ಹಮಾಸ್ ಉಗ್ರರ ದಾಳಿ ಖಂಡಿಸಿದ ಪ್ರಧಾನಿ ಮೋದಿ, ಇಸ್ರೇಲ್ ಸಂಸತ್‌ನಲ್ಲಿ ಮಹತ್ವದ ಹೇಳಿಕೆ | PM Narendra Modi
ಇಸ್ರೇಲ್ & ಭಾರತದ ಸಂಬಂಧದಲ್ಲಿ ಮತ್ತೊಂದು ಐತಿಹಾಸಿಕ ದಿನ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರವಾಸದಲ್ಲಿ ಇದ್ದಾರೆ. ಬರೋಬ್ಬರಿ 9 ವರ್ಷಗಳ ನಂತರ ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರವಾಸ ಕೈಗೊಂಡಿದ್ದು, 2017 ಸಮಯದಲ್ಲಿ ಮೊದಲ ಬಾರಿಗೆ ಇಸ್ರೇಲ್‌ಗೆ ಪ್ರಧಾನಿ ಮೋದಿ ಅವರು ಭೇಟಿ ನೀಡಿದ್ದರು. ಮತ್ತೊಂದು ವಿಶೇಷತೆ ಏನೆಂದರೆ ಇಸ್ರೇಲ್ ನೆಸೆಟ್ ಅನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹಮಾಸ್ ನಡೆಸಿದ ಕೃತ್ಯವನ್ನು ಖಂಡಿಸಿದ್ದಾರೆ. 2023 ಅಕ್ಟೋಬರ್ 7 ಇಸ್ರೇಲ್ ಎಂದಿಗೂ ಮರೆಯಲು ಆಗದು, ಏಕೆಂದರೆ ಇದೇ ದಿನ ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ಮಾಡಿ ಹಿಂಸಾಚಾರ ನಡೆಸಿದ್ದರು. ಈ ಘಟನೆಯನ್ನು ಪ್ರಧಾನಿ ಮೋದಿ ಅವರು ಈಗ ತೀವ್ರವಾಗಿ ಖಂಡಿಸಿದ್ದಾರೆ.
ಭಾರತ ಸದಾ ಇಸ್ರೇಲ್ ಬೆನ್ನಿಗೆ ನಿಂತಿದೆ ಎಂಬ ಭರವಸೆ ನೀಡಿರುವ ಪ್ರಧಾನಿ ಮೋದಿ ಅವರು, ಇದೀಗ ಉಗ್ರವಾದದ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ನಾವೆಲ್ಲ ಒಂದೇ ಎಂಬ ಸಂದೇಶ ರವಾನೆ ಮಾಡುವ ಮೂಲಕ ಪಾಕಿಸ್ತಾನ ಹಾಗೂ ಇತರ ದೇಶಗಳಿಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಪ್ರಧಾನಿ ಮೋದಿ ಅವರ ಮಾತಿಗೆ ಇಸ್ರೇಲ್ ಸಂಸದರು ಹಾಗೂ ಪ್ರಧಾನಿ ಕೂಡ ಖುಷಿಯಾಗಿದ್ದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಎರಡೂ ದೇಶಗಳು ಈ ಸಮಯದಲ್ಲಿ ಒಗ್ಗಟ್ಟಿನ ಮಂತ್ರ ಸಾರಿವೆ. ಹಾಗೇ ಮತ್ತೊಂದು ಕಡೆ ಭವಿಷ್ಯದಲ್ಲಿ ಉಗ್ರರ ವಿರುದ್ಧದ ಹೋರಾಟದಲ್ಲಿ ಪರಸ್ಪರ ಕೈಜೋಡಿಸುವ ಮಾತು ಕೂಡ ಇದಾಗಿದೆ.

ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಭಾಷಣ
ಇಸ್ರೇಲ್‌ನ ಸಂಸತ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, 2023ರ ಅಕ್ಟೋಬರ್ 7ರಂದು ನಡೆದ ಹಮಾಸ್ ದಾಳಿಯನ್ನ ಖಂಡಿಸುವ ಜೊತೆಗೆ ಇಸ್ರೇಲ್ ಸಂಸತ್ತಿನಲ್ಲಿ ಮಾತನಾಡಲು ಈಗ ಅವಕಾಶ ಸಿಕ್ಕಿದ್ದನ್ನು ಗೌರವದ ಕ್ಷಣ ಎಂದು ವಿವರಿಸಿದರು. ಸಾವಿರಾರು ವರ್ಷ ಇತಿಹಾಸ ಹೊಂದಿರುವ ಎರಡು ಪ್ರಾಚೀನ ನಾಗರಿಕತೆಗಳು ಪರಸ್ಪರ ಸಂವಾದ ನಡೆಸುತ್ತಿರುವುದು ವಿಶೇಷ ಎಂದರು ಇದೇ ವೇಳೆ ಪ್ರಧಾನಿ ಮೋದಿ ಅವರು ಹೆಮ್ಮೆಯನ್ನ ವ್ಯಕ್ತಪಡಿಸಿದರು. ಅಲ್ಲದೆ ತಾವು 1950 ಸೆಪ್ಟೆಂಬರ್ 17 ರಂದು ಜನಿಸಿದ್ದೇನೆ ಎಂದು ಹೇಳಿದ ಪ್ರಧಾನಿ, ಅದೇ ದಿನ ಭಾರತವು ಇಸ್ರೇಲ್ ರಾಷ್ಟ್ರಕ್ಕೆ ಅಧಿಕೃತವಾಗಿ ಮಾನ್ಯತೆ ನೀಡಿತ್ತು ಎಂದು ನೆನಪಿಸಿಕೊಂಡರು.
ತಂತ್ರಜ್ಞಾನ ಸಹಭಾಗಿತ್ವ ಮತ್ತೊಮ್ಮೆ ಪ್ರಸ್ತಾಪ
ಅಂದಹಾಗೆ ಭಾರತ ಮತ್ತು ಇಸ್ರೇಲ್ ಎರಡೂ ತಂತ್ರಜ್ಞಾನ ವಿಚಾರದಲ್ಲಿ ಸಾಕಷ್ಟು ಮುಂದುವರಿದ, ಇನ್ನೂ ಹೆಚ್ಚಿನ ಸಂಶೋಧನೆ ನಡೆಸುತ್ತಿರುವ ದೇಶಗಳಾಗಿವೆ. ಈ ಕಾರಣಕ್ಕೆ ವಿಜ್ಞಾನ, ತಂತ್ರಜ್ಞಾನ, ಕೃಷಿ, ರಕ್ಷಣಾ & ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮತ್ತು ಇಸ್ರೇಲ್ ನಡುವಿನ ಸಹಕಾರ ನಿರಂತರವಾಗಿ ವಿಸ್ತರಿಸುತ್ತಾ ಬಂದಿವೆ. ಇದೀಗ ಮತ್ತೆ ಅದನ್ನು ಇನ್ನಷ್ಟು ಗಟ್ಟಿಗೊಳಿಸುವ ಕುರಿತು ಪಿಎಂ ಮೋದಿ ಅವರು ಪ್ರಸ್ತಾಪಿಸಿದ್ದಾರೆ. ಮತ್ತೊಂದು ಕಡೆ ಗಾಜಾ ಪಟ್ಟಿಯಲ್ಲಿ ಶಾಶ್ವತ ಮತ್ತು ನ್ಯಾಯಸಮ್ಮತ ಶಾಂತಿಗೆ ದಾರಿ ಮಾಡಿಕೊಡುವ ಪ್ರಯತ್ನಗಳನ್ನು ಭಾರತ ಬೆಂಬಲಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಮೂಲಕ ಶಾಂತಿ ಮಾರ್ಗ ಸುಲಭವಲ್ಲ, ಆದರೆ ಸಂವಾದ & ಸ್ಥಿರತೆಗೆ ಭಾರತ ವಿಶ್ವ ಸಮುದಾಯದ ಜೊತೆಯಲ್ಲಿ ನಿಂತಿದೆ ಎಂದು ಇಸ್ರೇಲ್ ಸಂಸತ್‌ನಲ್ಲಿ ಪ್ರಧಾನಿ ಮೋದಿ ಅವರು ಹೇಳಿಕೆ ನೀಡಿದ್ದಾರೆ.
ಯಹೂದಿ ಸಮುದಾಯದ ಸುರಕ್ಷಿತ ಬದುಕು
ಹಾಗೇ ಇದೇ ಸಮಯದಲ್ಲಿ ಪ್ರಧಾನಿ ಮೋದಿ ಅವರು ಯಹೂದಿ ಸಮುದಾಯದ ಸುರಕ್ಷತೆ ವಿಚಾರವನ್ನು ಪ್ರಸ್ತಾಪ ಮಾಡಿದರು. ಯಹೂದಿ ಸಮುದಾಯ ಭಾರತದಲ್ಲಿ ಯಾವ ಭಯ ಅಥವಾ ಭೇದಭಾವ ಇಲ್ಲದೇ ಶತಮಾನಗಳ ಕಾಲ ಬದುಕಿದೆ ಎಂದರು. ತಮ್ಮ ಧರ್ಮ ಕಾಪಾಡಿಕೊಂಡೇ, ಭಾರತೀಯ ಸಮಾಜದಲ್ಲಿ ಸಂಪೂರ್ಣವಾಗಿ ಬೆರೆತಿರುವುದು ಭಾರತದ ಸಹಿಷ್ಣು ಪರಂಪರೆ ಎತ್ತಿ ತೋರಿಸುತ್ತದೆ ಎಂದು ಹೆಮ್ಮೆಯನ್ನ ವ್ಯಕ್ತಪಡಿಸಿದರು. ಇಷ್ಟೆಲ್ಲದರ ಮಧ್ಯೆ ಇತ್ತೀಚಿನ ವರ್ಷಗಳಲ್ಲಿ ಭಾರತ ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆ ಆಗಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು. ಮುಂದಿನ ದಿನಗಳಲ್ಲಿ ಭಾರತ ಜಾಗತಿಕವಾಗಿ ಟಾಪ್-3 ಆರ್ಥಿಕ ದೇಶಗಳಲ್ಲಿ ಒಂದಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications