ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್‌ನಲ್ಲಿ ಮೋದಿ ಅಮೆರಿಕ ಪ್ರವಾಸ, ವಿಶೇಷತೆಯೇನು?

|
Google Oneindia Kannada News

Recommended Video

ಸೆಪ್ಟೆಂಬರ್ ನಲ್ಲಿ ಮೋದಿ ನ್ಯೂಯಾರ್ಕ್ ಪ್ರವಾಸ | ಇದರ ವಿಶೇಷತೆಯೇನು? | Oneindia Kannada

ವಾಷಿಂಗ್ಟನ್, ಜುಲೈ 13: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

ಸೆಪ್ಟೆಂಬರ್ ಮೂರನೇ ವಾರದಲ್ಲಿ ನ್ಯೂಯಾರ್ಕ್ ಹಾಗೂ ಹೂಸ್ಟನ್ ಪ್ರವಾಸ ಕೈಗೊಳ್ಳುವ ಮೋದಿ, ಟ್ರಂಪ್ ಆಡಳಿತದ ಜತೆ ದ್ವಿಪಕ್ಷೀಯ ಮಾತುಕತೆ ಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ವಿಶ್ವ ಸಂಸ್ಥೆಯ ಸಾಮಾನ್ಯ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

PM Modi Visit Newyork hutson for UN General assembly meet

ಆದರೆ, ಮೋದಿ ಹಾಗೂ ಟ್ರಂಪ್ ಭೇಟಿಯ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರ ಬಿದ್ದಿಲ್ಲ. ಅಮೆರಿಕ ಹಾಗೂ ಭಾರತದ ಮಧ್ಯೆ ವ್ಯಾಪಾರಿ ಕದನದ ವಿಚಾರವಾಗಿ ಮನಸ್ಥಾಪ ಏರ್ಪಟ್ಟಿರುವಾಗಲೇ ಮೋದಿ ಭೇಟಿ ಮಹತ್ವ ಪಡೆದುಕೊಂಡಿದೆ.

ಇದೇ ವೇಳೆ ಹೂಸ್ಟನ್‌ನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ವಿಶ್ವಸಂಸ್ಥೆ ಯ ಸಾಮಾನ್ಯ ಅಧಿವೇಶನದಲ್ಲಿ ಮೋದಿ ಪಾಲ್ಗೊಳ್ಳೂತ್ತಿರುವುದು ಇದು 3 ನೇ ಬಾರಿ. 2017 ರಲ್ಲಿ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ಬಳಿಕ ಮೋದಿ ಅವರ ಮೊದಲ ಭೇಟಿ ಇದಾಗಿದೆ.

ಈ ಬಾರಿ ಅಮೆರಿಕ ಭೇಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಏತನ್ಮಧ್ಯೆ 2015ರಲ್ಲಿ ಅಮೆರಿಕ ಭೇಟಿ ಟೆಕ್ಸಾಸ್ ಸಮಾವೇಶದ ರೀತಿಯಲ್ಲೇ ಈ ಬಾರಿಯೂ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ಭಾರಿ ಸಿದ್ಧತೆ ನಡೆಯುತ್ತಿದೆ.

ಜುಲೈ 2019ರವರೆಗೆ ಮೋದಿ 52 ವಿದೇಶ ಪ್ರವಾಸ ಕೈಗೊಂಡಿದ್ದು, 6 ಖಂಡಗಳು ಹಾಗೂ 59 ದೇಶಗಳಿಗೆ ಪ್ರಯಾಣ ಮಾಡಿದ್ದಾರೆ.

English summary
PM Modi Visit Newyork hutson for UN General assembly meet in September.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X