ಟ್ರಂಪ್ ಮೇಲಿನ ದಾಳಿಯನ್ನು ಖಂಡಿಸಿರುವ ಪ್ರಧಾನಿ ಮೋದಿ
ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗಳ ಕಾವು ದಿನೇ ದಿನೇ ಏರುತ್ತಿದೆ. ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅಧ್ಯಕ್ಷೀಯ ಗಾದೆಯನ್ನು ಏರುವ ಕನಸು ಕಾಣುತ್ತಿದ್ದಾರೆ. ಇದೇ ವೇಳೆ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಭಾಷಣ ಮಾಡುತ್ತಿರುವಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಟ್ರಂಪ್ ಮೇಲಿನ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ.
ದಾಳಿಗೆ ಒಳಗಾದ ಟ್ರಂಪ್ ಅವರನ್ನು ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಡಿಸ್ಚಾರ್ಜ್ ಮಾಡಲಾಗಿದೆ. ಟ್ರಂಪ್ ಮೇಲಿನ ದಾಳಿಯ ನಂತರ, ಪ್ರಪಂಚದಾದ್ಯಂತದ ಎಲ್ಲಾ ನಾಯಕರು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಮೋದಿ ಖಂಡನೆ
ಟ್ರಂಪ್ ಮೇಲಿನ ದಾಳಿಯನ್ನು ಖಂಡಿಸಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. 'ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ಬೇಸರವಾಗಿದೆ. ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ನಮ್ಮ ಪ್ರಾರ್ಥನೆಗಳು ಮೃತರ ಕುಟುಂಬಗಳು, ಗಾಯಗೊಂಡವರು ಮತ್ತು ಅಮೇರಿಕನ್ ಜನರೊಂದಿಗೆ ಇವೆ ಎಂದು ಬರೆದುಕೊಂಡಿದ್ದಾರೆ.
Deeply concerned by the attack on my friend, former President Donald Trump. Strongly condemn the incident. Violence has no place in politics and democracies. Wish him speedy recovery.
— Narendra Modi (@narendramodi) July 14, 2024
Our thoughts and prayers are with the family of the deceased, those injured and the American…
ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಡೊನಾಲ್ಡ್ ಟ್ರಂಪ್ ಚುನಾವಣಾ ಪ್ರಚಾರ ನಡೆಸಿದ್ದರು. ಈ ವೇಳೆ ಸಭಿಕರನ್ನು ಉದ್ದೇಶಿಸಿ ಮಾತನಾಡುವಾಗ ದಾಳಿ ನಡೆದಿದೆ. ಹೀಗೆ ಅಮೆರಿಕ ಅಧ್ಯಕ್ಷ ಅಥವಾ ಮಾಜಿ ಅಧ್ಯಕ್ಷ, ಅಧ್ಯಕ್ಷೀಯ ಅಭ್ಯರ್ಥಿಯ ಮೇಲೆ ಹೀಗೆ ದಾಳಿ ನಡೆದಿದ್ದು, ಇದು ಮೊದಲೇನಲ್ಲ. ಇದಕ್ಕೂ ಮೊದಲು ಈ ರೀತಿಯ ದಾಳಿಗಳಿಗೆ ಅಮೆರಿಕ ಸಾಕ್ಷಿಯಾಗಿದೆ.
ವಿಡಿಯೋ ವೈರಲ್
ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಗುಂಡು ಹಾರಿಸಿದ ನಂತರ ಡೊನಾಲ್ಡ್ ಟ್ರಂಪ್ ವೇದಿಕೆಯ ಮೇಲೆ ಮುಷ್ಠಿ ಎತ್ತಿ ಗಾಳಿಯಲ್ಲಿ ತೂರಿದನ್ನು ಕಾಣಬಹುದು. ಇದಾದ ನಂತರ ಆತನ ಭದ್ರತಾ ಸಿಬ್ಬಂದಿ ಆತನನ್ನು ಸುತ್ತುವರೆದಿದ್ದಾರೆ. ವೈರಲ್ ವೀಡಿಯೊದಲ್ಲಿ, ಟ್ರಂಪ್ ಅವರ ಕಿವಿಗಳಿಂದ ರಕ್ತಸ್ರಾವವನ್ನು ಸಹ ಕಾಣಬಹುದಾಗಿದೆ.

ಮಾಜಿ ಅಧ್ಯಕ್ಷರು ಸುರಕ್ಷಿತವಾಗಿದ್ದಾರೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾವು ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದೇವೆ, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.












Click it and Unblock the Notifications