• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೀಗೊಂದು ಫೋನ್ ಕಾಲ್: ಭಾರತ-ನೆದರ್ಲೆಂಡ್ ಪ್ರಧಾನಿಗಳ ರಾಜತಾಂತ್ರಿಕ ಮಾತುಕತೆ

|
Google Oneindia Kannada News

ನವದೆಹಲಿ, ಜುಲೈ 13: ಭಾರತ ಮತ್ತು ನೆದರ್ಲೆಂಡ್ ನಡುವಿನ ಕಾರ್ಯತಂತ್ರ ಮತ್ತು ಬಾಂಧವ್ಯದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಲ್ಲಿನ ಪ್ರಧಾನಿ ಮಾರ್ಕ್ ರುಟ್ಟೆ ಪರಸ್ಪರ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.

ಬುಧವಾರ ಉಭಯ ರಾಷ್ಟ್ರಗಳ ನಾಯಕರು ಎರಡೂ ರಾಷ್ಟ್ರಗಳ ನಡುವಿನ ಉತ್ತಮ ಸಂಬಂಧ ವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ನೀರಿನ ವಿಷಯದಲ್ಲಿ ಸಹಭಾಗಿತ್ವ, ಕೃಷಿಯ ಪ್ರಮುಖ ಕ್ಷೇತ್ರದಲ್ಲಿ ಸಹಕಾರ, ಹೈಟೆಕ್ ಮತ್ತು ಉದಯೋನ್ಮುಖ ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರದ ಸಾಮರ್ಥ್ಯದ ಕುರಿತು ಚರ್ಚಿಸಿದ್ದಾರೆ.

ಉಭಯ ನಾಯಕರು ಭಾರತ-ಯುರೋಪಿಯನ್ ಒಕ್ಕೂಟದ ಸಂಬಂಧಗಳು, ಇಂಡೋ-ಪೆಸಿಫಿಕ್‌ನಲ್ಲಿ ಒಮ್ಮುಖ ಮತ್ತು ಸಹಕಾರ ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ-ನೆದರ್ಲೆಂಡ್ ನಡುವಿನ ಸಂಬಂಧಕ್ಕೆ ವೇಗ: ಜಾಗತಿಕ ಮಟ್ಟದಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ನೆದರ್ಲೆಂಡ್ ನಡುವಿನ ಸಂಬಂಧವನ್ನು ವೃದ್ಧಿಸಿಕೊಳ್ಳಲಾಗುತ್ತಿದೆ. ಈ ಹಂತದಲ್ಲಿ ನಿಯಮಿತ ಉನ್ನತ ಮಟ್ಟದ ಭೇಟಿ ಮತ್ತು ಸಂವಾದಗಳು ಎರಡು ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬೆಸೆಯುತ್ತಿವೆ.

ಕಳೆದ 2021ರ ಏಪ್ರಿಲ್ 9ರಂದು ಉಭಯ ರಾಷ್ಟ್ರದ ಪ್ರಧಾನಿಗಳು ವರ್ಚುವಲ್ ಶೃಂಗಸಭೆಯನ್ನು ನಡೆಸಿದ್ದರು. ಈ ವೇಳೆ ವರ್ಚುವಲ್ ಶೃಂಗಸಭೆಯಲ್ಲಿ ನೆದರ್ಲೆಂಡ್‌ನೊಂದಿಗೆ 'ನೀರಿನ ಮೇಲಿನ ಕಾರ್ಯತಂತ್ರದ ಪಾಲುದಾರಿಕೆ'ಯನ್ನು ಪ್ರಾರಂಭಿಸಲಾಗಿತ್ತು.

ಪ್ರಸಕ್ತ ವರ್ಷದಲ್ಲಿ ಭಾರತವು 75ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಆಚರಿಸುತ್ತಿದ್ದು ಈ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮತ್ತಷ್ಟು ಬಲಗೊಳಿಸಬೇಕಿದೆ.

English summary
What are the discussed in Phone call between Prime Minister Narendra Modi and Netherlands Prime Minister H.E Mark Rutte.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X