ಕ್ವಾಡ್ ಸಮ್ಮೇಳನದಲ್ಲಿ ಏಕತೆಯ ಸಂದೇಶ ಸಾರಿದ ಪ್ರಧಾನಿ ಮೋದಿ
ನವದೆಹಲಿ, ಮಾರ್ಚ್.12: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಲಸಿಕೆ, ಹವಾಮಾನ ಬದಲಾವಣೆ, ಉದಯೋನ್ಮುಖ ತಂತ್ರಜ್ಞಾನ ಮತ್ತು ಕಾರ್ಯಸೂಚಿಗೆ ಕ್ವಾಡ್ ಒಂದು ಶಕ್ತಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಕ್ವಾಡ್ ಒಕ್ಕೂಟ ರಾಷ್ಟ್ರಗಳ ಮೊದಲ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. "ಇಂಡೋ-ಪೆಸಿಫಿಕ್‌ಗೆ ಸಂಬಂಧಿಸಿದಂತೆ ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳು, ಮುಕ್ತ ಮತ್ತು ಅಂತರ್ಗತ ವಿಷಯಗಳಿಗೆ ಬದ್ಧತೆಯಿಂದ ನಾವು ಒಂದಾಗಿದ್ದೇವೆ ಎಂದರು. ಈ ಶೃಂಗಸಭೆಯಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನಿನ ಪ್ರಧಾನಿ ಯೋಶಿಹೈಡ್ ಸುಗಾ ಕೂಡಾ ಭಾಗವಹಿಸಿದ್ದರು.
ಕೊವಿಡ್-19 ಲಸಿಕೆಗಳು, ಹವಾಮಾನ ಬದಲಾವಣೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಂತಹ ಕ್ಷೇತ್ರಗಳನ್ನು ಒಳಗೊಂಡು ನಮ್ಮ ಕಾರ್ಯಸೂಚಿಯು ಕ್ವಾಡ್ ಅನ್ನು ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯನ್ನಾಗಿ ಮಾಡುತ್ತದೆ" ಎಂದು ಪ್ರಧಾನಿ ಮೋದಿ ಹೇಳಿದರು.'

ಜಗತ್ತನ್ನು ಒಂದು ಕುಟುಂಬವಾಗಿ ಪರಿಗಣಿಸುವ ತತ್ವ:
"ಸಕಾರಾತ್ಮಕ ದೃಷ್ಟಿಕೋನವನ್ನು ಭಾರತದ ಪ್ರಾಚೀನ ತತ್ತ್ವಶಾಸ್ತ್ರದ ವಾಸುದೈವ ಕುತುಂಬಕಂನ ವಿಸ್ತರಣೆಯಾಗಿ ನಾನು ನೋಡುತ್ತೇನೆ. ಅದು ಇಡೀ ಜಗತ್ತನ್ನು ಒಂದೇ ಕುಟುಂಬ ಎಂಬಂತೆ ಪರಿಗಣಿಸುತ್ತದೆ" ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಮಾತು:
ದೇಶೀಯ ಬೇಡಿಕೆಯನ್ನು ಉತ್ಪಾದಿಸುವ ಮತ್ತು ಸುಸ್ಥಿರ ಜಾಗತಿಕ ಬೆಳವಣಿಗೆಯನ್ನು ಹೆಚ್ಚಿಸುವತ್ತ ಗಮನಹರಿಸುವ ಅವಶ್ಯಕತೆಯಿದೆ ಎಂದು ಬೈಡನ್ ತಿಳಿಸಿದ್ದಾರೆ. ಕೊರೊನಾವೈರಸ್ ಲಸಿಕೆ ಉತ್ಪಾದನೆ ಹೆಚ್ಚಿಸಲು ಮತ್ತು ಇಡೀ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಅನುಕೂಲವಾಗಬೇಕಿದೆ. ಈ ನಿಟ್ಟಿನಲ್ಲಿ ಜಂಟಿ ಸಹಭಾಗಿತ್ವವನ್ನು ಹೊಂದಬೇಕಿದೆ ಎಂದು ಜೋ ಬೈಡನ್ ಹೇಳಿದ್ದಾರೆ.












Click it and Unblock the Notifications