ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯಿಂದ ಪ್ರತಿಷ್ಠಿತ 'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿ

ನ್ಯೂಯಾರ್ಕ್, ಸೆಪ್ಟೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಪರಿಸರಕ್ಕೆ ಸಂಬಂಧಿಸಿದ ಅತ್ಯುನ್ನತ ಪ್ರಶಸ್ತಿಯಾದ 'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿಗೆ ವಿಶ್ವಸಂಸ್ಥೆ ಆಯ್ಕೆ ಮಾಡಿದೆ.

ಮೋದಿ ಅವರ ಹೆಸರಿನೊಂದಿಗೆ, ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುಲ್ ಮ್ಯಾಕ್ರೋನ್ ಅವರ ಹೆಸರನ್ನೂ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪರಿಸರ ಜಾಗೃತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಹತ್ತು ಹಲವು ಯೋಜನೆಗಳು ಮತ್ತು 2010 ರ ಹೊತ್ತಿಗೆ ಭಾರತದಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ಉಪಯೋಗವನ್ನು ನಿಲ್ಲಿಸುವುದಕ್ಕೆ ನಿರ್ಧರಿಸಿರುವ ಅವರ ನಡೆಯನ್ನು ವಿಶ್ವಸಂಸ್ಥೆ ಶ್ಲಾಘಿಸಿದೆ.

PM Modi conferred with Champion of the Earth award

ಸೌರಶಕ್ತಿ ಬಳಕೆ ಮತ್ತು ಪರಿಸರ ಕಾಳಜಿಗೆ ಸಂಬಂಧಿಸಿದಂತೆ ಭಾರತ ಮತ್ತು ಫ್ರಾನ್ಸ್ ದೇಶಗಳು ಒತ್ತು ನೀಡುತ್ತಿರುವುದನ್ನು ಮನಗಂಡ ವಿಶ್ವಸಂಸ್ಥೆ ಈ ಪ್ರಶಸ್ತಿಗೆ ಮೋದಿ ಮತ್ತು ಮ್ಯಾರ್ಕೋನ್ ಅವರನ್ನು ಆರಿಸಿದೆ.

ಸುಸ್ಥಿರ ಶಕ್ತಿಗಳ ಬಳಕೆಗಾಗಿ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 'ಎಂಟ್ರಪ್ರಿನರಿಯಲ್ ವಿಶನ್' ಪ್ರಶಸ್ತಿ ಲಭಿಸಿದೆ.

ಈ ಪ್ರಶಸ್ತಿಯನ್ನು ಅಮೆರಿಕದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 73 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರದಾನ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+