Breaking: ಶ್ರೀಲಂಕಾದ ಪ್ರಧಾನಿ ಸ್ಥಾನಕ್ಕೆ ರಾನಿಲ್ ವಿಕ್ರಮಸಿಂಘೆ ರಾಜೀನಾಮೆ

ಕೊಲಂಬೋ, ಜುಲೈ 9: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ಅಧ್ಯಕ್ಷ ಗೋಟಬಯ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣವಾಗಿ ಬಿಟ್ಟಿದೆ. ರಾಜಕೀಯ ಮತ್ತು ಪ್ರತಿಭಟನೆಯ ನಡುವೆ ಶ್ರೀಲಂಕಾದ ಪ್ರಧಾನಮಂತ್ರಿ ರಾನಿಲ್ ವಿಕ್ರಮಸಿಂಘೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

"ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ನಾನು ಇಂದು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸುಗಳನ್ನು ಸ್ವೀಕರಿಸುತ್ತೇನೆ, ಸರ್ವಪಕ್ಷಗಳ ಸರ್ಕಾರಕ್ಕೆ ದಾರಿ ಮಾಡಿಕೊಡುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ," ಎಂದು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಟ್ವೀಟ್ ಮಾಡಿದ್ದಾರೆ.

ಕೊಲಂಬೋದ 5ನೇ ಲೇನ್‌ನಲ್ಲಿರುವ ಪ್ರಧಾನಮಂತ್ರಿ ರಾನಿಲ್ ವಿಕ್ರಮಸಿಂಘೆ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸುವ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಮತ್ತು ಸೇನಾ ಯೋಧರನ್ನು ನಿಯೋಜನೆ ಮಾಡಲಾಗಿದೆ.

Ranil Wickremesinghe has resigned as the Prime Minister of Sri Lanka amid Economic crisis

ಶ್ರೀಲಂಕಾದ ಸರ್ವಪಕ್ಷ ಸಭೆಯಲ್ಲಿ ರಾಜೀನಾಮೆ ನಿರ್ಧಾರ:
"ಸರ್ವ ಪಕ್ಷದ ನಾಯಕರ ಸಭೆ ಮುಂದುವರಿದಂತೆ, ಸಿಡಬ್ಲ್ಯೂಸಿ ಪ್ರತಿನಿಧಿಸುವ ನಾನು ಮಾತನಾಡಿದ್ದೇನೆ, ಅಲ್ಲಿ ಅಧ್ಯಕ್ಷರು ತಮ್ಮ ರಾಜೀನಾಮೆಯನ್ನು ಘೋಷಿಸಬೇಕು ಮತ್ತು ಪಕ್ಷದ ನಾಯಕರು ವಿಳಂಬವಿಲ್ಲದೆ ಸರ್ವಪಕ್ಷ ಸರ್ಕಾರವನ್ನು ನಿರ್ಧರಿಸಬೇಕು ಎಂದು ಹೇಳಿದ್ದೇನೆ. ಇದೇ ರೀತಿಯ ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಗುತ್ತಿದೆ," ಎಂದು ಶ್ರೀಲಂಕಾ ನಾಯಕ ಜೀವನ್ ತೊಂಡಮನ್ ಹೇಳಿದ್ದಾರೆ.

ಹಡಗಿನಲ್ಲಿ ಪಲಾಯನ ಮಾಡಿದರಾ ರಾಜಪಕ್ಸೆ?:
ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಾಯಿಸಿ ಸಾವಿರಾರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಅವರ ನಿವಾಸಕ್ಕೆ ನುಗ್ಗಿದ್ದು ಒಂದು ಕಡೆಯಾದರೆ ಸೂಟ್‌ಕೇಸ್‌ಗಳನ್ನು ತುಂಬಿಕೊಂಡು ಹಡಗಿನಲ್ಲಿ ಅವರು ಪಲಾಯನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ಪ್ರತಿಭಟನೆಗಳ ಗೊಂದಲದ ಮಧ್ಯೆ, ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಸಖತ್ ವೈರಲ್ ಆಗುತ್ತಿದ್ದು, ಈ ಎಲ್ಲಾ ಸೂಟ್‌ಕೇಸ್‌ಗಳು ಅಧ್ಯಕ್ಷ ರಾಜಪಕ್ಸೆ ಅವರದ್ದೇ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಸ್‌ಎಲ್‌ಎನ್‌ಎಸ್ ಗಜಬಾಹು ಹಡಗಿನಲ್ಲಿ ಮೂವರು ವ್ಯಕ್ತಿಗಳು ದೊಡ್ಡ ಸೂಟ್‌ಕೇಸ್‌ಗಳನ್ನು ಹೊತ್ತೊಯ್ಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+