಿಸುತ್ತದೆ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಅಲ್ಲಿನ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಭಾರತ ಸರ್ಕಾರವು, ಮುಸಲ್ಮಾನ ಮಹಿಳೆಯರ ಭದ್ರತೆ, ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಲು, ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಗಂಭೀರ ಮತ್ತು ಸೂಕ್ತ ಕ್ರಮಗಳನ್ನುಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಮಾಹಿತಿ ಮತ್ತ ಪ್ರಸಾರ ಖಾತೆ ಸಚಿವ ಫವಾದ್ ಹುಸೇನ್ , ಭಾರತದಲ್ಲಿನ ಬೆಳವಣಿಗೆಗಳು ಆತಂಕಕಾರಿಯಾಗಿವೆ, ಯಾವುದೇ ಇತರೆ ಉಡುಪುಗಳಂತೆ ಹಿಜಾಬ್ ಧರಿಸುವುದೂ ವೈಯಕ್ತಿಕ ಆಯ್ಕೆಯಾಗಿದೆ, ನಾಗರಿಕರಿಗೆ ಮುಕ್ತ ಅವಕಾಶ ನೀಡಬೇಕು ಎಂದು ಹೇಳಿದ್ದರು.
ಕರ್ನಾಟಕದಲ್ಲಿ ನಡೆದ ಹಿಜಾಬ್ ಗದ್ದಲಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಗು ತೂರಿಸಿದ್ದು, ಭಾರತೀಯ ವಿದೇಶಾಂಗ ಕಾರ್ಯದರ್ಶಿಯನ್ನು ಕರೆಸಿ ತನ್ನ ಕಳವಳವನ್ನು ವ್ಯಕ್ತ ಪಡಿಸಿದೆ. ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾರತದ ಉಸ್ತುವಾರಿಯನ್ನು ಕರೆಸಿ ವಿವರಣೆ ಪಡೆದಿದೆ.
ಭಾರತದಲ್ಲಿ ಮುಸ್ಲಿಮರ ವಿರುದ್ಧ ಧಾರ್ಮಿಕ ಅಸಹಿಷ್ಣುತೆ, ನಕಾರಾತ್ಮಕ ಪ್ರಚಾರ, ಕಳಂಕ ಮತ್ತು ತಾರತಮ್ಯ ಅನುಸರಿಸಲಾಗುತ್ತಿದೆ ಎಂದು ತನ್ನ ಕಳವಳವನ್ನು ವ್ಯಕ್ತ ಪಡಿಸಿದೆ. ಈ ಕುರಿತು ವಿದೇಶಾಂಗ ಕಚೇರಿ ನಿನ್ನೆ ತಡವಾಗಿ ಹೇಳಿಕೆ ಬಿಡುಗಡೆ ಮಾಡಿದೆ.
ಮುಸ್ಲಿಂ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವ ಅಪರಾಧಿಗಳನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಕ್ರಮ ಜರುಗಿಸಬೇಕು ಎಂದು ಪಾಕಿಸ್ತಾನ ಒತ್ತಾಯಿಸಿದೆ.
ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ, ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸುವುದು ಮಾನವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಫವಾದ್ ಹುಸೇನ್, ಭಾರತದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಆತಂಕಕಾರಿಯಾಗಿವೆ. ಮುಸ್ಲಿಂ ಮಹಿಳೆಯರಿಗೆ ಇತರ ಉಡುಗೆಗಳಂತೆ ಹಿಜಾಬ್ ಧರಿಸುವುದು ವೈಯಕ್ತಿಕ ಆಯ್ಕೆಯಾಗಿದೆ. ಈ ವಿಷಯದಲ್ಲಿ ಅವರಿಗೆ ಮುಕ್ತ ಆಯ್ಕೆಯನ್ನು ನೀಡಬೇಕು ಎಂದು ಹೇಳಿದೆ.
ಅಲ್ಪಸಂಖ್ಯಾತರಿಗೆ ಅಪರಾಧ ಮತ್ತು ಕ್ರೌರ್ಯದ ಕಾಡಾಗಿರುವ ಪಾಕಿಸ್ತಾನ ಭಾರತಕ್ಕೆ ಸಹಿಷ್ಣುತೆ ಮತ್ತು ಜಾತ್ಯತೀತತೆಯ ಬಗ್ಗೆ ಬೋಧಿಸುತ್ತಿದೆ. ನಮ್ಮ ದೇಶ ಅಂತರ್ಗತ ಸಂಸ್ಕೃತಿಯ ಬೀಡು ಎಂದು ನಖ್ವಿ ವಾಗ್ದಾಳಿ ನಡೆಸಿದ್ದಾರೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಕ್ಕುಗಳನ್ನು ನಿರ್ಲಜ್ಜವಾಗಿ ತುಳಿಯಲಾಗುತ್ತಿದೆ. ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರ ಸಮಾನ ಹಕ್ಕುಗಳು, ಘನತೆ ಮತ್ತು ಸಮೃದ್ಧಿಯು ಸಹಿಷ್ಣುತೆ, ಸಾಮರಸ್ಯ ಮತ್ತು ಒಳಗೊಳ್ಳುವಿಕೆಗೆ ಭಾರತದ ಬದ್ಧತೆಯ ಒಂದು ಭಾಗವಾಗಿದೆ ಎಂದು ಅವರು ಸುದ್ದಿಗಾರರಿಗೆ ಹೇಳಿಕೆ ನೀಡಿದ್ದಾರೆ.












Click it and Unblock the Notifications