ಅಂತಾರಾಷ್ಟ್ರೀಯ ಕೋರ್ಟ್ ಗೆ ಸಡ್ಡು ಹೊಡೆಯಲು ಪಾಕ್ ಸಜ್ಜು

Posted By:
Subscribe to Oneindia Kannada

ಇಸ್ಲಾಮಾಬಾದ್, ಮೇ 13: ಗೂಢಚರ್ಯೆ ಆಪಾದನೆ ಮೇರೆಗೆ ಪಾಕಿಸ್ತಾನದಲ್ಲಿ ಬಂಧಿತನಾಗಿರುವ ಭಾರತದ ನೌಕಾಪಡೆಯ ಅಧಿಕಾರಿ ಕುಲಭೂಷಣ್ ಜಾಧವ್ ಬಗ್ಗೆ ಇತ್ತೀಚೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿದ್ದ ತೀರ್ಪಿನ ವಿರುದ್ಧ ಪಾಕಿಸ್ತಾನ ಮತ್ತೊಂದು ಬಾಣ ಹೂಡಲು ತಯಾರಾಗಿದೆ.

ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ಸೇನಾ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆಗೆ ಇತ್ತೀಚೆಗೆ ತಡೆಯಾಜ್ಞೆ ನೀಡಿದ್ದ ಅಂತಾರಾಷ್ಟ್ರೀಯ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿರುವ ಪಾಕಿಸ್ತಾನ, ಪಾಕಿಸ್ತಾನವು ನ್ಯಾಯಾಲಯದ ಕಾರ್ಯವ್ಯಾಪ್ತಿಗೆ ಬರುವುದಿಲ್ಲ ಎಂಬ ವಾದವನ್ನು ಮುಂದಿಡಲು ನಿರ್ಧರಿಸಿದೆ.[ಕುಲಭೂಷಣ್ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ಕೋರ್ಟ್ ತಡೆಯಾಜ್ಞೆ]

Pakistan to challenge International Court of Justice’s jurisdiction in Kulbhushan Jadhav case

ಕುಲಭೂಷಣ್ ಜಾಧವ್ ಬಿಡುಗಡೆಗೆ ಪ್ರಯತ್ನಿಸುತ್ತಿರುವ ಭಾರತ ಸರ್ಕಾರದ ಮನವಿಗೆ ಸ್ಪಂದಿಸಿದ್ದ ಅಂತಾರಾಷ್ಟ್ರೀಯ ನ್ಯಾಯಾಲಯ ಈ ತಡೆಯಾಜ್ಞೆ ನೀಡಿತ್ತು. ಇದು ಸಹಜವಾಗಿ ಪಾಕಿಸ್ತಾನವನ್ನು ಕೆರಳಿಸಿದೆ.[ಪಾಕಿಸ್ತಾನ ಮಿಲಿಟರಿ ಕೋರ್ಟ್ ನಲ್ಲಿ ಕುಲಭೂಷಣ್ ಜಾಧವ್ ಗೆ ಮರಣದಂಡನೆ]

ಹಾಗಾಗಿ, ಅದು ಈಗ ಹೊಸ ತಂತ್ರಗಳನ್ನು ಹುಡುಕುತ್ತಿದೆ. ಪ್ರಕರಣದ ತೀರ್ಪನ್ನು ಮೇ 15ರಂದು ಪ್ರಕಟಿಸುವುದಾಗಿ ಅಂತಾರಾಷ್ಟ್ರೀಯ ನ್ಯಾಯಾಲಯ ತಿಳಿಸಿದ್ದು, ಪಾಕಿಸ್ತಾನ ಸರ್ಕಾರದ ಅಟಾರ್ನಿ ಜನರಲ್ ಅವರು ಅಂದಿನ ವಿಚಾರಣೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Pakistan plans to argue the International Court of Justice has no jurisdiction in the case of Kulbhushan Jadhav case. Jadhav who has been arrested by Pakistan authorities, now facing death penalty for his alleged purported activities.
Please Wait while comments are loading...