ಇರಾನ್ ನಿಯಮ ವಿರೋಧಿಸಿ ಚೆಸ್ ಟೂರ್ನಿಯಿಂದ ಹೊರಬಂದ ಸೌಮ್ಯಾ
ಪುಣೆ, ಜೂನ್ 13: ತಲೆಗೆ ಸ್ಕಾರ್ಫ್ ಧರಿಸಿಕೊಂಡು ಚೆಸ್ ಆಡಬೇಕೆಂಬ ಇರಾನ್ ದೇಶದ ಕಾನೂನನ್ನು ಧಿಕ್ಕರಿಸಿ ಭಾರತದ ಚೆಸ್ ಪ್ರತಿಭೆ ಸೌಮ್ಯಾ ಸ್ವಾಮಿನಾಥನ್ ಚೆಸ್ ಟೂರ್ನಿಯಿಂದ ಹೊರಬಂದಿದ್ದಾರೆ.
ಇರಾನ್‌ನ ಹಮದಾನ್‌ನಲ್ಲಿ ಜೂನ್ 26ರಿಂದ ಆಗಸ್ಟ್ 4ರವರೆಗೆ ಚೆಸ್ ಚಾಂಪಿಯನ್‌ಷಿಪ್ ನಡೆಯಲಿದೆ. ಇರಾನ್ ಕಾನೂನಿನ ಪ್ರಕಾರ ಮಹಿಳೆಯರು ತಲೆಗೆ ಸ್ಕಾರ್ಫ್ ಕಟ್ಟಿಕೊಳ್ಳಬೇಕಿರುವುದು ಕಡ್ಡಾಯವಾಗಿರುವುದರಿಂದ ಅದು ತಮ್ಮ ವೈಯಕ್ತಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಕಾರಣದಿಂದ ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸೌಮ್ಯಾ ಹೇಳಿದ್ದಾರೆ.
ಇರಾನ್ ನಿಯಮ ವಿರೋಧಿಸಿ ಸ್ಪರ್ಧೆಯಿಂದ ದೂರಸರಿದ ಚೆಸ್ ತಾರೆ
ಈ ಕುರಿತು ಫೇಸ್‌ಬುಕ್ ಪುಟದಲ್ಲಿ ಬರೆದಿರುವ ಸೌಮ್ಯಾ, 'ಮಹಿಳೆಯರು ಕಡ್ಡಾಯವಾಗಿ ತಲೆಗೆ ಸ್ಕಾರ್ಫ್ ಧರಿಸಬೇಕೆಂಬ ಇರಾನ್‌ನ ಕಾನೂನು ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯ, ಚಿಂತನೆ, ಆತ್ಮಸಾಕ್ಷಿ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳು ಸೇರಿದಂತೆ ನನ್ನ ಮೂಲ ಮಾಣವ ಹಕ್ಕುಗಳನ್ನು ನೇರವಾಗಿ ಹತ್ತಿಕ್ಕುತ್ತದೆ.
ಪ್ರಸ್ತುತದ ಸಂದರ್ಭದಲ್ಲಿ ನನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ನಾನು ಇರಾನ್‌ಗೆ ತೆರಳದೆ ಇರುವುದೇ ಸೂಕ್ತ ಎಂದೆನಿಸಿದೆ ಎಂಬುದಾಗಿ ಹೇಳಿದ್ದಾರೆ. ಕ್ರೀಡಾಪಟುಗಳ ಮೇಲೆ ಧಾರ್ಮಿಕ ವಸ್ತ್ರಸಂಹಿತೆಯನ್ನು ಹೇರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಧಿಕೃತ ಚಾಂಪಿಯನ್‌ಷಿಪ್‌ಗಳಲ್ಲಿ ನಾವು ರಾಷ್ಟ್ರೀಯ ತಂಡದ ದಿರಿಸು ಅಥವಾ ಕ್ರೀಡಾ ಉಡುಪನ್ನು ಧರಿಸಿರುವುದನ್ನು ಆಯೋಜಕರು ನಿರೀಕ್ಷಿಸುತ್ತಾರೆ. ಆದರೆ, ಕ್ರೀಡೆಯಲ್ಲಿ ಧಾರ್ಮಿಕ ವಸ್ತ್ರಸಂಹಿತೆಯನ್ನು ಬಲವಂತವಾಗಿ ಹೇರುವಂತಿಲ್ಲ ಎಂದಿದ್ದಾರೆ.
ವಸ್ತ್ರಸಂಹಿತೆಯ ನಿಯಮವನ್ನು ವಿರೋಧಿಸಿ ಭಾರತದ ಕ್ರೀಡಾಪಟು ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಹಿಂದೆ ಸರಿದಿರುವುದು ಇದು ಮೊದಲೇನಲ್ಲ. 2016ರಲ್ಲಿ ಭಾರತದ ಶೂಟರ್ ಹೀನಾ ಸಿಧು ಅವರು ಇರಾನ್‌ನಲ್ಲಿ ಆಯೋಜಿಸಿದ್ದ ಏಷ್ಯನ್ ಏರ್‌ಗನ್ ಸ್ಪರ್ಧೆಯಿಂದ ಇದೇ ಕಾರಣದಿಂದ ಹಿಂದಕ್ಕೆ ಸರಿದಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
ಇರಾನ್ ಮೇಲೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸುವುದಾಗಿ ಡೊನಾಲ್ಡ್ ಟ್ರಂಪ್ ಘೋಷಣೆ, ಇರಾನ್ ಮುಂದೆ ಮಂಡಿಯೂರಿತೇ ಅಮೆರಿಕ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications