Modi-Trump: ಆತ್ಮೀಯ ಗೆಳೆಯನಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಡೊನಾಲ್ಡ್ ಟ್ರಂಪ್ ಅವರಿಗೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ನರೇಂದ್ರ ಮೋದಿ ಅವರು, ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿದ್ದಾರೆ.

ಡೊನಾಲ್ಡ್ ಟ್ರಂಪ್ ಗೆಲುವಿನ ಕುರಿತು ಎಕ್ಸ್​ನಲ್ಲಿ ಸಂತಸವನ್ನ ವ್ಯಕ್ತಪಡಿಸಿದ್ದು, ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ. ಹಿಂದಿನಂತೆಯೇ ಭಾರತ-ಯುಎಸ್ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದು ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

PM Modi Congratulates Donald Trump On Historic US Election Win

ಡೊನಾಲ್ಡ್ ಟ್ರಂಪ್ ಗೆಲುವು

ಯುಎಸ್​ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಅವರು ಅಧಿಕಾರದ ಗದ್ದುಗೆ ಏರಿದ್ದಾರೆ. ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಡುವೆ ನಡೆದ ಅಧ್ಯಕ್ಷೀಯ ಚುನಾವಣೆಯ ಭಾರೀ ಪೈಪೋಟಿಯ ನಡುವೆ ಟ್ರಂಪ್ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಕಮಲಾ ಹ್ಯಾರಿಸ್ 195 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದರೆ, ಡೊನಾಲ್ಡ್‌ ಟ್ರಂಪ್‌ 266 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದಾರೆ.

ನರೇಂದ್ರ ಮೋದಿ ಹೇಳಿದ್ದೇನು?

ನಿಮ್ಮ ಹಿಂದಿನ ಅಧಿಕಾರಾವಧಿಯ ಯಶಸ್ಸಿನ ಮೇಲೆ ನೀವು ಮತ್ತೊಂದು ಐತಿಹಾಸಿಕ ಚುನಾವಣಾ ವಿಜಯ ನಿರ್ಮಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ-ಯುಎಸ್ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಹಕಾರವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಜನರ ಒಳಿತಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸೋಣ ಎಂದು ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಮತ್ತು ನರೇಂದ್ರ ಮೋದಿ ನಡುವೆ ಉತ್ತಮವಾದ ರಾಜತಾಂತ್ರಿಕ ಸಂಬಂಧಗಳು, ಕಾರ್ಯತಂತ್ರದ ಸಹಕಾರ ಮತ್ತು ವೈಯಕ್ತಿಕವಾಗಿಯೂ ಉತ್ತಮ ಸೌಹಾರ್ದ ಸಂಬಂಧವಿದೆ. ಅಲ್ಲದೇ 2019 ರಲ್ಲಿ, ಹೂಸ್ಟನ್‌ನಲ್ಲಿ ನಡೆದ 'ಹೌಡಿ ಮೋದಿ' ಮತ್ತು 2020 ರಲ್ಲಿ ಅಹಮದಾಬಾದ್‌ನಲ್ಲಿ 'ನಮಸ್ತೆ ಟ್ರಂಪ್' ನಂತಹ ದೊಡ್ಡ ಕಾರ್ಯಕ್ರಮಗಳ ಮೂಲಕ ಮೋದಿ-ಟ್ರಂಪ್ ಸ್ನೇಹ ಹೆಸರು ಮಾಡಿತ್ತು. ಈ ಎರಡೂ ಸಮಾವೇಶಗಳಲ್ಲಿ ಇಬ್ಬರು ದಿಗ್ಗಜ ನಾಯಕರು ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿ ಪರಸ್ಪರ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಆತ್ಮೀಯ ಗೆಳಯ ಟ್ರಂಪ್‌ ಕುರಿತು ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟ್ರಂಪ್ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ಸಂಬಂಧ ಬಲಗೊಂಡಿತ್ತು. ಡೊನಾಲ್ಡ್ ಟ್ರಂಪ್ ಮತ್ತು ನರೇಂದ್ರ ಮೋದಿ ಅವರು ರಕ್ಷಣಾ ಮತ್ತು ಭದ್ರತೆಯ ವಿಷಯಗಳಲ್ಲಿ ಪರಸ್ಪರ ನಿಕಟವಾಗಿ ಕೆಲಸ ಮಾಡಿದ್ದಾರೆ. ಯುಎಸ್ ಅಧ್ಯಕ್ಷೀಯ ಅಭ್ಯರ್ಥಿಗೆ ಚುನಾವಣೆಯಲ್ಲಿ ಗೆಲ್ಲಲು 270 ಅಥವಾ ಹೆಚ್ಚಿನ ಮತಗಳು ಬೇಕಾಗುತ್ತವೆ. 78 ವರ್ಷ ವಯಸ್ಸಿನ ಡೊನಾಲ್ಡ್ ಟ್ರಂಪ್ ಅವರು ಇಂದು ತಮ್ಮ ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲೆಕ್ಟೋರಲ್ ಕಾಲೇಜ್ ಮತಗಳ ಎಣಿಕೆ ನಡೆಯುತ್ತಿದ್ದು, ಒಟ್ಟು 538 ಎಲೆಕ್ಟೋರಲ್ ಮತಗಳ ಪೈಕಿ ಬಹುತಮಕ್ಕೆ 270 ಮತಗಳ ಅಗತ್ಯವಿದೆ. ಈಗಾಗಲೇ ಡೊನಾಲ್ಡ್ ಟ್ರಂಪ್ ಅವರು 270 ಮತಗಳನ್ನು ಪಡೆಯುವ ಮೂಲಕ ಮ್ಯಾಜಿಕ್ ನಂಬರ್ ತಲುಪಿದ್ದಾರೆ. ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ಇಲ್ಲಿಯವರೆಗೆ 224 ಮತಗಳನ್ನು ಪಡೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+