ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನ ಚುನಾವಣೆ ಫಲಿತಾಂಶ: ಸದ್ಯದ ಟ್ರೆಂಡ್

|
Google Oneindia Kannada News

ಇಸ್ಲಾಮಾಬಾದ್, ಜುಲೈ 26: ಪಾಕಿಸ್ತಾನದಲ್ಲಿ ನಿನ್ನೆ(ಜು.25) ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್(ಪಿಟಿಐ) ಪಕ್ಷದ ನಾಯಕ ಇಮ್ರಾನ್ ಖಾನ್ ಗೆಲುವಿನತ್ತ ದಾಪುಗಾಲಿಡುತ್ತಿದ್ದು, ಪಿಟಿಐ ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಹೊರಹೊಮ್ಮಿದೆ.

ಇದುವರೆಗಿನ ಟ್ರೆಂಡ್ ಪ್ರಕಾರ ಪಿಟಿಐ ಪಕ್ಷ 114 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಪಾಕಿಸ್ತಾನದ ಕೆಳಮನೆಯಲ್ಲಿ 342 ಸ್ಥಾನಗಳಿದ್ದರೆ ನೇರವಾಗಿ ಚುನಾವಣೆ ನಡೆಯುವುದು 272 ಸ್ಥಾನಗಳಿಗೆ ಮಾತ್ರ. ಇಷ್ಟು ಸ್ಥಾನಗಳ ಪೈಕಿ 141 ಸ್ಥಾನಗಳು ಪಾಕಿಸ್ತಾನದಲ್ಲಿರುವ ಪಂಜಾಬ್ ಪ್ರಾಂತ್ಯದಲ್ಲೇ ಬರುತ್ತದೆ. ಇನ್ನು ಸಿಂಧ್ ಪ್ರಾತ್ಯದಲ್ಲಿ 61, ಖೈಬರ್ ಪಖ್ತುನ್ವಾ 39, ಬಲೂಚಿಸ್ತಾನ್ 16, ಎಫ್ ಎಟಿಎ (ಫತಾ) 12, ರಾಜಧಾನಿ (ಇಸ್ಲಾಮಾಬಾದ್ ಭಾಗಕ್ಕೆ) 3 ಸ್ಥಾನಗಳಿವೆ.

PTI emerging as single largest party in Pakistan general elections

ಒಂದು ಪಕ್ಷಕ್ಕೆ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ 172. ಸದ್ಯದ ಟ್ರೆಂಡ್ ನೋಡಿದರೆ ಯಾವುದೇ ಪಕ್ಷಕ್ಕೆ ಬಹುಮತ ಬರುವ ಸಾಧ್ಯತೆ ಕಡಿಮೆ. ಷಹ್ಬಾಜ್ ಷರೀಫ್ ನೇತೃತ್ವದ ಪಾಕಿಸ್ತಾನ್ ಮುಸ್ಲಿಂ ಲೀಗ್(ನವಾಜ್)- ಪಿಎಂಎಲ್(ಎನ್) ಪಕ್ಷವು 63 ಸ್ಥಾನಗಳ್ಲಲಿ ಮುನ್ನಡೆಕಾಯ್ದುಕೊಂಡಿದೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಮೂರನೇ ಪಕ್ಷವಾಗಿ ಹಿನ್ನಡೆಯಲ್ಲಿದೆ.

ಪಾಕಿಸ್ತಾನ ಅತಂತ್ರ, ಇಮ್ರಾನ್ ಖಾನ್ ಮ್ಯಾನ್ ಆಫ್ ದ ಮ್ಯಾಚ್ಪಾಕಿಸ್ತಾನ ಅತಂತ್ರ, ಇಮ್ರಾನ್ ಖಾನ್ ಮ್ಯಾನ್ ಆಫ್ ದ ಮ್ಯಾಚ್

17000 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ನಿನ್ನೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆದಿತ್ತು.ಸುಮಾರು 220 ದಶಲಕ್ಷ ಬ್ಯಾಲೆಟ್ ಪೇಪರ್ ಗಳನ್ನು ಚುನಾವಣೆಗೆ ಬಳಸಲಾಗಿತವ್ತು. 800000 ಕ್ಕೂ ಹೆಚ್ಚು ಸೇನಾ ಸಿಬ್ಬಂದಿಗಳನ್ನು ನೇಮಿಸಿ, ಬಿಗಿಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದ್ರೂ ಕ್ವೆಟ್ಟಾ ಮತ್ತು ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ ಸಂಭವಿಸಿ ಸುಮಾರ 30 ಕ್ಕೂ ಹೆಚ್ಚು ಜನ ಮೃತರಾದರು.

English summary
The Pakistan Tehreek-e-Insaf (PTI) party is emerging as single largest party in the 11th general elections of Pakistan, according to Samaa TV citing unofficial results.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X