ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವದ ಮೊದಲ ಕೊರೊನಾ ಲಸಿಕೆ ಬಿಡುಗಡೆ: ನೀವು ತಿಳಿಯಬೇಕಾಗಿದ್ದಿಷ್ಟು

|
Google Oneindia Kannada News

ಜಗತ್ತಿನ ಮೊಟ್ಟ ಮೊದಲ ಕೊರೋನಾ ಲಸಿಕೆ ರಷ್ಯಾದಿಂದ ನೋಂದಣಿಯಾಗಿದ್ದು, ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಪುತ್ರಿಗೆ ಲಸಿಕೆ ಪ್ರಯೋಗ ಮಾಡಲಾಗಿದೆ. ಆಗಸ್ಟ್ 12 ರಂದು ಲಸಿಕೆ ಬಿಡುಗಡೆಗೊಳ್ಳಲಿದೆ.

Recommended Video

ಯಾರಿಗೆ ಒಲಿಯಲಿದೆ ಟೀಮ್ ಇಂಡಿಯಾ ವಿಕೆಟ್ ಕೀಪರ್ ಆಗುವ ಅವಕಾಶ | Oneindia Kannada

ರಷ್ಯಾದಲ್ಲಿ ಸಧ್ಯ ಎರಡು ಕೊವಿಡ್ 19 ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು, ಗಮೇಲಿಯಾ ವ್ಯಾಕ್ಸಿನ್‌ನ್ನು ಇಂದು ಅಧಿಕೃತವಾಗಿ ನೋಂದಣಿ ಆಗಿದೆ.ಮತ್ತೊಂದು ವೆಕ್ಟರ್ ಸ್ಟೇಟ್ ರಿಸರ್ಚ್ ಸೆಂಟರ್ ಆಫ್ ವೈರಾಲಜಿ ಅಂಡ್ ರಿಜಿಸ್ಟರ್ ಆಗುವ ಗಮೇಲಿಯಾ ವ್ಯಾಕ್ಸಿನ್ ಅನ್ನು ಸೆಪ್ಟೆಂಬರ್‌ನಲ್ಲಿ ಸಾರ್ವಜನಿಕವಾಗಿ ಲಸಿಕೆ ಹಾಕಲು ಆರಂಭಿಸಲಾಗುತ್ತದೆ.

ಮೂಲಗಳ ಪ್ರಕಾರ ಮಾಸ್ಕೊದ ಗಮೆಲಿಯಾ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯದ ಜಂಟಿಯಾಗಿ ಲಸಿಕೆ ಅಭಿವೃದ್ಧಿ ಪಡಿಸಿದೆ. ಈ ಲಸಿಕೆಯನ್ನು ಎರಡು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮನುಷ್ಯರ ಮೇಲೆ ಪ್ರಯೋಗ ನಡೆಸಲಾಗಿದೆ. ಎರಡು ಮತ್ತು ಮೂರನೇ ಹಂತದ ಪ್ರಯೋಗಗಳಲ್ಲಿ ಭಾಗಿಯಾದ ಎಲ್ಲ 38 ಜನರಲ್ಲಿಯೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದನ್ನು ಗಮನಿಸಿರುವುದಾಗಿ ರಷ್ಯಾ ರಕ್ಷಣಾ ಸಚಿವಲಯ ಹೇಳಿದೆ.

ಜೂನ್‌ 18ರಿಂದ ಕ್ಲಿನಿಕಲ್‌ ಟ್ರಯಲ್‌ಗಳನ್ನು (ಮನುಷ್ಯರ ಮೇಲೆ) ಆರಂಭಿಸಲಾಗಿತ್ತು. ಪ್ರಯೋಗಕ್ಕೆ ಒಳಗಾದವರ ಪೈಕಿ ಮೊದಲ ಗುಂಪು ಜುಲೈ 15ರಂದು ಸಂಶೋಧನಾ ಕೇಂದ್ರಗಳಿಂದ ಬಿಡುಗಡೆಯಾಗಿದ್ದು, ಎರಡನೇ ಗುಂಪು ಜುಲೈ 20ರಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾಹಿತಿ ನೀಡಿದ್ದು, ರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಡ್‌19 ಲಸಿಕೆ ಜನರ ಬಳಕೆಗೆ ಬಿಡುಗಡೆಯಾಗಲಿದೆ. ರಷ್ಯಾದ ಆರೋಗ್ಯ ಸಚಿವಾಲಯ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಿದ್ದು, ಆ ಮೂಲಕ ಜಗತ್ತಿನ ಮೊದಲ ಕೋವಿಡ್‌- 19 ಲಸಿಕೆ ಮಂಗಳವಾರ ಅಧಿಕೃತವಾಗಿ ನೋಂದಣಿಯಾಗಿದೆ ಎಂದು ಹೇಳಿದ್ದಾರೆ.

'ದೇಶದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೊರೊನಾ ವೈರಸ್‌ ಲಸಿಕೆಯನ್ನು ಬಳಕೆಗೆ ನೋಂದಾಯಿಸಲಾಗಿದೆ ಹಾಗೂ ಒಬ್ಬಳು ಮಗಳಿಗೆ ಆಗಲೇ ಲಸಿಕೆ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ.

ಜನರು ಕಾತುರದಿಂದ ಕಾಯುತ್ತಿರುವ ವಿಶ್ವದ ಮೊದಲ ಕೊರೊನಾ ಲಸಿಕೆ ರಷ್ಯಾದಿಂದ ಆಗಸ್ಟ್ 12ರಂದೇ ಲಭ್ಯವಾಗಲಿದೆ. ಲಸಿಕೆಯನ್ನು ಗಮಲೇಯ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯ ಜಂಟಿಯಾಗಿ ಅಭಿವೃದ್ಧಿಪಡಿಸಿದೆ.

ವಿಶ್ವದ ಮೊದಲ ಕೊರೊನಾ ಲಸಿಕೆ ನೋಂದಣಿ ಆಯ್ತು: ಯಾರ ಮೇಲೆ ಮೊದಲ ಪ್ರಯೋಗ?ವಿಶ್ವದ ಮೊದಲ ಕೊರೊನಾ ಲಸಿಕೆ ನೋಂದಣಿ ಆಯ್ತು: ಯಾರ ಮೇಲೆ ಮೊದಲ ಪ್ರಯೋಗ?

ಆಗಸ್ಟ್ 12 ರಂದು ಮೊದಲ ಕೊರೊನಾವೈರಸ್ ಲಸಿಕೆ ನೋಂದಾಯಿಸಲಾಗುವುದು ಎಂದು ಉಪ ಆರೋಗ್ಯ ಸಚಿವ ಒಲೆಗ್ ಗ್ರಿಡ್ನೆವ್ ಹೇಳಿದ್ದಾರೆ.ಮೊದಲ ಕ್ಲಿನಿಕಲ್​ ಪ್ರಯೋಗಕ್ಕೆ ಒಳಗಾದ ಯೋಧರು ಜುಲೈ 13ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಎರಡನೇ ಹಂತದ ಪ್ರಯೋಗದಲ್ಲಿ ಭಾಗಿಯಾದವರು ಜುಲೈ 20ರಂದು ಡಿಸ್ಚಾರ್ಜ್​ ಆಗಿದ್ದರು.

ಅಕ್ಟೋಬರ್‌ನಲ್ಲಿ ಮಾಸ್ ವ್ಯಾಕ್ಸಿನ್

ಅಕ್ಟೋಬರ್‌ನಲ್ಲಿ ಮಾಸ್ ವ್ಯಾಕ್ಸಿನ್

ಅಕ್ಟೋಬರ್ 1 ರಂದು ಆರೋಗ್ಯ ಸಚಿವ ಮುರಾಸ್ಕೋ ಹೇಳಿರುವ ಪ್ರಕಾರ ಅಕ್ಟೋಬರ್ ತಿಂಗಳಿನಲ್ಲಿ ಸಾಮೂಹಿಕವಾಗಿ ಲಸಿಕೆ ನೀಡಲಾಗುತ್ತದೆ ಎಂದಿದ್ದಾರೆ. ವ್ಲಾಡಿಮಿರ್ ಪುಟಿನ್ ಮಗಳಿಗೆ ಮೊದಲು ಲಸಿಕೆ ನೀಡಲಾಗುತ್ತಿದ್ದು, ಬಳಿಕ ವೈದ್ಯರು ಹಾಗೂ ಶಿಕ್ಷಕರಿಗೆ ಲಸಿಕೆಯನ್ನು ನೀಡಲಾಗುತ್ತದೆ. ಲಸಿಕೆಯನ್ನು ರಷ್ಯಾದ ಜನರಿಗೆ ಉಚಿತವಾಗಿ ನೀಡಲಾಗುತ್ತದೆ.

ಸೆಪ್ಟೆಂಬರ್‌ನಿಂದ ಲಸಿಕೆ ವಿತರಣೆ ಆರಂಭ

ಸೆಪ್ಟೆಂಬರ್‌ನಿಂದ ಲಸಿಕೆ ವಿತರಣೆ ಆರಂಭ

ಇಂದು ಲಸಿಕೆ ನೋಂದಣಿಯಾಗಿದ್ದು, ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಸೆಪ್ಟೆಂಬರ್‌ನಿಂದ ಲಸಿಕೆ ವಿತರಣೆ ಕಾರ್ಯ ಆರಂಭವಾಗಲಿದೆ. 2021ರೊಳಗೆ ರಷ್ಯಾದ ವಿವಿಧ ಕಂಪನಿಗಳು ಕೊರೊನಾ ಲಸಿಕೆಯನ್ನು ಸಿದ್ಧಪಡಿಸಲಿವೆ.

ಮೊದಲು ಲಸಿಕೆ ಪಡೆಯುವವರು ಯಾರು?

ಮೊದಲು ಲಸಿಕೆ ಪಡೆಯುವವರು ಯಾರು?

ಲಸಿಕೆಯ ಮೊದಲ, ಎರಡನೇ ಹಾಗೂ ಮೂರನೇ ಹಂತದ ಪ್ರಯೋಗಗಳು ನಡೆಯುತ್ತಿದೆ.

ಪ್ರಯೋಗಗಳು ಬಹಳ ಮುಖ್ಯ. ಲಸಿಕೆ ಸುರಕ್ಷಿತವಾಗಿರಬೇಕು ಎಂದು ನಾವು ಅರ್ಥಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ವೈದ್ಯಕೀಯ ವೃತ್ತಿಪರರು ಮತ್ತು ಹಿರಿಯ ನಾಗರಿಕರು ಲಸಿಕೆ ಪಡೆಯುವವರಲ್ಲಿ ಮೊದಲಿಗರಾಗಿದ್ದಾರೆ ಅಂತ ಗ್ರಿಡ್ನೆವ್ ಹೇಳಿದ್ದಾರೆ.

ಅಂತಿಮ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ

ಅಂತಿಮ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ

ಈ ಹಿಂದಿನ ವರದಿಯಲ್ಲಿ, ಗಮಲೇಯ ನ್ಯಾಷನಲ್ ರಿಸರ್ಚ್ ಸೆಂಟರ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಕೊರೊನಾವೈರಸ್ ಲಸಿಕೆಯನ್ನು ಪರೀಕ್ಷಿಸುವ ಸ್ವಯಂಸೇವಕರ ಅಂತಿಮ ಪರಿಶೀಲನೆಯು ಭಾಗವಹಿಸುವ ಎಲ್ಲರಲ್ಲೂ ರೋಗನಿರೋಧಕ ಶಕ್ತಿಯನ್ನು ತೋರಿಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿತ್ತು.

ಜೂನ್ 18ರಿಂದ ಕ್ಲಿನಿಕಲ್ ಟ್ರಯಲ್ ಆರಂಭವಾಗಿತ್ತು

ಜೂನ್ 18ರಿಂದ ಕ್ಲಿನಿಕಲ್ ಟ್ರಯಲ್ ಆರಂಭವಾಗಿತ್ತು

ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಜೂನ್ 18 ರಂದು ಪ್ರಾರಂಭವಾಗಿದ್ದು, ಈ ಪ್ರಯೋಗದಲ್ಲಿ 38 ಸ್ವಯಂಸೇವಕರು ಇದ್ದರು ಎನ್ನಲಾಗಿದೆ. ಮತ್ತು ಮೊದಲ ಗುಂಪನ್ನು ಜುಲೈ 15 ರಂದು ಮತ್ತು ಎರಡನೇ ಗುಂಪನ್ನು ಜುಲೈ 20 ರಂದು ಬಿಡುಗಡೆ ಮಾಡಲಾಯಿತು ಎನ್ನಲಾಗಿದೆ.

ಪ್ರಯೋಗದಲ್ಲಿ ಭಾಗವಹಿಸಿದ್ದ ಸ್ವಯಂಸೇವರು ಆರೋಗ್ಯವಾಗಿದ್ದಾರೆ

ಪ್ರಯೋಗದಲ್ಲಿ ಭಾಗವಹಿಸಿದ್ದ ಸ್ವಯಂಸೇವರು ಆರೋಗ್ಯವಾಗಿದ್ದಾರೆ

ಇದಲ್ಲದೆ, ವೆಕ್ಟರ್ ಸ್ಟೇಟ್ ರಿಸರ್ಚ್ ಸೆಂಟರ್ ಆಫ್ ವೈರಾಲಜಿ ಮತ್ತು ಬಯೋಟೆಕ್ನಾಲಜಿ ಅಭಿವೃದ್ಧಿಪಡಿಸಿದ ಎರಡನೇ ಕೊವಿಡ್ -19 ಲಸಿಕೆ ಪ್ರಯೋಗದಲ್ಲಿ ಭಾಗವಹಿಸಿದ ಸ್ವಯಂಸೇವಕರು ಉತ್ತಮ ಆರೋಗ್ಯದಲ್ಲಿದ್ದಾರೆ ಮತ್ತು ವ್ಯಾಕ್ಸಿನೇಷನ್‌ನ ಯಾವುದೇ ಅಡ್ಡಪರಿಣಾಮಗಳು ಕಂಡುಬರುವುದಿಲ್ಲ ಎಂದು ತಿಳಿಸಿದ್ದಾರೆ.

English summary
Russia has claimed that it is going to register the Corona virus vaccine on August 12. Russia's Deputy Health Minister has said that Russia will register its first vaccine against the corona virus on August 12.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X