ಪಾಕಿಸ್ತಾನದಲ್ಲಿ ಜಾಗತಿಕ ಉಗ್ರ ಮಸೂದ್ ಅಜರ್ ನಾಪತ್ತೆ ಪ್ರಹಸನ
ಇಸ್ಲಾಮಾಬಾದ್, ಫೆಬ್ರವರಿ 17: ಜಾಗತಿಕ ಉಗ್ರ ಮಸೂದ್ ಅಜರ್ ಹಾಗೂ ಆತನ ಕುಟುಂಬ ಪಾಕಿಸ್ತಾನದಲ್ಲಿ ನಾಪತ್ತೆಯಾಗಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ.
ಪಾಕಿಸ್ತಾನ ಸೇನೆಯ ವಶದಲ್ಲಿದ್ದ ಮಸೂದ್ ಅಜರ್ ಹಾಗೂ ಆತನ ಕುಟುಂಬ ಕಳೆದ ಕೆಲ ದಿನಳಗಳಿಂದ ನಾಪತ್ತೆಯಾಗಿದೆ. ಮಸೂದ್ ಅಜರ್ ಬಗ್ಗೆ ಯಾವುದೇ ಸುಳಿವಿಲ್ಲ ಎಂದು ಪಾಕಿಸ್ತಾನದ ಸೇನೆ ಹೇಳಿಕೊಂಡಿದೆ.
ಪಾಕಿಸ್ತಾನದ ವಿರುದ್ಧ ಎಫ್‌ಎಟಿಎಫ್‌ನ (ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್) ಸಭೆ ನಡೆಯಲಿರುವ ಸಂದರ್ಭದಲ್ಲಿ ಈ ಘಟನೆ ನಡೆದಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ.

ಪಾಕಿಸ್ತಾನಕ್ಕೆ ಹಿನ್ನಡೆಯಾಗಲಿದೆಯೇ?
ಪುಲ್ವಾಮಾ ದಾಳಿ ಸೇರಿ ಭಾರತದಲ್ಲಿನ ಸಾಕಷ್ಟು ವಿಧ್ವಂಸಕ ಚಟುವಟಿಕೆಗಳ ಮಾಸ್ಟರ್ ಮೈಂಡ್ ಆಗಿರುವ ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆ ಜಾಗತಿಕ ಉಗ್ರ ಎಂದು ಘೋಷಿಸಿದೆ. ಆ ಬಳಿಕ ಮಸೂದ್ ಅಜರ್ ಪಾಕಿಸ್ತಾನ ಸೇನೆಯ ವಶದಲ್ಲಿದ್ದ. ಆದರೆ ಕೆಲ ದಿನಗಳಿಂದ ಮಸೂದ್ ಅಜರ್ ಹಾಗೂ ಆತನ ಕುಟುಂಬದ ಸದಸ್ಯರು ಸೇನೆಯ ಹಿಡಿತದಿಂದ ತಪ್ಪಿಸಿಕೊಂಡಿದ್ದಾರೆ.

ಪ್ಯಾರಿಸ್‌ನಲ್ಲಿ ನಿರ್ಣಾಯಕ ಸಭೆ
ಅಜರ್ ಹುಡುಕಾಟ ನಡೆಯುತ್ತಿದೆ ಎಂದು ಸೇನೆ ಹೇಳಿಕೊಂಡಿದ್ದರೂ ಇದು ಪಾಕಿಸ್ತಾನದ ನಾಟಕ ಎಂದು ಖಚಿತವಾಗಿದೆ. ಮುಂದಿನ ವಾರ ಪ್ಯಾರಿಸ್‌ನಲ್ಲಿ ಎಫ್‌ಟಿಎಫ್ ನಿರ್ಣಾಯಕ ಸಭೆ ನಡೆಯುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆಗಳೂ ನಡೆದಿದೆ. ಈ ಸಭೆಯಲ್ಲಿ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸುವುದು ಅಥವಾ ಕಂದು ಬಣ್ಣದ ಪಟ್ಟಿಯಲ್ಲೇ ಮುಂದುವರೆಸುವ ಬಗ್ಗೆ ತೀರ್ಮಾನವಾಗಲಿದೆ. ಮಸೂದ್ ಅಜರ್ ನಾಪತ್ತೆಯನ್ನು ಮುಂದಿಟ್ಟುಕೊಂಡು ಭಾರತವು ಪಾಕಿಸ್ತಾನದ ವಿರುದ್ಧ ವಾದ ಮಂಡಿಸಲು ಮುಂದಾಗಿದೆ.

ಅಜರ್‌ನನ್ನು ಹುಡುಕಿಕೊಡಲೇ ಎಂಬ ಭಾರತ
ಮಸೂದ್ ಅಜರ್ ನಾಪತ್ತೆಯಾಗಿದ್ದಾನೆ ಎಂದು ನಾಟಕೀಯ ಹತಾಶೆ ಭಾವನೆ ತೋರುತ್ತಿರುವ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಮಸೂದ್ ಎಲ್ಲಿದ್ದಾನೆ ಎಂಬ ಮಾಹಿತಿ ನೀಡಲೇ?, ಆತನನ್ನು ಬಂಧಿಸಿ ಭಾರತದ ವಶಕ್ಕೆ ನೀಡುತ್ತೀರಾ ಎಂದು ಪಾಕಿಸ್ತಾನವನ್ನು ಭಾರತ ಕಟುವಾಗಿ ಪ್ರಶ್ನಿಸಿದೆ. ಆದರೆ ಇದಕ್ಕೆ ಪಾಕಿಸ್ತಾದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಭಯೋತ್ಪಾದನೆ ವಿರುದ್ಧ ಪಾಕಿಸ್ತಾನದ ನಿಲುವು ಇದರಿಂದ ಸ್ಪಷ್ಟವಾಗಿದೆ ಎಂದು ಭಾರತ ಹೇಳಿದೆ.

ಪುಲ್ವಾಮಾ ದಾಳಿ ಸಂಚುಕೋರ
2019ರ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದಿದ್ದ ಆತ್ಮಾಹುತಿ ದಾಳಿಗೆ ಮಸೂದ್ ಅಜರ್ ಪ್ರಮುಖ ಸಂಚುಕೋರನಾಗಿದ್ದ. ಪಾಕಿಸ್ತಾನದಲ್ಲಿ ಕುಳಿತುಕೊಂಡು ದಾಳಿ ನಡೆಸಿರುವ ಬಗ್ಗೆ ಭಾರತೀಯ ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿದ್ದವು. ಈ ಕುರಿತ ತನಿಖಾ ವರದಿಯನ್ನು ಕೂಡ ಪಾಕಿಸ್ತಾನ ಹಾಗೂ ವಿಶ್ವಸಂಸ್ಥೆಗೆ ಭಾರತ ಹಸ್ತಾಂತರಿಸಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications