• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋವಿಡ್ 19 ಹೋರಾಟದಲ್ಲಿ ಭಾರತದ ಬೆಂಬಲಕ್ಕೆ ನಿಂತ ಜಪಾನ್

|
Google Oneindia Kannada News

ಕೋವಿಡ್ 19 ಹೋರಾಟದಲ್ಲಿ ಜಪಾನ್ ಭಾರತದ ಬೆಂಬಲಕ್ಕೆ ನಿಂತಿದೆ. ಹಾಗೆಯೇ ಭಾರತಕ್ಕೆ 300 ರೆಸ್ಪಿರೇಟರ್‌ಗಳು ಹಾಗೂ 300 ಆಕ್ಸಿಜನ್ ಕಾನ್ಸನ್‌ಟ್ರೇಟರ್ಸ್ ನೀಡಲು ಮುಂದಾಗಿದೆ.

ಈ ಕುರಿತು ಜಪಾನ್ ಜೀಫ್ ಕ್ಯಾಬಿನೆಟ್ ಸೆಕ್ರೆಟರಿ ಕಟ್ಸುನೊಬು ಟ್ವೀಟ್ ಮಾಡಿದ್ದಾರೆ. ಭಾರತದೊಂದಿಗೆ ಮಾತುಕತೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಕೊರೊನಾ ಎದುರಿಸಲು ಭಾರತಕ್ಕೆ ನೆರವು ನೀಡಿದ ರಾಷ್ಟ್ರಗಳ ವಿವರ ಕೊರೊನಾ ಎದುರಿಸಲು ಭಾರತಕ್ಕೆ ನೆರವು ನೀಡಿದ ರಾಷ್ಟ್ರಗಳ ವಿವರ

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, 3,79,257 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 3645 ಮಂದಿ ಸಾವನ್ನಪ್ಪಿದ್ದಾರೆ, 2,69,507 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಒಟ್ಟು 1,83,76,524 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೆ 1,50,86,878 ಮಂದಿ ಗುಣಮುಖರಾಗಿದ್ದಾರೆ. 30,84,814 ಪ್ರಕರಣಗಳು ಸಕ್ರಿಯವಾಗಿವೆ.

ಇದುವರೆಗೆ 15,00,20,648 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಏಪ್ರಿಲ್ 28ರವರೆಗೆ 28,44,71,979 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಬುಧವಾರ 17,68,190 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಸಿಲುಕಿ ನಲುಗಿದ ಭಾರತಕ್ಕೆ ಜಗತ್ತಿನ ಹಲವು ರಾಷ್ಟ್ರಗಳು ಸಹಾಯಹಸ್ತ ಚಾಚಿವೆ. ವೈದ್ಯಕೀಯ ಆಮ್ಲಜನಕ ಸಾಂದ್ರಕ, ವೆಂಟಿಲೇಟರ್, ಸರ್ಜಿಕಲ್ ಮಾಸ್ಕ್ ಸೇರಿದಂತೆ ವೈದ್ಯಕೀಯ ಸಾಮಗ್ರಿಗಳನ್ನು ಸರಬರಾಜು ಮಾಡುತ್ತಿವೆ.

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವು ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವು

ಯುನೈಟೆಡ್ ಕಿಂಗ್ ಡಮ್, ಫ್ರಾನ್ಸ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ, ಸೌದಿ ಅರೇಬಿಯಾ ಮತ್ತು ದುಬೈ ರಾಷ್ಟ್ರಗಳು ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಭಾರತಕ್ಕೆ ನೆರವು ನೀಡುವುದಾಗಿ ಘೋಷಿಸಿವೆ.

ಜಗತ್ತಿನ ಈ ಪ್ರಮುಖ ರಾಷ್ಟ್ರಗಳ ಪೈಕಿ ಯುನೈಟೆಡ್ ಕಿಂಗ್ ಡಮ್ 495 ಆಮ್ಲಜನಕ ಸಾಂದ್ರಕ, 120 ನಾನ್ ಇನ್ವೆಸಿವ್ ವೆಂಟಿಲೇಟರ್ ಮತ್ತು 20 ಮ್ಯಾನುವೆಲ್ ವೆಂಟಿಲೇಟರ್ ಅನ್ನು ಇದೇ ವಾರದಲ್ಲಿ ರವಾನಿಸಲಿದೆ. ಈ ಪೈಕಿ ಏಪ್ರಿಲ್ 27ರಂದೇ 100 ವೆಂಟಿಲೇಟರ್ ಮತ್ತು 95 ಆಮ್ಲಜನಕ ಸಾಂದ್ರಕಗಳು ಭಾರತಕ್ಕೆ ತಲುಪಿವೆ.

English summary
Japan is prepared to provide 300 respirators and 300 oxygen concentrators to India once talks are finalized, Japan's chief cabinet secretary Katsunobu Kato said on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X