• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಾವೇ ದಾಳಿ ಮಾಡಿದ್ದು ಅನ್ನೋದಕ್ಕೆ ಸಾಕ್ಷ್ಯ ಕೊಡಿ ಎಂದ ಪಾಕ್!

|
Google Oneindia Kannada News

ಇಸ್ಲಾಮಾಬಾದ್, ಫೆಬ್ರವರಿ 19: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇದೆ ಎಂದು ಆರೋಪಿಸಿರುವ ಭಾರತಕ್ಕೆ ಸಾಕ್ಷ್ಯ ನೀಡುವಂತೆ ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಸವಾಲು ಹಾಕಿದ್ದಾರೆ.

ಯಾರು ಗನ್ ಎತ್ತುತ್ತಾರೋ ಅವರನ್ನು ಇಲ್ಲವಾಗಿಸುತ್ತೇವೆ: ಸೇನೆ ಎಚ್ಚರಿಕೆಯಾರು ಗನ್ ಎತ್ತುತ್ತಾರೋ ಅವರನ್ನು ಇಲ್ಲವಾಗಿಸುತ್ತೇವೆ: ಸೇನೆ ಎಚ್ಚರಿಕೆ

ನನ್ನ ಈ ಹೇಳಿಕೆ ಭಾರತ ಸರ್ಕಾರಕ್ಕೆ. ನೀವು ಯಾವುದೇ ಸಾಕ್ಷ್ಯ ಇಲ್ಲದೆ ಪಾಕಿಸ್ತಾನ ಸರ್ಕಾರವನ್ನು ಆರೋಪಿಸಿದ್ದೀರಿ. ನಮ್ಮ ನೆಲದಿಂದ ಯಾರೂ ಹಿಂಸೆಯನ್ನು ಹರಡಬಾರದು ಎನ್ನುವುದು ನಮ್ಮ ಹಿತಾಸಕ್ತಿ. ಪಾಕಿಸ್ತಾನದಲ್ಲಿನ ಯಾರೊಬ್ಬರ ವಿರುದ್ಧ ಸಾಕ್ಷ್ಯ ಸಿಕ್ಕರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭಾರತದ ಸರ್ಕಾರಕ್ಕೆ ಹೇಳಲು ಬಯಸುತ್ತೇವೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ವಿಧಿಯ ಆಟ... ಈ ಯೋಧನಿಗೆ ಕಡೆಯ ಕ್ಷಣದಲ್ಲಿ ರಜಾ ಸಿಗದಿದ್ದರೆ...ವಿಧಿಯ ಆಟ... ಈ ಯೋಧನಿಗೆ ಕಡೆಯ ಕ್ಷಣದಲ್ಲಿ ರಜಾ ಸಿಗದಿದ್ದರೆ...

ಕಾಶ್ಮೀರದ ಕುರಿತಂತೆ ಭಾರತ ಹೊಸ ಆಲೋಚನೆ, ಆತ್ಮಾವಲೋಕನ ಮಾಡಿಕೊಳ್ಳಬೇಕು. ಸೇನೆಯ ಬಳಕೆ ಮತ್ತು ಒತ್ತಡ ಯಾವುದಾದರೂ ಸಮಸ್ಯೆಯನ್ನು ಬಗೆಹರಿಸುತ್ತದೆಯೇ? ಅದು ಈವರೆಗೂ ಸಹಾಯ ಮಾಡಿಲ್ಲ. ಈ ಬಗ್ಗೆ ಭಾರತದಲ್ಲಿ ಚರ್ಚೆ ನಡೆಯಬೇಕಿದೆ ಎಂದಿದ್ದಾರೆ.

ಈ ಬಗ್ಗೆ ನಾನು ಮೊದಲೇ ಮಾತನಾಡಲು ಬಯಸಿದ್ದೆ. ಆದರೆ, ಸೌದಿ ದೊರೆ ಭೇಟಿಯ ಕಾರಣಕ್ಕೆ ಪ್ರತಿಕ್ರಿಯೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಇಮ್ರಾನ್ ಹೇಳಿದ್ದಾರೆ.

ಗುಜರಾತ್ ನಲ್ಲಿ ಉಗ್ರರ ದಾಳಿ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ಗುಜರಾತ್ ನಲ್ಲಿ ಉಗ್ರರ ದಾಳಿ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ

ನಾವು ಭಯೋತ್ಪಾದನೆ ಕುರಿತಂತೆ ಮಾತನಾಡಲು ಸಿದ್ಧರಿದ್ದೇವೆ. ಯಾವುದೇ ರೀತಿಯ ತನಿಖೆಗೂ ಮುಕ್ತರಿದ್ದೇವೆ. ನಾವು ಕ್ರಮ ತೆಗೆದುಕೊಳ್ಳುತ್ತೇವೆ. ನಾವು ಭಯೋತ್ಪಾದನೆಗೆ ವಿರುದ್ಧವಾಗಿದ್ದೇವೆ. ಪಾಕಿಸ್ತಾನ ಪ್ರತೀಕಾರ ತೀರಿಸಿಕೊಳ್ಳುವುದರ ಬಗ್ಗೆ ಯೋಚಿಸುವುದಷ್ಟೇ ಅಲ್ಲ, ಪ್ರತೀಕಾರವನ್ನು ತೀರಿಸಿಕೊಳ್ಳುತ್ತದೆ ಕೂಡ ಎಂದಿದ್ದಾರೆ.

English summary
Pakistan Prime Minister Imran Khan said that, the Indian government has blamed Pakistan without any evidence on Pulwama Terror attack incident. India should have a new thought, new introspection regarding Kashmir, he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X