Narendra Modi: ಆತ್ಮೀಯ ಸ್ನೇಹಿತನಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಟ್ರಂಪ್ ಎರಡನೇ ಬಾರಿಗೆ ಯುಎಸ್ ಅಧ್ಯಕ್ಷರಾಗಿ ಆಯ್ಕೆಯಾಗಿತ್ತು, 2ನೇ ಅವಧಿಯ ಆಡಳಿತದಲ್ಲಿ ಹಲವು ಸುಧಾರಣೆ ತರುವ ಉತ್ಸಾಹದಲ್ಲಿದ್ದಾರೆ. ಡೊನಾಲ್ಡ್‌ ಟ್ರಂಪ್‌ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಆತ್ಮೀಯ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು. ಇದನ್ನು ಅವರ ಮುಂದಿನ ಯಶಸ್ವಿ ಅವಧಿ ಎಂದು ಶುಭ ಹಾರೈಸಿದರು.

Pm narendra modi congratulates us president trump on inauguration

"ನಮ್ಮ ಎರಡೂ ದೇಶಗಳಿಗೆ ಅನುಕೂಲವಾಗುವಂತೆ ಮತ್ತು ಜಗತ್ತಿಗೆ ಉತ್ತಮ ಭವಿಷ್ಯವನ್ನು ರೂಪಿಸಲು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ" ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಭಾರತದಿಂದ ಎಸ್‌ ಜೈಶಂಕರ್ ಭಾಗಿ

ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸರಿಲ್ಲ, ಆದರೆ ಭಾರತದ ಪರವಾಗಿ ವಿದೇಶಾಂಗ ಸಚಿವ ಎಸ್‌ ಜೈಶಂಕರ್ ರಾಯಭಾರಿಯಾಗಿ ತೆರಳಿದ್ದಾರೆ. "ಇಂದು ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಅಮೆರಿಕದ 47 ನೇ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿದೇಶಾಂಗ ಸಚಿವರಾಗಿ ಮತ್ತು ಪ್ರಧಾನಿಯವರ ವಿಶೇಷ ರಾಯಭಾರಿಯಾಗಿ ಭಾರತವನ್ನು ಪ್ರತಿನಿಧಿಸುವ ಸೌಭಾಗ್ಯ ಸಿಕ್ಕಿದೆ" ಎಂದು ಜೈಶಂಕರ್ ಎಕ್ಸ್‌ ಪೋಸ್ಟ್‌ನಲ್ಲಿ ಸಂತಸ ಹಂಚಿಕೊಂಡಿದ್ದರು.

ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್‌ ಒಂದು ಕೈಯಲ್ಲಿ ತಮ್ಮ ತಾಯಿ ಕೊಟ್ಟಿದ್ದ ಬೈಬಲ್ ಹಿಡಿದು ಇನ್ನೊಂದು ಕೈಯನ್ನು ಗಾಳಿಯಲ್ಲಿ ಎತ್ತಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಭಾಷಣ ಮಾಡಿದ ಅವರು, ಮೆಕ್ಸಿಕೋ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಸೇರಿದಂತೆ ಶೀಘ್ರದಲ್ಲೇ ಸಹಿ ಹಾಕಲಿರುವ ಹಲವು ಕಾರ್ಯಕಾರಿ ಆದೇಶಗಳನ್ನು ಪಟ್ಟಿ ಮಾಡಿದರು. ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ಗುರಿಯನ್ನು ಈ ಆದೇಶಗಳು ಹೊಂದಿವೆ.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್, ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್, ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಅವರಂತಹ ತಂತ್ರಜ್ಞಾನ ದೈತ್ಯರು ಟ್ರಂಪ್ ಅವರ ಕುಟುಂಬ ಮತ್ತು ಕ್ಯಾಬಿನೆಟ್ ಸದಸ್ಯರು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+