• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಕ್ಸ್‌ಫರ್ಡ್ ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಕನ್ನಡತಿ ರಶ್ಮಿ ಸಾಮಂತ್ ಆಯ್ಕೆ

|

ಉಡುಪಿ, ಫೆಬ್ರುವರಿ 13: ಉಡುಪಿಯ ಮಣಿಪಾಲ ಮೂಲದ ರಶ್ಮಿ ಸಾಮಂತ್ ಪ್ರತಿಷ್ಠಿತ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವ್ಯಾಸಂಗ ಮಾಡಿದ್ದ ರಶ್ಮಿ ಸಾಮಂತ್ ಇಂಗ್ಲೆಂಡ್ ನ ಆಕ್ಸ್‌ಫರ್ಡ್ ವಿವಿ ವಿದ್ಯಾರ್ಥಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಅಧ್ಯಕ್ಷ ಸ್ಥಾನ ಪಡೆದ ಮೊದಲ ಭಾರತೀಯ ಮಹಿಳೆ ಎಂದು ಕರೆಸಿಕೊಂಡಿದ್ದಾರೆ.

ರಶ್ಮಿ ಅವರು ಮಣಿಪಾಲದ ವತ್ಸಲಾ ಸಾಮಂತ್ ಹಾಗೂ ದಿನೇಶ್ ಸಾಮಂತ್ ಅವರ ಮಗಳಾಗಿದ್ದು, ಮಣಿಪಾಲ ಹಾಗೂ ಉಡುಪಿಯಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದರು. ಎಂಐಟಿನಲ್ಲಿ 2016ರಿಂದ 2020ರವರೆಗೆ ಮೆಕಾನಿಕಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು.

ವಿಶ್ವ ವಾಣಿಜ್ಯ ಸಂಸ್ಥೆಯ ಮುಖ್ಯಸ್ಥೆಯಾಗಿ ಮೊದಲ ಆಫ್ರಿಕನ್ ಮಹಿಳೆ

ಪ್ರಸ್ತುತ ಆಕ್ಸ್‌ಫರ್ಡ್ ವಿವಿಯ ಲಿನಾಕ್ರೆ ಕಾಲೇಜಿನಲ್ಲಿ ಎನರ್ಜಿ ಸಿಸ್ಟಮ್ಸ್ ವಿಷಯದಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿರುವ ರಶ್ಮಿ, ಕೊರೊನಾ ಸೋಂಕಿನ ವಿರುದ್ಧ ಸುರಕ್ಷತೆ, ಮಾನಸಿಕ ಆರೋಗ್ಯ, ಪರಿಸರಸ್ನೇಹಿ ಕಾಲೇಜು ಕ್ಯಾಂಪಸ್ ನಿರ್ಮಾಣದ ಭರವಸೆಯನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಚುನಾವಣೆಯಲ್ಲಿ ಒಟ್ಟು ನಾಲ್ಕು ಮಂದಿ ಸ್ಪರ್ಧಿಸಿದ್ದು, ರಶ್ಮಿ ಅವರು ಒಟ್ಟು 3708 ಮತಗಳಲ್ಲಿ 1966 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಎದುರಾಳಿಗಳು ಗಳಿಸಿದ್ದ ಒಟ್ಟು ಮತಕ್ಕಿಂತ ಹೆಚ್ಚಿನ ಮತವನ್ನು ರಶ್ಮಿ ಪಡೆದಿದ್ದರು.

English summary
Rashmi Samant from udupi manipal elected as president of oxford student union. she is the first Indian woman to occupy the position,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X