ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಆಕೆಗೆ ಸರಿಯಾದ ಶಿಕ್ಷೆಯೇ ಆಗಿದೆ’: ಸೂಕಿ ವಿರುದ್ಧ ರೊಚ್ಚಿಗೆದ್ದ ರೊಹಿಂಗ್ಯಾಗಳು

|
Google Oneindia Kannada News

ಸೇನಾ ಕ್ರಾಂತಿಯ ಸೆಲೆಯಲ್ಲಿ ಸಿಲುಕಿ ಮ್ಯಾನ್ಮಾರ್‌ ತತ್ತರಿಸಿದ್ದರೆ, ಮಿಲಿಟರಿ ಬಲದ ಎದುರು ಮಂಡಿಯೂರಿದ ಆಂಗ್ ಸಾನ್ ಸೂಕಿ ಮನೆಯಲ್ಲೇ ಜೈಲು ಕಾಣುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಆಂಗ್ ಸಾನ್ ಸೂಕಿ ವಿರುದ್ಧ ರೊಹಿಂಗ್ಯಾ ನಿರಾಶ್ರಿತರು ಆಕ್ರೋಶದ ಮಾತುಗಳನ್ನಾಡಿದ್ದಾರೆ. ಮ್ಯಾನ್ಮಾರ್‌ ಸೇನೆ ಹಿಡಿತಕ್ಕೆ ಸಿಲುಕಿದ್ದು ನಮಗೆ ಆಘಾತ ತಂದಿದೆ, ಆದರೆ ಆಂಗ್ ಸಾನ್ ಸೂಕಿ ಬಗ್ಗೆ ನಮಗೆ ಎಳ್ಳಷ್ಟು ಅನುಕಂಪ ಇಲ್ಲ.

ಆಕೆ ಮಾಡಿದ ತಪ್ಪಿಗೆ ಸರಿಯಾದ ಶಿಕ್ಷೆ ಆಗಿದೆ ಎಂದು ಬಾಂಗ್ಲಾದೇಶದಲ್ಲಿ ನೆಲೆ ಪಡೆದಿರುವ ಮ್ಯಾನ್ಮಾರ್‌ ರೊಹಿಂಗ್ಯಾ ಮುಸ್ಲೀಮರು ಆಕ್ರೋಶ ಹೊರಹಾಕಿದ್ದಾರೆ. ಕೆಲ ವರ್ಷಗಳ ಹಿಂದೆ ರೊಹಿಂಗ್ಯಾ ಮುಸ್ಲೀಮರ ಮೇಲೆ ಮ್ಯಾನ್ಮಾರ್‌ನಲ್ಲಿ ಭೀಕರ ದಾಳಿಯಾಗಿತ್ತು. ದಾಳಿಗೆ ಸಿಲುಕಿ ಸಾವಿರಾರು ರೊಹಿಂಗ್ಯಾಗಳು ಜೀವ ಕಳೆದುಕೊಂಡಿದ್ದರೆ, ಹತ್ತಾರು ಲಕ್ಷ ಜನ ಜೀವ ಉಳಿಸಿಕೊಳ್ಳಲು ಬಾಂಗ್ಲಾಗೆ ವಲಸೆ ಬಂದರು.

ಮ್ಯಾನ್ಮಾರ್: ಆಂಗ್ ಸಾನ್ ಸೂಕಿ ವಿರುದ್ಧ ಪ್ರಕರಣ ದಾಖಲುಮ್ಯಾನ್ಮಾರ್: ಆಂಗ್ ಸಾನ್ ಸೂಕಿ ವಿರುದ್ಧ ಪ್ರಕರಣ ದಾಖಲು

ಬಾಂಗ್ಲಾದಲ್ಲಿ ನೆಲೆ ಪಡೆದ ರೊಹಿಂಗ್ಯಾಗಳು, ಮ್ಯಾನ್ಮಾರ್‌ ಸೇನೆ ಹಿಡಿತಕ್ಕೆ ಸಿಲುಕಿದ್ದನ್ನು ಹಲವು ಆಯಾಮಗಳಲ್ಲಿ ನೋಡುತ್ತಿದ್ದಾರೆ. ಮಿಲಿಟರಿ ಹಿಡಿತವನ್ನು ತಪ್ಪು ಎಂದು, ಆದ್ರೆ ಆಂಗ್ ಸಾನ್ ಸೂಕಿ ಅಧಿಕಾರ ಹೋಗಿದ್ದಕ್ಕೆ ಖುಷಿಯೂ ಆಗಿದೆ ಎನ್ನುತ್ತಿದ್ದಾರೆ.

ರಕ್ತದ ಕೋಡಿ ಹರಿಸಿದ್ದರು..!

ರಕ್ತದ ಕೋಡಿ ಹರಿಸಿದ್ದರು..!

ಅದು 2016ರ ಅಂತ್ಯಕಾಲ. ಜಗತ್ತು ಮ್ಯಾನ್ಮಾರ್‌ ಕಡೆಗೆ ದಿಟ್ಟಿಸಿ ನೋಡಿತ್ತು. ರೊಹಿಂಗ್ಯಾ ಮುಸ್ಲೀಮರ ಮೇಲೆ ದಿಢೀರ್ ದಾಳಿ ನಡೆದು ನೋಡ ನೋಡುತ್ತಿದ್ದಂತೆ ಸಾವಿರಾರು ರೊಹಿಂಗ್ಯಾಗಳು ಜೀವ ಕಳೆದುಕೊಂಡರು. ಈ ಹೊತ್ತಲ್ಲೇ ಅಮಾನುಷ ಘಟನೆಗಳು ನಡೆದವು. ರೊಹಿಂಗ್ಯಾ ಮುಸ್ಲೀಮರ ಮೇಲೆ ಲೈಂಗಿಕ ದೌರ್ಜನ್ಯ ಕೂಡ ನಡೆದಿತ್ತು. ಹಲವು ಮಹಿಳೆಯರನ್ನ ರೇಪ್ & ಮರ್ಡರ್ ಮಾಡಿದ್ದರು ಎಂಬ ಆಘಾತಕಾರಿ ವಿಚಾರ ಜಗತ್ತನ್ನು ತಲ್ಲಣಗೊಳಿಸಿತ್ತು. 24 ಸಾವಿರ ರೊಹಿಂಗ್ಯಾಗಳು ಗಲಭೆಯಲ್ಲಿ ಹತ್ಯೆಯಾದರೆ, 1 ಮಿಲಿಯನ್ ರೊಹಿಂಗ್ಯಾಗಳು ಮ್ಯಾನ್ಮಾರ್‌ ಬಿಟ್ಟು ಓಡಿ ಹೋದರು. ಇನ್ನು ನಾಪತ್ತೆಯಾದವರ ಬಗ್ಗೆ ಈಗಲೂ ಸರಿಯಾದ ಲೆಕ್ಕ ಸಿಗುತ್ತಿಲ್ಲ.

ಸೇನಾ ಕ್ರಾಂತಿಯ ನಡುವೆಯೂ ತನ್ನ ವೃತ್ತಿ ಮರೆಯದ ಶಿಕ್ಷಕಿ..!ಸೇನಾ ಕ್ರಾಂತಿಯ ನಡುವೆಯೂ ತನ್ನ ವೃತ್ತಿ ಮರೆಯದ ಶಿಕ್ಷಕಿ..!

ಮಿಲಿಟರಿ ಆಡಳಿತ ಶುರು..!

ಮಿಲಿಟರಿ ಆಡಳಿತ ಶುರು..!

ಮ್ಯಾನ್ಮಾರ್‌ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್‌ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ.

ದಿಢೀರ್ ಸೇನಾ ಕ್ರಾಂತಿ, ಸೂಕಿ ಅರೆಸ್ಟ್, ಚೀನಿ ಗ್ಯಾಂಗ್ ಕೈವಾಡ..?ದಿಢೀರ್ ಸೇನಾ ಕ್ರಾಂತಿ, ಸೂಕಿ ಅರೆಸ್ಟ್, ಚೀನಿ ಗ್ಯಾಂಗ್ ಕೈವಾಡ..?

‘ಡ್ರ್ಯಾಗನ್ ಚೀನಿ’ ಗ್ಯಾಂಗ್ ಕೈವಾಡ..?

‘ಡ್ರ್ಯಾಗನ್ ಚೀನಿ’ ಗ್ಯಾಂಗ್ ಕೈವಾಡ..?

ಇಂತಹದ್ದೊಂದು ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಏಕೆಂದರೆ ಚೀನಾ ಜೊತೆಗೆ ಮ್ಯಾನ್ಮಾರ್‌ ಸುಮಾರು 2 ಸಾವಿರ ಕಿಲೋ ಮೀಟರ್‌ಗೂ ಹೆಚ್ಚು ವಿಸ್ತಿರ್ಣದ ಗಡಿ ಹಂಚಿಕೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಚೀನಾ ತನ್ನ ಅಕ್ಕಪಕ್ಕದ ದೇಶಗಳ ಮೇಲೆ ನಿಯಂತ್ರಣ ಸಾಧಿಸಲು ಕುತಂತ್ರ ಬುದ್ಧಿ ಬಳಸುತ್ತಿದೆ. ನೇಪಾಳದಲ್ಲೂ ಹೀಗೆ ಮಾಡಿದೆ ಚೀನಾ. ಇದೀಗ ಮ್ಯಾನ್ಮಾರ್‌ ಸೇನಾ ಕ್ರಾಂತಿಗೂ ಚೀನಾ ಬೆಂಬಲ ಇರಬಹುದು ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಏಕೆಂದರೆ ಮ್ಯಾನ್ಮಾರ್‌ ಪ್ರಜಾಪ್ರಭುತ್ವ ತತ್ವ ಅಳವಡಿಸಿಕೊಂಡಿರುವ ದೇಶ. ಆದರೆ ಮಾವೋವಾದಿ ಕಮ್ಯೂನಿಸ್ಟ್ ಸಿದ್ಧಾಂತದ ಚೀನಾಗೆ ಇದು ಬಿಲ್‌ಕುಲ್ ಇಷ್ಟವಿಲ್ಲ.

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಮ್ಯಾನ್ಮಾರ್‌ನಲ್ಲಿ 2020ರ ನವೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್‌ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್‌ಎಲ್‌ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.

ಪ್ರಜಾಪ್ರಭುತ್ವ ವಾದಿ ರಾಷ್ಟ್ರಗಳ ಕಳವಳ

ಪ್ರಜಾಪ್ರಭುತ್ವ ವಾದಿ ರಾಷ್ಟ್ರಗಳ ಕಳವಳ

ಮ್ಯಾನ್ಮಾರ್‌ನಲ್ಲಿ ಸೇನಾ ಕ್ರಾಂತಿ ಎದುರಾದ ಬೆನ್ನಲ್ಲೇ ಪ್ರಜಾಪ್ರಭುತ್ವ ವಾದಿ ರಾಷ್ಟ್ರಗಳು ಕಳವಳ ವ್ಯಕ್ತಪಡಿಸಿವೆ. ಹಠಾತ್ ಬೆಳವಣಿಗೆ ಬಗ್ಗೆ ಭಾರತ, ಅಮೆರಿಕ ಹಾಗೂ ಆಸ್ಟ್ರೇಲಿಯಾ ಸೇರಿದಂತೆ ಹಲವು ರಾಷ್ಟ್ರಗಳು ಆತಂಕ ವ್ಯಕ್ತಪಡಿಸಿವೆ. ಮತ್ತೊಂದ್ಕಡೆ ಸಂಪರ್ಕ ಸಾಧನಗಳನ್ನ ಬಂದ್ ಮಾಡಲಾಗಿದ್ದು, ವಾಕ್ ಸ್ವಾತಂತ್ರ್ಯಕ್ಕೆ ಮಿಲಿಟರಿ ಬ್ರೇಕ್ ಹಾಕಿದೆ. ಈ ಮೂಲಕ ಮ್ಯಾನ್ಮಾರ್‌ನ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಲು ಸೇನೆ ಮುಂದಾಗಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಈ ವಿಚಾರದಲ್ಲಿ ಚೀನಾ ಪರೋಕ್ಷ ಕೈವಾಡ ಅಲ್ಲಗಳೆಯುವಂತಿಲ್ಲ.

'ಕಣ್ಣಿಗೆ ಕಂಡವರನ್ನೆಲ್ಲಾ ಕೊಲೆ ಮಾಡಿ': ಹೇಗಿತ್ತು ರೊಹಿಂಗ್ಯಾ ಹತ್ಯಾಕಾಂಡ..?'ಕಣ್ಣಿಗೆ ಕಂಡವರನ್ನೆಲ್ಲಾ ಕೊಲೆ ಮಾಡಿ': ಹೇಗಿತ್ತು ರೊಹಿಂಗ್ಯಾ ಹತ್ಯಾಕಾಂಡ..?

English summary
Bangladesh’s Rohingya refugees reacted anger over Myanmar coup but they were happy about Suu Kyi’s departure from the post of State Counsellor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X