ನರೇಂದ್ರ ಮೋದಿ ಬಗ್ಗೆ ಪಾಕಿಸ್ತಾನದ ಪ್ರಭಾವಿ ನಾಯಕನ ಅಚ್ಚರಿ ಹೇಳಿಕೆ !
ಭಾರತ ಹಾಗೂ ಪಾಕಿಸ್ತಾನ ಸಂಬಂಧ ಸುಧಾರಿಸುವ ಲಕ್ಷಣಗಳು ಕಾಣಿಸುತ್ತಿವೆ. ಪಾಕಿಸ್ತಾನ ಇತ್ತೀಚಿನ ದಿನಗಳಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವುದು ಭಾರತವು ರಾಜತಾಂತ್ರಿಕವಾಗಿ (ಪಾಕ್‌ನೊಂದಿಗೆ ಮಾತುಕತೆ) ಮುಂದುವರಿಯಲು ಕಾರಣವಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಪಾಕಿಸ್ತಾನದ ಪ್ರಭಾವಿ ನಾಯಕರೊಬ್ಬರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಪುಲ್ವಾಮಾ ದಾಳಿಯ ನಂತರ ಭಾತರ ಹಾಗೂ ಪಾಕಿಸ್ತಾನದ ನಡುವಿನ ಮಾತುಕತೆ ಸಂಪೂರ್ಣವಾಗಿ ನಿಂತೇ ಹೋಗಿತ್ತು. ಭಯೋತ್ಪಾದನೆ ಹಾಗೂ ಉಗ್ರರ ದಾಳಿಗಳನ್ನು ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಖಡಕ್ ಆಗಿ ಹೇಳಿತ್ತು. ಇದೀಗ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಈ ನಡುವೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಪಾಕಿಸ್ತಾನಿಗರು ಹಾಗೂ ಭಾರತೀಯರು ಅಚ್ಚರಿಪಡುವಂತಹ ಹೇಳಿಕೆ ಕೊಟ್ಟಿದ್ದಾರೆ.

ಮೋದಿ ಬಂದಿದ್ರೆ ಖುಷಿಯಾಗ್ತಿದ್ವಿ: ಭಾರತ ಹಾಗೂ ಪಾಕಿಸ್ತಾನದ ಸಂಬಂಧ ಹಾಗೂ ವಿವಿಧ ವಿಚಾರಗಳ ಬಗ್ಗೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಮಾತನಾಡಿದ್ದಾರೆ. ಈ ಹಿಂದೆ ನವಾಜ್ ಷರೀಫ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಡುವೆ ಉತ್ತಮ ಸಂಬಂಧ ಇತ್ತು. ಅಲ್ಲದೇ ಈಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನವಾಜ್ ಅವರು ಒಳ್ಳೆಯ ಅಭಿಪ್ರಾಯವನ್ನು ಹೊಂದಿದ್ದು. ಭಾರತ ಹಾಗೂ ಪಾಕಿಸ್ತಾನ ಹಳೆಯದನ್ನೆಲ್ಲ ಮರೆತು ಮತ್ತೆ ಒಂದಾಗಬೇಕು ಎಂಭ ಆಸೆಪಟ್ಟಿದ್ದಾರೆ.
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ ಇದು ಖುಷಿಯ ವಿಚಾರ. ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರೆ, ನಾವು ಖುಷಿಯಾಗ್ತಿದ್ವಿ ಎಂದು ಹೇಳಿದ್ದಾರೆ. ಈ ಮೂಲಕ ಮೋದಿ ಪಾಕಿಸ್ತಾನಕ್ಕೆ ಬರಬೇಕು ಎನ್ನುವ ಇಚ್ಛೆಯನ್ನು ಹೊರ ಹಾಕಿದ್ದಾರೆ.
ಮುಂದುವರಿದು ಭಾರತ ಹಾಗೂ ಪಾಕಿಸ್ತಾನ ದೇಶಗಳು ಈ ಹಿಂದೆ ನಡೆದಿರುವ ಕಹಿ ಘಟನೆಗಳನ್ನು ಮರೆತು ಭವಿಷ್ಯದ ಬಗ್ಗೆ ವಿಚಾರ ಮಾಡಬೇಕು ಎಂದು ನವಾಜ್ ಹೇಳಿದ್ದಾರೆ. ಎರಡೂ ರಾಷ್ಟ್ರಗಳು ಈಗಾಗಲೇ ಸುದೀರ್ಘ 75 ವರ್ಷಗಳನ್ನು ಹಾಳು ಮಾಡಿವೆ. ಮುಂದಿನ 75 ವರ್ಷಗಳಲ್ಲಾರೂ ಇದೇ ಮುಂದುವರಿಯಬಾರದು. ಸ್ನೇಹಕ್ಕೆ ಮಿಗಿಲಾಗಿರುವುದು ಯಾವುದೂ ಇಲ್ಲ ಎಂದಿದ್ದಾರೆ.
2015ರಲ್ಲಿ ಪಾಕಿಸ್ತಾನಕ್ಕೆ ದಿಢೀರ್ ಭೇಟಿ ನೀಡಿದ್ದ ಮೋದಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ನವಾಜ್ ಷರಿಫ್ ಅವರ ನಡುವೆ ಉತ್ತಮ ಸಂಬಂಧವಿದೆ. ಮೊದಲ ಬಾರಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ನರೇಂದ್ರ ಮೋದಿ ಅವರು ಏಕಾಏಕಿ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಉಭಯ ನಾಯಕರ ನಡುವೆ ಉತ್ತಮ ಚರ್ಚೆಯಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಏಕಾಏಕಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಆದರೆ, ಪಾಕಿಸ್ತಾನದೊಂದಿಗೆ ಮಾತುಕತೆ ಮುಂದುವರಿದಿರಲಿಲ್ಲ.












Click it and Unblock the Notifications