ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ ಪರಿಪೂರ್ಣ ಪ್ರಾಂತ್ಯದ ಸ್ಥಾನಮಾನ ನೀಡಲು ಪಾಕ್ ತೀರ್ಮಾನ

ಇಸ್ಲಾಮಾಬಾದ್, ಸೆಪ್ಟೆಂಬರ್ 17: ಪಾಕಿಸ್ತಾನವು ಗಿಲ್ಗಿಟ್ ಮತ್ತು ಬಾಲ್ಟಿಸ್ತಾನಕ್ಕೆ ಪರಿಪೂರ್ಣ ಪ್ರಾಂತ್ಯದ ಸ್ಥಾನಮಾನ ನೀಡಲು ತೀರ್ಮಾನಿಸಿದೆ.

ಗಿಲ್ಗಿಟ್ - ಬಾಲ್ಟಿಸ್ತಾನ್ ಪ್ರದೇಶವನ್ನು ಸಂವಿಧಾನಾತ್ಮಕವಾಗಿ ಪರಿಪೂರ್ಣ ಪ್ರಾಂತ್ಯ'ದ ಸ್ಥಾನಮಾನ ನೀಡಲು ಪಾಕಿಸ್ತಾನ ತೀರ್ಮಾನಿಸಿದೆ ಎಂಬ ಸುದ್ದಿ ಕೇಳಿಬಂದಿದೆ.

ಪರಿಪೂರ್ಣ ಪ್ರಾಂತ್ಯದ ಸ್ಥಾನಪಡೆಯಲಿರುವ ಗಿಲ್ಗಿಟ್‌-ಬಾಲ್ಟಿಸ್ತಾನ್ ಪ್ರದೇಶವು ರಾಷ್ಟ್ರೀಯ ಅಸೆಂಬ್ಲಿ ಮತ್ತು ಸೆನೆಟ್ ಸೇರಿದಂತೆ ಎಲ್ಲ ರೀತಿಯ ಸಾಂವಿಧಾನಿಕ ಸಂಸ್ಥೆಗಳ ಪ್ರಾತಿನಿಧ್ಯವನ್ನು ಪಡೆಯಲಿದೆ ಎಂದು ಗಂಡಾಪುರ್ ಹೇಳಿದ್ದಾರೆ.

Pakistan To Elevate Gilgit-Baltistan To Full-Fledged Province

ಎಕ್ಸ್‌ಪ್ರೆಸ್‌ ಟ್ರಿಬ್ಯುನ್ ಪತ್ರಿಕೆಯಲ್ಲಿ ಉಲ್ಲೇಖಿಸಿರುವಂತೆ 'ಪ್ರಧಾನಿ ಇಮ್ರಾನ್‌ ಖಾನ್‌ ಶೀಘ್ರದಲ್ಲೇ ಗಿಲ್ಗಿಟ್‌-ಬಾಲ್ಟಿಸ್ತಾನ್ ಪ್ರದೇಶಕ್ಕೆ ಭೇಟಿ ನೀಡಿ, ಸಂವಿಧಾನಾತ್ಮಕ ಹಕ್ಕುಗಳ ಪ್ರಕಾರವೇ ಆ ಪ್ರದೇಶವನ್ನು ಪರಿಪೂರ್ಣ ಪ್ರಾಂತ್ಯದ ಸ್ಥಾನಮಾನ ನೀಡುವುದಾಗಿ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಕಾಶ್ಮೀರ್ ಮತ್ತು ಗಿಲ್ಗಿಟ್‌-ಬಾಲ್ಟಿಸ್ತಾನ ವ್ಯವಹಾರಗಳ ಸಚಿವ ಅಲಿ ಅಮಿನ್ ಗಂಡಾಪುರ್‌ ತಿಳಿಸಿದ್ದಾರೆ.

ಈಗ 'ಗಿಲ್ಗಿಟ್-ಬಾಲ್ಟಿಸ್ತಾನ್‌ ಪ್ರದೇಶಗಳನ್ನು ಪಾಕಿಸ್ತಾನ ಅಕ್ರಮವಾಗಿ ಅತಿಕ್ರಮಿಸಿಕೊಂಡಿದೆ. ಈ ಮೊದಲು ಗಿಲ್ಗಿಟ್-ಬಾಲ್ಟಿಸ್ತಾನ ಸೇರಿದಂತೆ ಇಡೀ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿದ್ದು, ಇಲ್ಲಿ ಯಾವುದೇ ರೀತಿಯ ಕಾನೂನು ಬದಲಾವಣೆಯಂತಹ ಪ್ರಯತ್ನಗಳಳನ್ನು ನಡೆಸುವಂತಿಲ್ಲ ಎಂದು ಭಾರತ, ಪಾಕಿಸ್ತಾನಕ್ಕೆ ಹೇಳಿತ್ತು.

ಪಾಕಿಸ್ತಾನ ಸರ್ಕಾರ ಎಲ್ಲ ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ ಗಿಲ್ಗಿಟ್- ಬಾಲ್ಟಿಸ್ತಾನ ಪ್ರಾಂತ್ಯಕ್ಕೆ ತಾತ್ವಿಕವಾಗಿ ಸಾಂವಿಧಾನಿಕ ಹಕ್ಕಗಳನ್ನು ನೀಡಲು ನಿರ್ಧಿರಿಸಿದೆ' ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+