ರಷ್ಯಾದಲ್ಲಿ ನೀರಿಗಾಗಿ ಪರದಾಟ: 'ಜೋಡಿಯಾಗಿ ಸ್ನಾನ ಮಾಡಿ'
ಸಮರ, ಜುಲೈ 5: ಫೀಫಾ ವಿಶ್ವಕಪ್‌ನ ಆತಿಥ್ಯ ವಹಿಸಿಕೊಂಡಿರುವ ರಷ್ಯಾದೆಡೆಗೆ ಜಗತ್ತಿನ ಕಣ್ಣುನೆಟ್ಟಿದೆ. ದೂರದೇಶಗಳಿಂದ ಬರುತ್ತಿರುವ ಕ್ರೀಡಾಪ್ರೇಮಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಮೆಚ್ಚುಗೆ ಪಡೆಯುವ ಜತೆಗೆ, ಒಂದಷ್ಟು ಸಮಸ್ಯೆಗಳೂ ರಷ್ಯಾವನ್ನು ಕಾಡುತ್ತಿವೆ.
ರಷ್ಯಾದ ನೈಋತ್ಯ ಭಾಗದಲ್ಲಿರುವ ಸಮರ ನಗರದಲ್ಲಿ ಅನೇಕ ಪಂದ್ಯಗಳು ನಡೆಯುತ್ತಿವೆ. ಆದರೆ, ಈ ನಗರದ ಜನರು ನೀರಿನ ಕೊರತೆಯಿಂದ ಪರದಾಡುತ್ತಿದ್ದಾರೆ.
ನೀರಿನ ಮಿತಬಳಕೆ ಹಾಗೂ ರಕ್ಷಣೆಗೆ ಮುಂದಾಗಿರುವ ಅಲ್ಲಿನ ಆಡಳಿತ ಕಡಿಮೆ ನೀರನ್ನು ಬಳಸುವ ಸಲುವಾಗಿ ವಿಚಿತ್ರ ಆದೇಶವನ್ನು ಹೊರಡಿಸಿದೆ.

ಫುಟ್ಬಾಲ್ ಅಭಿಮಾನಿಗಳಿಗಾಗಿ ನೀರನ್ನು ಉಳಿಸಲು ಜೋಡಿಯಾಗಿ ಷವರ್ ಸ್ನಾನ ಮಾಡುವಂತೆ ಅಲ್ಲಿನ ನಿವಾಸಿಗಳಿಗೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಮಾಸ್ಕೊ ಟೈಮ್ಸ್ ವರದಿ ಮಾಡಿದೆ.
ಫುಟ್ಬಾಲ್‌ನ ಮೆಗಾ ಕಾರ್ಯಕ್ರಮದ ಸಲುವಾಗಿ ಮತ್ತು ಹೆಚ್ಚುತ್ತಿರುವ ಉಷ್ಣತೆಯ ಕಾರಣದಿಂದ ನೀರಿಗೆ ಬೇಡಿಕೆ ಹೆಚ್ಚಾಗಿದ್ದರಿಂದ ಅಧಿಕಾರಿಗಳು ನಗರಕ್ಕೆ ಪೂರೈಸುವ ನೀರಿನ ಪ್ರಮಾಣವನ್ನು ಕೆಲವು ದಿನಗಳಿಂದ ಹೆಚ್ಚಿಸಿದ್ದಾರೆ.
ನಗರಕ್ಕೆ ಭೇಟಿ ನೀಡುತ್ತಿರುವ ಸಾವಿರಾರು ಪ್ರವಾಸಿಗರಿಂದ ನೀರಿನ ಬಳಕೆ ಹೆಚ್ಚಾಗಿದೆ ಎಂದು ನೀರು ಸರಬರಾಜು ಕಂಪೆನಿಯೊಂದರ ಹೇಳಿಕೆ ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.
ಬೇಡಿಕೆ ಹೆಚ್ಚುತ್ತಿರುವ ಕಾರಣ ನಗರದ ಸುತ್ತಮುತ್ತ ಇರುವ ನೀರಿನ ಮೂಲಗಳ ಮೇಲೆ ಒತ್ತಡ ಹೆಚ್ಚುತ್ತಿದ್ದು, ಅವುಗಳಲ್ಲಿ ನೀರು ಖಾಲಿಯಾಗುತ್ತಿದೆ. ಹೀಗಾಗಿ ಜೋಡಿಯಾಗಿ ಸ್ನಾನ ಮಾಡುವಂತೆ ನಿವಾಸಿಗಳಿಗೆ ಸೂಚಿಸಲಾಗಿದೆ.
ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೂ ಸಮರದಲ್ಲಿ ಐದು ಪಂದ್ಯಗಳು ನಡೆದಿವೆ. ಇಂಗ್ಲೆಂಡ್ ಮತ್ತು ಸ್ವೀಡನ್ ನಡುವೆ ಜುಲೈ 6ರಂದು ನಡೆಯಲಿರುವ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಅತಿಥ್ಯ ವಹಿಸಲಿದೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications