• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
LIVE

PM Modi UNGA Speech LIVE Updates:ಪಾಕಿಸ್ತಾನ್, ಚೀನಾ ವಿರುದ್ಧ ಪ್ರಧಾನಿ ಮೋದಿ ಪರೋಕ್ಷ ದಾಳಿ

|
Google Oneindia Kannada News

ನ್ಯೂಯಾರ್ಕ್, ಸೆಪ್ಟೆಂಬರ್ 25: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್‌ಗೆ ಬಂದಿಳಿದಿದ್ದಾರೆ. ಇಂದು(ಶನಿವಾರ) ಸಂಜೆ 6.30ಕ್ಕೆ ಅವರು 76ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೊರೊನಾ, ಭಯೋತ್ಪಾದನೆ, ಹವಾಮಾನ ವೈಪರಿತ್ಯ ಸೇರಿದಂತೆ ಇನ್ನಿತರೆ ಜಾಗತಿಕ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಕಳೆದ ಎರಡು ದಿನಗಳ ಕಾಲ ಸತತ ಸಭೆಗಳು, ಮಾತುಕತೆಯಲ್ಲಿ ತೊಡಗಿದ್ದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಭಾರತೀಯ ಸ್ಥಳೀಯ ಕಾಲಮಾನದ ಪ್ರಕಾರ ನ್ಯೂಯಾರ್ಕ್ ಗೆ ತೆರಳಿದ್ದಾರೆ. ಕಳೆದ ಬುಧವಾರ ಮೂರು ದಿನಗಳ ಅಮೆರಿಕ ಭೇಟಿಗಾಗಿ ಪ್ರಧಾನಿ ಮೋದಿ ಇಲ್ಲಿಗೆ ಬಂದಿದ್ದರು.

PM Narendra Modi US Visit Live Updates, UNGA Speech and Highlights In Kannada

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವ ಹೆಚ್ಚಿನ ಮಹತ್ವ ಪಡೆದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ.

ಭಾರತದಲ್ಲಿ ಹೂಡಿಕೆಯನ್ನು ಆಕರ್ಷಿಸಲು 5 ಜಾಗತಿಕ ಸಿಇಒಗಳ ಜೊತೆ ಕೂಡ ಮಾತುಕತೆ ನಡೆಸಿದ್ದಾರೆ. ಇಂದು ತಮ್ಮ ಅಮೆರಿಕ ಭೇಟಿಯನ್ನು ಮುಕ್ತಾಯಗೊಳಿಸಲಿರುವ ಪ್ರಧಾನಿ ಮೋದಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದರಲ್ಲಿ ಮುಖ್ಯವಾಗಿ ಕೋವಿಡ್-19 ಜಾಗತಿಕ ಸಮಸ್ಯೆ ಬಗ್ಗೆ ಚರ್ಚೆ ನಡೆಯಲಿದೆ.

ಅಲ್ಲದೆ ಭಯೋತ್ಪಾದನೆಯ ನಿಗ್ರಹ, ಹವಾಮಾನ ಬದಲಾವಣೆ ಮತ್ತು ಇತರ ಮುಖ್ಯವಾದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಈ ವರ್ಷದ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಚರ್ಚೆಯ ವಿಷಯ ಕೋವಿಡ್-19ನಿಂದ ಚೇತರಿಸಿಕೊಳ್ಳಲು, ಸಮರ್ಥನೀಯವಾಗಿ ಪುನರ್ನಿರ್ಮಾಣ, ಭೂಮಿಯ ಅಗತ್ಯಗಳಿಗೆ ಸ್ಪಂದಿಸಲು, ಜನರ ಹಕ್ಕುಗಳನ್ನು ಗೌರವಿಸಲು ಮತ್ತು ವಿಶ್ವಸಂಸ್ಥೆಯನ್ನು ಪುನರುಜ್ಜೀವನಗೊಳಿಸುವ ಭರವಸೆಯ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು ಎಂಬುದಾಗಿದೆ.

ನಿನ್ನೆ ಅಮೆರಿಕ ಅಧ್ಯಕ್ಷ ಜೊ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೊಶಿಹಿಡೆ ಸುಗ ಅವರೊಂದಿಗೆ ಸಹ ಮಾತುಕತೆ ನಡೆಸಿದ್ದಾರೆ. ನಂತರ ವೈಯಕ್ತಿಕವಾಗಿ ಕ್ವಾಡ್ ಶೃಂಗಸಭೆಯಲ್ಲಿ ಕೂಡ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಭಾಷಣದ ಕ್ಷಣಕ್ಷಣದ ಅಪ್‌ಡೇಟ್ಸ್ 'ಒನ್‌ಇಂಡಿಯಾ ಕನ್ನಡ'ದಲ್ಲಿ ಲಭ್ಯವಿದೆ.

Newest First Oldest First
9:40 PM, 25 Sep
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಯುಎಸ್ ಭೇಟಿಯನ್ನು ಮುಗಿಸಿದ ನಂತರ ಜಾನ್ ಎಫ್ ಕೆನಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಭಾರತಕ್ಕೆ ಪ್ರಯಾಣ ಬೆಳೆಸಿದರು.
6:58 PM, 25 Sep
"ಸರಿಯಾದ ಸಮಯಕ್ಕೆ ಸರಿಯಾದ ಕೆಲಸವನ್ನು ಮಾಡದಿದ್ದರೆ, ಆ ಸಮಯವೇ ಕೆಲಸವನ್ನು ಮಾಡುತ್ತದೆ" ಎಂದ ಮಾತಿನ ಮೂಲಕ ಭಾಷಣ ಪೂರ್ಣಗೊಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
6:57 PM, 25 Sep
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ರವೀಂದ್ರನಾಥ್ ಟ್ಯಾಗೋರ್ ಬಗ್ಗೆ ಉಲ್ಲೇಖಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
6:56 PM, 25 Sep
ಅಫ್ಘಾನಿಸ್ತಾನದ ಸೂಕ್ಷ್ಮ ಪರಿಸ್ಥಿತಿಯನ್ನು ಯಾವುದೇ ದೇಶವು ತನ್ನ ಲಾಭಕ್ಕಾಗಿ ಬಳಸಿಕೊಳ್ಳಬಾರದು. ಸಮುದ್ರದ ಸಂಪನ್ಮೂಲ ಬಳಸಿಕೊಳ್ಳಬೇಕು ಆದರೆ ದುರ್ಬಳಕೆ ಮಾಡಿಕೊಳ್ಳಬಾರದು: ಮೋದಿ.
6:55 PM, 25 Sep
ಅಫ್ಘಾನಿಸ್ತಾನದ ಭೂಮಿ ಭಯೋತ್ಪಾದನೆಗೆ ಬಳಕೆ ಆಗಬಾರದು. ಆ ಭೂಮಿಯನ್ನು ಯಾವುದೇ ದೇಶ ತನ್ನ ಲಾಭಕ್ಕಾಗಿ ಬಳಸಿಕೊಳ್ಳಬಾರದು: ಮೋದಿ.
6:54 PM, 25 Sep
ಭಯೋತ್ಪಾದನೆ ಅವರಿಗೂ ತೊಂದರೆ ನೀಡುತ್ತದೆ ಎನ್ನುವ ಮೂಲಕ ಪಾಕಿಸ್ತಾನದ ವಿರುದ್ಧ ಪರೋಕ್ಷ ವಾಗ್ದಾಳಿ.
6:53 PM, 25 Sep
ಜಗತ್ತಿನಲ್ಲಿ ಭಯೋತ್ಪಾದನೆಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಉಗ್ರರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ.
6:53 PM, 25 Sep
ಎಂಆರ್ ಎನ್ಎ ಲಸಿಕೆಯು ಅಂತಿಮ ಹಂತದಲ್ಲಿದ್ದು, 12 ವರ್ಷ ಮೇಲ್ಪಟ್ಟವರಿಗೂ ಈ ಲಸಿಕೆಯನ್ನು ನೀಡುವುದಕ್ಕೆ ಸಾಧ್ಯವಾಗುತ್ತದೆ: ಮೋದಿ.
6:52 PM, 25 Sep
ಭಾರತದಲ್ಲಿ ಲಸಿಕೆ ಉತ್ಪಾದನೆಗೆ ಆಗಮಿಸುವಂತೆ ಜಾಗತಿಕ ಕಂಪನಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ.
6:52 PM, 25 Sep
ಭಾರತ ಅಭಿವೃದ್ಧಿಯಾದರೆ, ವಿಶ್ವ ಅಭಿವೃದ್ಧಿಯಾಗುತ್ತದೆ. ಭಾರತ ಸುಧಾರಣೆಯಾದ್ರೆ ಇಡೀ ಜಗತ್ತು ಸುಧಾರಣೆಯಾಗುತ್ತದೆ. ಭಾರತದ ಅಭಿವೃದ್ಧಿಯಿಂದ ಪ್ರಪಂಚದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ: ಮೋದಿ.
6:51 PM, 25 Sep
ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಬಾಗಿಲಿಗೆ ನೀರು ಒದಗಿಸುವ ವ್ಯವಸ್ಥೆ ಕಲ್ಪಿಸಿದ್ದೇವೆ.
6:47 PM, 25 Sep
ಭಾರತದಲ್ಲಿ ಜನರ ಆಸ್ತಿಗೆ ಡಿಜಿಟಲ್ ದಾಖಲೆ ನೀಡುತ್ತಿದ್ದೇವೆ, 6 ಲಕ್ಷ ಗ್ರಾಮಗಳಲ್ಲಿ ಡ್ರೋನ್ ಮೂಲಕ ಸಮೀಕ್ಷೆ ನಡೆಸಿದ್ದೇವೆ.
6:46 PM, 25 Sep
ಕಳೆದ 1.5 ವರ್ಷಗಳಲ್ಲಿ ಇಡೀ ಜಗತ್ತು ಎದುರಿಸಿದ ಸಾಂಕ್ರಾಮಿಕ ಪಿಡುಗು 100 ವರ್ಷಗಳಲ್ಲೇ ಅತ್ಯಂತ ಕೆಟ್ಟದಾಗಿತ್ತು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ: ಮೋದಿ.
6:45 PM, 25 Sep
ದೇಶದಲ್ಲಿ 3 ಕೋಟಿ ಜನರಿಗೆ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದೇವೆ.
6:44 PM, 25 Sep
ಭಾರತದಲ್ಲಿ 23 ಕೋಟಿ ಜನರಿಗೆ ಆರೋಗ್ಯ ವಿಮೆ ನೀಡಿದ್ದೇವೆ.
6:43 PM, 25 Sep
ಮೊದಲು ಗುಜರಾತ್ ಸಿಎಂ ಆಗಿ, ಈಗ ಪ್ರಧಾನಮಂತ್ರಿ ಆಗಿ ಸೇವೆ ಸಲ್ಲಿಸುತ್ತಿದ್ದೇನೆ. ಸಮಾಜ ಸೇವೆಯಲ್ಲಿ 20 ವರ್ಷಗಳನ್ನು ಕಳೆದಿದ್ದೇನೆ: ಮೋದಿ.
6:42 PM, 25 Sep
ಪ್ರಜಾಪ್ರಭುತ್ವದಿಂದ ಮಾತ್ರ ಉತ್ತಮ ಆಳ್ವಿಕೆ ನೀಡಲು ಸಾಧ್ಯ ಎಂದ ಪ್ರಧಾನಮಂತ್ರಿ.
6:40 PM, 25 Sep
ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳು ಕಳೆದಿವೆ. ಉಜ್ವಲ ಪ್ರಜಾಪ್ರಭುತ್ವಕ್ಕೆ ಭಾರತ ಒಂದು ಉದಾಹರಣೆ.
6:39 PM, 25 Sep
ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ.
6:30 PM, 25 Sep
ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ.
6:27 PM, 25 Sep
ನ್ಯೂಯಾರ್ಕ್ ನಲ್ಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆ ಕೇಂದ್ರ ಕಚೇರಿಗೆ ತೆರಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ.
6:11 PM, 25 Sep
ಅಫ್ಘಾನಿಸ್ತಾನದ ಬಿಕ್ಕಟ್ಟು, ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲ ಹಾಗೂ ಚೀನಾದ ವಿಸ್ತರಣಾವಾದದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸುವ ನಿರೀಕ್ಷೆಗಳಿವೆ.
6:07 PM, 25 Sep
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ತೆರಳುವ ಮಾರ್ಗಮಧ್ಯದಲ್ಲಿ ಕಾದು ನಿಂತಿರುವ ಜನರು.
5:45 PM, 25 Sep
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿದಿ ಸಂಜೆ 6.30ಕ್ಕೆ ಪ್ರಧಾನಿ ಮೋದಿ ಭಾಷಣ ಶುರುವಾಗಲಿದೆ.
4:42 PM, 25 Sep
ಜಗತ್ತಿನಲ್ಲಿ ಅಭಿವೃದ್ಧಿ ಹೊಂದುತ್ತಿರುವ ಪ್ರಮುಖ ರಾಷ್ಟ್ರವಾಗಿರುವ ಭಾರತವು ಭದ್ರತಾ ಮಂಡಳಿಯ ಸದಸ್ಯನಾಗಿ ತನ್ನ ವಿಷಯ ಪ್ರಸ್ತಾಪಿಸಲಿದೆ. ಹವಾಮಾನ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಗುರಿಗಳು, ಕೊವಿಡ್-19 ಲಸಿಕೆಗಳ ಲಭ್ಯತೆ ಮತ್ತು ಸಮಾಂತರ ಹಂಚಿಕೆ, ಬಡತನ ನಿರ್ಮೂಲನೆ ಮುಂತಾದ ಜಾಗತಿಕ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ. ಇದರ ಜೊತೆಗೆ ಆರ್ಥಿಕ ಚೇತರಿಕೆ, ಮಹಿಳಾ ಸಬಲೀಕರಣ ಮತ್ತು ಸರ್ಕಾರಿ ರಚನೆಗಳಲ್ಲಿ ಅವರ ಭಾಗವಹಿಸುವಿಕೆ, ಭಯೋತ್ಪಾದನೆ, ಶಾಂತಿಪಾಲನೆ ಮತ್ತು ಶಾಂತಿ ನಿರ್ಮಾಣ, ಯುಎನ್ಎಸ್ ಸಿ ಸುಧಾರಣೆಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ.
1:16 PM, 25 Sep
ಸುಮಾರು 109 ರಾಷ್ಟ್ರಗಳು ಮತ್ತು ಸರ್ಕಾರದ ಮುಖ್ಯಸ್ಥರು ಸಾಮಾನ್ಯ ಸಭೆಯ ಚರ್ಚೆಯಲ್ಲಿ ಮಾತನಾಡಲಿದ್ದಾರೆ. ಸುಮಾರು 60 ಜನರು ಮೊದಲೇ ರೆಕಾರ್ಡ್ ಮಾಡಿದ ವಿಡಿಯೋ ಹೇಳಿಕೆಗಳ ಮೂಲಕ ಭಾಷಣ ಮಾಡಲಿದ್ದಾರೆ.
1:12 PM, 25 Sep
ಇಂದಿನ ಯುಎನ್‌ಜಿಎ 76ನೇ ಅಧಿವೇಶನದ ಸಾಮಾನ್ಯ ಚರ್ಚೆಯಲ್ಲಿ ಕೋವಿಡ್ 19ರಿಂದ ಚೇತರಿಸಿಕೊಳ್ಳುವ , ಸುಸ್ಥಿರವಾಗಿ ಪುನರ್ ನಿರ್ಮಿಸುವ , ಜನರ ಹಕ್ಕುಗಳನ್ನು ಗೌರವಿಸುವ ಮತ್ತು ವಿಶ್ವಸಂಸ್ಥೆಯನ್ನು ಪುನರುಜ್ಜೀವನಗೊಳಿಸುವ ಮೂಲಕ ಸ್ಥಿತಸ್ಥಾಪಕತ್ವವನ್ನು ನಿರ್ಮಿಸುವ ಬಗ್ಗೆ ಮಾತನಾಡಲಿದ್ದಾರೆ.
1:10 PM, 25 Sep
ಮೋದಿ ಭಾಷಣದಲ್ಲಿ ಕೋವಿಡ್ ಸಾಂಕ್ರಾಮಿಕ, ಭಯೋತ್ಪಾದನೆ, ಹವಾಮಾನ ಬದಲಾವಣೆ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ.

English summary
PM Modi UNGA Speech Live Updates in Kannada: Check out PM Narendra Modi US Visit, UNGA Speech Live updates, news and highlights in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X