Peshawar Mosque Blast: ಪೇಶಾವರ ಮಸೀದಿಯಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡಾದ ತಲೆ ಪತ್ತೆ!
ಪಾಕಿಸ್ತಾನದ ಮಸೀದಿ ಸ್ಫೋಟದ ಸ್ಥಳದಲ್ಲಿ ಆತ್ಮಹತ್ಯಾ ಬಾಂಬರ್‌ನ ತುಂಡಾದ ತಲೆ ಪತ್ತೆಯಾಗಿದೆ.
ಪೇಶಾವರ ಜನವರಿ 31: ಪಾಕಿಸ್ತಾನದ ಮಸೀದಿ ಸ್ಫೋಟದ ಸ್ಥಳದಲ್ಲಿ ಆತ್ಮಹತ್ಯಾ ಬಾಂಬರ್‌ನ ತುಂಡಾದ ತಲೆ ಪತ್ತೆಯಾಗಿದೆ. ಪೇಶಾವರ ನಗರದಲ್ಲಿ ಸೋಮವಾರ ಮಧ್ಯಾಹ್ನ ಪ್ರಾರ್ಥನೆಯ ವೇಳೆ ಆತ್ಮಾಹುತಿ ಬಾಂಬರ್ ಸ್ಪೋಟಕವನ್ನು ಸ್ಪೋಟಿಸಿದ್ದನು. ಶಂಕಿತ ಉಗ್ರನ ತಲೆಯನ್ನು ರಕ್ಷಣಾ ಅಧಿಕಾರಿಗಳು ಇಂದು ವಶಪಡಿಸಿಕೊಂಡಿದ್ದಾರೆ.
ಬಾಂಬ್ ಸ್ಫೋಟದಿಂದ ಸಾವಿನ ಸಂಖ್ಯೆ 93ಕ್ಕೆ ಏರಿಕೆಯಾಗಿದೆ. ಇದರಿಂದ 221 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಪೋಟದ ತೀವ್ರತೆಗೆ ದೇಹಗಳು ಛಿದ್ರಗೊಂಡಿದ್ದು ಅವಶೇಷಗಳಿಂದ ದೇಹದ ಭಾಗಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ಇಂದಿಗೂ ಮುಂದುವರೆದಿದೆ. ಸೋಮವಾರ ಮಧ್ಯಾಹ್ನ 1.40ರ ಸುಮಾರಿಗೆ ಹೆಚ್ಚು ಜನ ಪೊಲೀಸರು, ಸೇನೆ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳನ್ನು ಒಳಗೊಂಡಂತೆ ಭಕ್ತರು ಜುಹ್ರ್ (ಮಧ್ಯಾಹ್ನ) ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಪ್ರಬಲ ಸ್ಫೋಟ ಸಂಭವಿಸಿದೆ.
ಮುಂದಿನ ಸಾಲಿನಲ್ಲಿದ್ದ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, ಇದರಿಂದ ಮೇಲ್ಛಾವಣಿಯು ಭಕ್ತರ ಮೇಲೆ ಕುಸಿದಿದೆ. ಕ್ಯಾಪಿಟಲ್ ಸಿಟಿ ಪೊಲೀಸ್ ಅಧಿಕಾರಿ (ಸಿಸಿಪಿಒ) ಪೇಶಾವರ ಮೊಹಮ್ಮದ್ ಐಜಾಜ್ ಖಾನ್ ಜಿಯೋ ಟಿವಿಗೆ ಸ್ಪೋಟವು ಆತ್ಮಾಹುತಿ ದಾಳಿಯಂತೆ ತೋರುತ್ತಿದೆ. ಪೇಶಾವರದ ಸ್ಥಳದಲ್ಲಿ ಶಂಕಿತ ಬಾಂಬರ್‌ನ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ಸ್ಫೋಟದ ನಿಖರ ಸ್ವರೂಪ ತಿಳಿಯಲಿದೆ ಎಂದು ಖಾನ್ ತಿಳಿಸಿದ್ದಾರೆ.

ದಾಳಿಯ ನಂತರ ಖೈಬರ್ ಪಖ್ತುಂಖ್ವಾದ ಉಸ್ತುವಾರಿ ಮುಖ್ಯಮಂತ್ರಿ ಮುಹಮ್ಮದ್ ಅಜಮ್ ಖಾನ್ ಮಂಗಳವಾರ ಪ್ರಾಂತ್ಯದಲ್ಲಿ ಶೋಕಾಚರಣೆಯ ದಿನವನ್ನು ಘೋಷಿಸಿದರು. ಪಾಕಿಸ್ತಾನಿ ತಾಲಿಬಾನ್ ಎಂದು ಕರೆಯಲ್ಪಡುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಆತ್ಮಾಹುತಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇದು ಕಳೆದ ಆಗಸ್ಟ್‌ನಲ್ಲಿ ಅಫ್ಘಾನಿಸ್ತಾನದಲ್ಲಿ ಕೊಲ್ಲಲ್ಪಟ್ಟ ಟಿಟಿಪಿ ಕಮಾಂಡರ್ ಉಮರ್ ಖಾಲಿದ್ ಖುರಾಸಾನಿ ಅವರ ಪ್ರತೀಕಾರದ ದಾಳಿಯ ಭಾಗವಾಗಿದೆ ಎಂದು ತಿಳಿದು ಬಂದಿದೆ.
2007 ರಲ್ಲಿ ಹಲವಾರು ಭಯೋತ್ಪಾದಕ ಸಂಘಟನೆಗಳ ಗುಂಪಿನಂತೆ ಸ್ಥಾಪಿಸಲಾದ TTP ದೇಶಾದ್ಯಂತ ದಾಳಿಗಳನ್ನು ನಡೆಸಲು ತನ್ನ ಭಯೋತ್ಪಾದಕರಿಗೆ ಆದೇಶ ನೀಡಿತು. ಅಲ್-ಖೈದಾಗೆ ನಿಕಟವಾಗಿದೆ ಎಂದು ನಂಬಲಾದ ಗುಂಪು, 2009 ರಲ್ಲಿ ಸೇನಾ ಪ್ರಧಾನ ಕಛೇರಿಯ ಮೇಲಿನ ದಾಳಿ, ಸೇನಾ ನೆಲೆಗಳ ಮೇಲಿನ ದಾಳಿ ಮತ್ತು 2008 ರಲ್ಲಿ ಇಸ್ಲಾಮಾಬಾದ್‌ನ ಮ್ಯಾರಿಯಟ್ ಹೋಟೆಲ್‌ನ ಬಾಂಬ್ ದಾಳಿ ಸೇರಿದಂತೆ ಪಾಕಿಸ್ತಾನದಾದ್ಯಂತ ಹಲವಾರು ಮಾರಣಾಂತಿಕ ದಾಳಿಗಳಿಗೆ ಆರೋಪಿಸಲ್ಪಟ್ಟಿದೆ.

2014 ರಲ್ಲಿ, ಪಾಕಿಸ್ತಾನಿ ತಾಲಿಬಾನ್ ವಾಯುವ್ಯ ನಗರದ ಪೇಶಾವರ್‌ನಲ್ಲಿರುವ ಆರ್ಮಿ ಪಬ್ಲಿಕ್ ಸ್ಕೂಲ್ (ಎಪಿಎಸ್) ಮೇಲೆ ದಾಳಿ ಮಾಡಿ 131 ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ 150 ಜನರನ್ನು ಕೊಂದಿತು. ಈ ದಾಳಿಯು ಪ್ರಪಂಚದಾದ್ಯಂತ ಆಘಾತ ತಂದಿವೆ ಮತ್ತು ವ್ಯಾಪಕ ಖಂಡನೆಗೆ ಒಳಗಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications