ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಷ್ಯಾದಲ್ಲಿ ಸಿದ್ಧವಾದ ವಿಶ್ವದ ಮೊದಲ ಕೊರೊನಾ ಲಸಿಕೆ ಹೆಸರೇನು ಗೊತ್ತೇ?

|
Google Oneindia Kannada News

ವಿಶ್ವದ ಮೊಟ್ಟ ಮೊದಲ ಕೊರೊನಾ ಲಸಿಕೆ ರಷ್ಯಾದಲ್ಲಿ ಸಿದ್ಧಗೊಂಡಿದ್ದು ಅದಕ್ಕೆ 'ಸ್ಪುಟ್ನಿಕ್ ವಿ' ಎಂದು ನಾಮಕರಣ ಮಾಡಲಾಗಿದೆ.

Recommended Video

ಕೇಂದ್ರದ ಮುಂದೆ ಪರಿಹಾರ ಕೇಳೋಕೆ ಇವರಿಗೆ ಧಮ್ ಇಲ್ಲ | Oneindia Kannada

ಇಂದು ರಷ್ಯಾದಲ್ಲಿ ನೋಂದಣಿ ಮಾಡಲಾಗಿದ್ದು, ಆಗಸ್ಟ್ 12 ರಂದು ಅಂದರೆ ಬುಧವಾರ ಲಸಿಕೆ ಬಿಡುಗಡೆಯಾಗಲಿದೆ. ವಿಶ್ವದ ಮೊದಲ ಸ್ಯಾಟಲೈಟ್ ಹೆಸರೂ ಕೂಡ ಸ್ಪುಟ್ನಿಕ್ ಆಗಿದ್ದು, ವಿಶ್ವದಲ್ಲೇ ಮೊದಲ ಕೊರೊನಾ ಲಸಿಕೆ ಇದಾಗಿರುವುದರಿಂದ ಇದೇ ಹೆಸರನ್ನು ಇಡಲಾಗಿದೆ.

ವಿಶ್ವದ ಮೊದಲ ಕೊರೊನಾ ಲಸಿಕೆ ನಾಳೆ ಬಿಡುಗಡೆ: ನೀವು ತಿಳಿಯಬೇಕಾಗಿದ್ದಿಷ್ಟು ವಿಶ್ವದ ಮೊದಲ ಕೊರೊನಾ ಲಸಿಕೆ ನಾಳೆ ಬಿಡುಗಡೆ: ನೀವು ತಿಳಿಯಬೇಕಾಗಿದ್ದಿಷ್ಟು

ಮೊದಲು ಸ್ಪುಟ್ನಿಕ್ ವಿ ಲಸಿಕೆಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮಗಳ ಮೇಲೆ ಪ್ರಯೋಗಿಸಲಾಗುತ್ತದ. ಬಳಿಕ ವೈದ್ಯರು ಹಾಗೂ ಶಿಕ್ಷಕರಿಗೆ ನೀಡಲಾಗುತ್ತದೆ.

Russia Names New COVID-19 Vaccine Sputnik V

ಅಷ್ಟೇ ಅಲ್ಲದ ರಷ್ಯಾದ ಜನತೆಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗುತ್ತದೆ.ಮೂಲಗಳ ಪ್ರಕಾರ ಮಾಸ್ಕೊದ ಗಮೆಲಿಯಾ ಸಂಶೋಧನಾ ಸಂಸ್ಥೆ ಮತ್ತು ರಷ್ಯಾದ ರಕ್ಷಣಾ ಸಚಿವಾಲಯದ ಜಂಟಿಯಾಗಿ ಲಸಿಕೆ ಅಭಿವೃದ್ಧಿ ಪಡಿಸಿದೆ.

ಈ ಲಸಿಕೆಯನ್ನು ಎರಡು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಮನುಷ್ಯರ ಮೇಲೆ ಪ್ರಯೋಗ ನಡೆಸಲಾಗಿದೆ. ಎರಡು ಮತ್ತು ಮೂರನೇ ಹಂತದ ಪ್ರಯೋಗಗಳಲ್ಲಿ ಭಾಗಿಯಾದ ಎಲ್ಲ 38 ಜನರಲ್ಲಿಯೂ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದನ್ನು ಗಮನಿಸಿರುವುದಾಗಿ ರಷ್ಯಾ ರಕ್ಷಣಾ ಸಚಿವಲಯ ಹೇಳಿದೆ.

ಇನ್ನು ಭಾರತ ಮತ್ತು ಬ್ರೆಜಿಲ್ ಸೇರಿದಂತೆ ವಿಶ್ವದ 20 ರಾಷ್ಟ್ರಗಳು ರಷ್ಯಾದ ಈ ಲಸಿಕೆಯನ್ನು ತಮ್ಮ ದೇಶಗಳಲ್ಲಿ ಉತ್ಪಾದಿಸಲು ಮುಂದೆ ಬಂದಿವೆ ಎಂದು ರಷ್ಯಾ ಹೇಳಿದೆ. ಆದರೆ ಅಮೆರಿಕ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಮಾತ್ರ ರಷ್ಯಾದ ಸಲಿಕೆ ಬಗ್ಗೆ ಅಪಸ್ವರ ಎತ್ತಿದ್ದು, ಅದರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಆದರೆ ಏನೇ ಇರಲಿ ರಷ್ಯಾದ ಈ ಲಸಿಕೆ ಯಶಸ್ವಿಯಾಗಲಿ ಎನ್ನುವುದೇ ವಿಶ್ವದ ಜನರ ಹಾರೈಕೆಯಾಗಿದೆ.

ಈ ಬಗ್ಗೆ ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾಹಿತಿ ನೀಡಿದ್ದು, ರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಡ್‌19 ಲಸಿಕೆ ಜನರ ಬಳಕೆಗೆ ಬಿಡುಗಡೆಯಾಗಲಿದೆ.

ರಷ್ಯಾದ ಆರೋಗ್ಯ ಸಚಿವಾಲಯ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಿದ್ದು, ಆ ಮೂಲಕ ಜಗತ್ತಿನ ಮೊದಲ ಕೋವಿಡ್‌- 19 ಲಸಿಕೆ ಮಂಗಳವಾರ ಅಧಿಕೃತವಾಗಿ ನೋಂದಣಿಯಾಗಿದೆ ಎಂದು ಹೇಳಿದ್ದಾರೆ.

English summary
Russia has named its first approved COVID-19 vaccine 'Sputnik V' for foreign markets. It is a reference to the world's first satellite Sputnik and what Moscow sees as its success at becoming the first country to approve a vaccine, a top official said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X