Maldives President: ಮೊದಲ ದಿನದಿಂದಲೇ ಭಾರತದ ಸೈನಿಕರನ್ನು ತೆಗೆದುಹಾಕಲು ಆರಂಭಿಸುತ್ತೇವೆ- ಮಾಲ್ಡೀವ್ಸ್ ಹೊಸ ಅಧ್ಯಕ್ಷನ ಆಟಾಟೋಪ
ಮಾಲ್ಡೀವ್ಸ್, ಅಕ್ಟೋಬರ್ 03: ಎರಡು ದಿನಗಳ ಹಿಂದಷ್ಟೇ ಆಯ್ಕೆಯಾಗಿರುವ ಮಾಲ್ಡೀವ್ಸ್‌ನ ನೂತನ ಅಧ್ಯಕ್ಷ ಮೊಹಮ್ಮದ್ ಮುಯಿಝು ತಮ್ಮ ಆಟಾಟೋಪದ ಮಾತುಗಳನ್ನು ಆರಂಭಿಸಿದ್ದಾರೆ. ಚೀನಾ ಬೆಂಬಲಿತ ಮುಯಿಝು ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ. ಅಧಿಕಾರವಹಿಸಿಕೊಂಡ ಮೊದಲ ದಿನದಿಂದಲೇ ಭಾರತದ ಸೈನಿಕರನ್ನು ತೆಗೆದುಹಾಕಲು ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.
ಮಾಲ್ಡೀವ್ಸ್‌ನ ದ್ವೀಪಸಮೂಹ ರಾಜ್ಯದಲ್ಲಿ ನೆಲೆಸಿರುವ ಭಾರತೀಯ ಮಿಲಿಟರಿ ಸಿಬ್ಬಂದಿಯನ್ನು ತೆಗೆದುಹಾಕುತ್ತೇನೆಂದು ಭರವಸೆ ನೀಡಿದ್ದೆ. ನಾನು ನನ್ನ ಚುನಾವಣಾ ಭರವಸೆಗೆ ಬದ್ಧನಾಗಿದ್ದೇನೆ. ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದಲೇ ಪ್ರಕ್ರಿಯೆಯನ್ನು ಪ್ರಾರಂಭಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಚುನಾಯಿತರಾದ ನಂತರ ಸಾರ್ವಜನಿಕ ಭಾಷಣ ಮಾಡಿದ ಮುಯಿಝು, 'ಜನರು ಇಲ್ಲಿ ವಿದೇಶಿ ಮಿಲಿಟರಿಯನ್ನು ಬಯಸುವುದಿಲ್ಲ ಎಂಬುದಾಗಿ ನಮಗೆ ಹೇಳಿದ್ದಾರೆ' ಎಂದು ಅವರು ತಿಳಿಸಿದ್ದಾರೆ.
ಜನರ ಇಚ್ಛೆಗೆ ವಿರುದ್ಧವಾಗಿ ವಿದೇಶಿ ಸೈನಿಕರು ಮಾಲ್ಡೀವ್ಸ್‌ನಲ್ಲಿ ಉಳಿಯಲು ಅನುಮತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಅಧಿಕಾರ ವಹಿಸಿಕೊಂಡ ತಕ್ಷಣ ಈ ಪ್ರಯತ್ನಗಳನ್ನು ಪ್ರಾರಂಭಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಸುದ್ದಿ ಮಾಧ್ಯಮ ಸನ್‌ಒನ್‌ಲೈನ್ ಇಂಟರ್‌ನ್ಯಾಷನಲ್ ವರದಿ ಮಾಡಿದೆ.

ಚೀನಿಯರ ಪರವಾಗಿರುವ ಮುಯಿಝು, ದ್ವೀಪಸಮೂಹ ರಾಜ್ಯವಾದ ಮಾಲ್ಡೀವ್ಸ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಎರಡನೇ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಹಾಲಿ ಅಧ್ಯಕ್ಷ ಇಬ್ರಾಹಿಂ ಸೋಲಿಹ್ ಅವರನ್ನು ಸೋಲಿಸಿದ್ದಾರೆ.
ಹಿಂದೂ ಮಹಾಸಾಗರದಲ್ಲಿರುವ ಆಯಕಟ್ಟಿನ ಪ್ರಮುಖ ದ್ವೀಪಸಮೂಹ ರಾಜ್ಯದವಾದ ಮಾಲ್ಡೀವ್ಸ್‌ನಲ್ಲಿ ಚೀನಾ ತನ್ನ ಪ್ರಭಾವವನ್ನು ಸಾಧಿಸಲು ಯತ್ನ ನಡೆಸಿದೆ. ಆದರೆ, ಭಾರತವು ಇದಕ್ಕೆ ತಡೆಯೊಡ್ಡಲು ಮುಂದಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಚೀನಾ ದೇಶವು ತನ್ನ ಸಂಪನ್ಮೂಲಗಳನ್ನು ಬಳಸಿ ಮುಯಿಝು ಗೆಲುವಿಗೆ ಸಹಾಯ ಮಾಡಿದೆ ಎಂಬ ಮಾತುಗಳು ಕೇಳಿಬಂದಿವೆ.
ಮುಯಿಝು ಅವರು ಚೀನಾ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ. ಅವರು ಚೀನಾ ಪರವಾಗಿ ಮಾತನಾಡುತ್ತಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿಯೂ ಭಾರತದ ವಿರುದ್ಧ ವ್ಯಾಪಕ ಹೇಳಿಕೆಗಳನ್ನು ನೀಡಿದ್ದರು. ಮಾಲ್ಡೀವ್ಸ್ ಸಾರ್ವಭೌಮತ್ವಕ್ಕೆ ಭಾರತದಿಂದ ಬೆದರಿಕೆ ಇದೆ. ಭಾರತದ ಸೈನಿಕರು ನಮ್ಮ ನೆಲದ ಮೇಲೆ ಓಡಾಡುತ್ತಿದ್ದಾರೆ. ಒಂದು ವೇಳೆ, ನಾನು ಅಧಿಕಾರಕ್ಕೆ ಬಂದರೆ ಭಾರತದ ಸೈನಿಕರನ್ನು ಈ ನೆಲದಿಂದ ತೆಗೆದುಹಾಕುತ್ತೇನೆ ಎಂದು ಹೇಳಿದ್ದರು.
2018 ರಲ್ಲಿ ಚುನಾಯಿತರಾದ ನಿರ್ಗಮಿತ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಮಾಲ್ಡೀವ್ಸ್‌ನಲ್ಲಿ ಅನಿಯಂತ್ರಿತ ಭಾರತೀಯ ಸೈನಿಕರ ಉಪಸ್ಥಿತಿಯನ್ನು ಅನುಮತಿಸಿದ್ದಾರೆ ಎಂಬ ಆರೋಪವನ್ನು ಮುಯಿಝು ಮಾಡಿದ್ದರು.
ಮಾಲ್ಡೀವ್ಸ್‌ನಲ್ಲಿ ಭಾರತ ಸೇನೆಯ ಉಪಸ್ಥಿತಿಯು ಎರಡು ಸರ್ಕಾರಗಳ ನಡುವಿನ ಒಪ್ಪಂದದ ಅಡಿಯಲ್ಲಿ ಇದೆ. ಹಡಗುಕಟ್ಟೆಯನ್ನು ನಿರ್ಮಿಸುವ ಉದ್ದೇಶಕ್ಕಾಗಿ ಮಾತ್ರ ಭಾರತ ಸೈನಿಕರು ಇಲ್ಲಿ ಬಂದಿದ್ದಾರೆ. ಒಂದು ವೇಳೆ, ಮಾಲ್ಡೀವ್ಸ್ ಸರ್ಕಾರ ಒಪ್ಪಂದವನ್ನು ಕೊನೆಗೊಳಿಸಿದರೆ ಭಾರತದ ಸೈನಿಕರು ತಮ್ಮ ದೇಶಕ್ಕೆ ವಾಪಸ್ಸಾಗುತ್ತಾರೆ ಎಂದು ಸೋಲಿಹ್ ಹೇಳಿದ್ದಾರೆ.
ಭಾರತ ಮತ್ತು ಚೀನಾ ಎರಡೂ ಮುಯಿಝು ಅವರ ವಿಜಯವನ್ನು ಅಭಿನಂದಿಸಿವೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಮುಯಿಝು ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.
'ಭಾರತ-ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಹಕಾರವನ್ನು ಹೆಚ್ಚಿಸಲು ಭಾರತವು ಬದ್ಧವಾಗಿದೆ' ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಮಾಯಿಝು ಆಯ್ಕೆ ಕುರಿತು ಪ್ರತಿಕ್ರಿಯಿಸಿರುವ ಚೀನಾದ ವಿದೇಶಾಂಗ ಸಚಿವಾಲಯವು, 'ನಾವು ಮಾಲ್ಡೀವಿಯನ್ ಜನರ ಆಯ್ಕೆಯನ್ನು ಗೌರವಿಸುತ್ತವೆ. ಚುನಾಯಿತ ಅಧ್ಯಕ್ಷ ಮೊಹಮದ್ ಮುಯಿಝು ಅವರನ್ನು ಅಭಿನಂದಿಸುತ್ತೇವೆ' ಎಂದು ಹೇಳಿದೆ.
'ಸಾಂಪ್ರದಾಯಿಕ ಸ್ನೇಹವನ್ನು ಮುಂದುವರಿಸಲು, ಪರಸ್ಪರ ಸಹಕಾರವನ್ನು ಗಾಢವಾಗಿಸಲು ಮಾಲ್ಡೀವ್ಸ್‌ನೊಂದಿಗೆ ಕೆಲಸ ಮಾಡಲು ಚೀನಾ ಸಿದ್ಧವಾಗಿದೆ' ಎಂದು ಚೀನಾದ ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications