Narendra Modi: ನರೇಂದ್ರ ಮೋದಿ - ಎಲಾನ್‌ ಮಸ್ಕ್ ಭೇಟಿ; ಮಹತ್ವದ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದಲ್ಲಿದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಟ್ರಂಪ್ ಭೇಟಿಗೂ ಮುನ್ನ ಪ್ರಧಾನಿ ಮೋದಿ ವಿಶ್ವದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್‌ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎಲಾನ್ ಮಸ್ಕ್ ಜೊತೆ ಮೋದಿ ಮಾತುಕತೆ ಮಹತ್ವ ಪಡೆದುಕೊಂಡಿದ್ದು ಏನೆಲ್ಲಾ ವಿಚಾರಗಳನ್ನು ಚರ್ಚಿಸಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ.

ಫ್ರಾನ್ಸ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡ ಬಳಿಕ ಪ್ರಧಾನಿ ಮೋದಿ ಅಲ್ಲಿಂದ ಯುಎಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಫ್ರಾನ್ಸ್ ಭೇಟಿ ಸಂದರ್ಭದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು ಕೃತಕ ಬುದ್ಧಿಮತ್ತೆ (AI) ಮತ್ತು ನಾಗರಿಕ ಪರಮಾಣು ಇಂಧನದ ಸಹಯೋಗ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

pm narendra modi elon musk trump discussions us visit

ಡೊನಾಲ್ಡ್‌ ಟ್ರಂಪ್‌ರನ್ನು ಭೇಟಿಯಾಗಲು ತಾನು ಕಾಯುತ್ತಿದ್ದೇನೆ ಎಂದು ನರೇಂದ್ರ ಮೋದಿ ಹೇಳಿದ್ದರು. ಭಾರತ ಅಮೆರಿಕ ನಡುವಿನ ಸಂಬಂಧ ಮತ್ತಷ್ಟು ಬಲವಾಗಿಸುವುದು, ವಿಶ್ವ ಶಾಂತಿಗಾಗಿ ಜೊತೆಯಾಗಿ ಕೆಲಸ ಮಾಡುವುದು ಸೇರಿದಂತೆ ಟ್ರಂಪ್ ಜೊತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಮಸ್ಕ್ ಜೊತೆ ಮಹತ್ವದ ಮಾತುಕತೆ

ಎಲಾನ್ ಮಸ್ಕ್ ಜೊತೆಗಿನ ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಲಾನ್ ಮಸ್ಕ್ ಮತ್ತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ್ದು ಖುಷಿಯಾಗಿದೆ ಎಂದು ಒಂದು ಪೋಸ್ಟ್‌ನಲ್ಲಿ ಫೊಟೊಗಳನ್ನು ಹಂಚಿಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ "ವಾಷಿಂಗ್ಟನ್‌ ಡಿಸಿಯಲ್ಲಿ ಎಲಾನ್‌ ಮಸ್ಕ್‌ ಜೊತೆ ಮಹತ್ವದ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದೆವು. ಬಾಹ್ಯಾಕಾಶ, ವಾಹನ, ತಂತ್ರಜ್ಞಾನ ಮತ್ತು ಅನ್ವೇಷಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದೆವು. 'ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ'ವನ್ನು ಜಾರಿ ಮಾಡಲು ಭಾರತ ಸರ್ಕಾರದ ಪ್ರಯತ್ನಗಳ ಬಗ್ಗೆ ಕೂಡ ಮಾತನಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಎಲಾನ್ ಮಸ್ಕ್ ಭೇಟಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಎರಡನೇ ಬಾರಿ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೋದಿ ಜೊತೆ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+