ಬೂದು ಪಟ್ಟಿಯಲ್ಲಿಯೇ ಉಳಿಯಲಿದೆ ಪಾಕಿಸ್ತಾನ

ಗ್ಲೋಬಲ್ ವಾಚ್‌ ಡಾಗ್ ಸಿದ್ಧ ಪಡಿಸಿರುವ ಹಣಕಾಸು ಕ್ರಿಯಾ ಯೋಜನೆಯ(ಎಫ್‌ಎಟಿಎಫ್‌) 27 ಅಂಶಗಳಲ್ಲಿ ಆರು ಅಂಶಗಳನ್ನು ಅನುಸರಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಬೂದು ಪಟ್ಟಿಯಲ್ಲೇ ಉಳಿಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎಫ್‌ಎಟಿಎಫ್‌ ಪಾಕಿಸ್ತಾನವನ್ನು ಜೂನ್ 2018ರಲ್ಲಿ ಬೂದು ಪಟ್ಟಿಗೆ ಸೇರಿಸಿತ್ತು. 2019ರೊಳಗೆ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದು ಮತ್ತು ಅಕ್ರಮ ಹಣ ವರ್ಗಾವಣೆಯನ್ನು ನಿಯಂತ್ರಿಸುವಂತೆ ಕೇಳಿತ್ತು.

ಆದರೆ, ಕೋವಿಡ್‌ 19 ಸಾಂಕ್ರಾಮಿಕ ರೋಗದ ಕಾರಣದಿಂದ ಪಾಕಿಸ್ತಾನಕ್ಕೆ ನೀಡಿದ್ದ ಗಡುವನ್ನು ವಿಸ್ತರಿಸಿತ್ತು. ಮುಂದಿನ ವರ್ಷದ ಜೂನ್ ವೇಳೆಗೆ ಎಫ್‌ಎಟಿಎಫ್‌ನ (FATF) ಗ್ರೇ ಪಟ್ಟಿಯಿಂದ ನಿರ್ಗಮಿಸುವಲ್ಲಿ ಪಾಕಿಸ್ತಾನ ಯಶಸ್ವಿಯಾಗಲಿದೆ ಎಂದು ಪಾಕಿಸ್ತಾನದ ರಾಜತಾಂತ್ರಿಕ ಕಚೇರಿಯ ಮೂಲಗಳನ್ನು ಉಲ್ಲೇಖಿಸಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

Pakistan Unlikely To Exit Terror Financing Grey List

ಅದೇ ವರದಿಯಲ್ಲಿರುವಂತೆ, ಪಾಕಿಸ್ತಾನವು ಎಫ್‌ಎಟಿಎಫ್ ಗ್ರೇ ಪಟ್ಟಿಯಿಂದ ಹೊರಬರುವ ಸಾಧ್ಯತೆ ಕಡಿಮೆ ಎಂದೂ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ ಸಿದ್ಧ ಪಡಿಸಿರುವ 27 ಅಂಶಗಳಲ್ಲಿ ಆರು ಅಂಶಗಳನ್ನು ಅನುಸರಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಫತ್ಫ್ ನ ಗ್ರೇ ಪಟ್ಟಿಯಲ್ಲೇ ಉಳಿಯಲಿದೆ.

ಇಂದಿನಿಂದ ಅ.23ರವರೆಗೆ 'ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದು ಮತ್ತು ಅಕ್ರಮ ಹಣ ವರ್ಗಾವಣೆ' ಕುರಿತು ಪ್ಯಾರಿಸ್‌ ಮೂಲದ ಗ್ಲೋಬಲ್ ವಾಚ್‌ಡಾಗ್‌ ಸಂಸ್ಥೆ ಆಯೋಜಿಸಿರುವ ವರ್ಚುವಲ್ ಪ್ಲೀನರಿ ಅಧಿವೇಶದಲ್ಲಿ, ಈ 27 ಅಂಶಗಳ ಕ್ರಿಯಾ ಯೋಜನೆಯಲ್ಲಿ ಪಾಕಿಸ್ತಾನ ಯಾವ ಸ್ಥಾನದಲ್ಲಿದೆ ಎಂದು ಪ್ರಗತಿ ಪರಿಶೀಲಿಸಲಾಗುತ್ತದೆ.

ಬೂದು ಪಟ್ಟಿಯಿಂದ ಹೊರಬರಲು ಪಾಕಿಸ್ತಾನಕ್ಕೆ ನಿಷೇಧಿತ 88 ಭಯೋತ್ಪಾದಕ ಗುಂಪುಗಳು ಮತ್ತು ಅವರ ನಾಯಕರ ಮೇಲೆ ಆರ್ಥಿಕ ನಿರ್ಬಂಧಗಳನ್ನು ವಿಧಿಸಲು ಸೂಚಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+