ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದೊಂದಿಗೆ ಕೊರೊನಾ ಲಸಿಕೆಯ ಸಂಪೂರ್ಣ ಮಾಹಿತಿ ಹಂಚಿಕೊಂಡ ರಷ್ಯಾ

|
Google Oneindia Kannada News

ಮಾಸ್ಕೋ, ಸೆಪ್ಟೆಂಬರ್ 07: ರಷ್ಯಾವು ವಿಶ್ವದ ಮೊದಲ ಕೊರೊನಾ ಲಸಿಕೆ ಸ್ಪುಟ್ನಿಕ್ 5 ಕುರಿತು ಸಂಪೂರ್ಣ ಅಂಕಿ ಸಂಖ್ಯೆಗಳ ಮಾಹಿತಿಯನ್ನು ಭಾರತದೊಂದಿಗೆ ಹಂಚಿಕೊಂಡಿದೆ.

Recommended Video

Sputnik V Vaccine ಎಲ್ಲಾ ಪ್ರಯೋಗಗಳಲ್ಲೂ ಯಶಸ್ಸು ,Russiaದ ಮತ್ತೊಂದು ಮೈಲುಗಲ್ಲು | Oneindia Kannada

ಮಾಸ್ಕೋದಲ್ಲಿ ಸ್ಪುಟ್ನಿಕ್ 5 ಲಸಿಕೆಯ ಮೊದಲ ಹಾಗೂ ಎರಡನೇ ಹಂತದ ಪ್ರಯೋಗಗಳು ನಡೆದಿವೆ. ಇದೀಗ ಅಂಕಿ, ಸಂಖ್ಯೆಗಳು ಸೇರಿದಂತೆ ಗೌಪ್ಯ ಮಾಹಿತಿಯನ್ನು ರಷ್ಯಾ ಭಾರತದೊಂದಿಗೆ ಹಂಚಿಕೊಂಡಿದೆ.

ಕೊರೊನಾ ಲಸಿಕೆ ತಯಾರಿಕೆಗೆ ಭಾರತದ ಸಹಕಾರ ಕೇಳಿದ ರಷ್ಯಾಕೊರೊನಾ ಲಸಿಕೆ ತಯಾರಿಕೆಗೆ ಭಾರತದ ಸಹಕಾರ ಕೇಳಿದ ರಷ್ಯಾ

ಮೊದಲು ಹಾಗೂ ಎರಡನೇ ಹಂತದ ಪ್ರಯೋಗದಲ್ಲಿ 76 ಮಂದಿಯ ಮೇಲೆ ಪ್ರಯೋಗ ನಡೆಸಲಾಗಿತ್ತು. ಪ್ರತಿಯೊಬ್ಬರಲ್ಲೂ ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿದೆ.

ಕೋವಿಡ್ ಸೋಂಕಿತರು; ವಿಶ್ವದಲ್ಲಿ ಭಾರತಕ್ಕೆ 2ನೇ ಸ್ಥಾನಕೋವಿಡ್ ಸೋಂಕಿತರು; ವಿಶ್ವದಲ್ಲಿ ಭಾರತಕ್ಕೆ 2ನೇ ಸ್ಥಾನ

ಇದು ರೋಗ ನಿರೋಧಕ ಲಸಿಕೆಯಾಗಿದೆ. ಯಾವುದೇ ರೀತಿಯ ಅಡ್ಡ ಪರಿಣಾಮವನ್ನುಂಟು ಮಾಡುವುದಿಲ್ಲ ಎಂಬುದು ಸಾಬೀತಾಗಿದೆ.

ರಷ್ಯಾ ಲಸಿಕೆ ಪಡೆಯಲು ಪ್ರಯತ್ನ

ರಷ್ಯಾ ಲಸಿಕೆ ಪಡೆಯಲು ಪ್ರಯತ್ನ

ರಷ್ಯಾದಿಂದ ಲಸಿಕೆ ತರಿಸಿಕೊಳ್ಳುವ ಪ್ರಯತ್ನದಲ್ಲಿ ನಾವಿದ್ದೇವೆ. ರಷ್ಯಾದಲ್ಲಿ ಬಯೋಟೆಕ್ನಾಲಜಿ ವಿಭಾಗದ ಕಾರ್ಯದರ್ಶಿ ರೇಣು ಸ್ವರೂಪ್, ಭಾರತೀಯ ರಾಯಭಾರಿ ಡಿಬಿ ವೆಂಕಟೇಶ್ ವರ್ಮ ಅವರ ಬಳಿ ಮಾತುಕತೆ ನಡೆಸುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಮೂರನೇ ಕ್ಲಿನಿಕಲ್ ಪ್ರಯೋಗಕ್ಕೆ ಭಾರತದಲ್ಲಿ ಅನುಮತಿ

ಮೂರನೇ ಕ್ಲಿನಿಕಲ್ ಪ್ರಯೋಗಕ್ಕೆ ಭಾರತದಲ್ಲಿ ಅನುಮತಿ

ಸಮಗ್ರ ದತ್ತಾಂಶವನ್ನು ನೀಡಲಾಗಿದ್ದು, ಭಾರತದಲ್ಲಿ ಮೂರನೇ ಕ್ಲಿನಿಕಲ್ ಪ್ರಯೋಗಕ್ಕೆ ಅನುಮತಿ ಕೋರಿದ್ದಾರೆ. ಭಾರತದಿಂದ ಅನುಮೋದನೆ ಸಿಕ್ಕಿದ ನಂತರ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ಆರಂಭವಾಗುತ್ತದೆ.ಸ್ಪುಟ್ನಿಕ್ 5 ವೆಬ್‌ಸೈಟ್ ಮಾಹಿತಿ ಪ್ರಕಾರ ಸೌದಿ ಅರೇಬಿಯಾ, ಯುಎಇ, ಬ್ರೆಜಿಲ್ ಮತ್ತು ಫಿಲಿಪೈನ್ಸ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲು ರಷ್ಯಾ ಮುಂದಾಗಿದೆ.

ಸೆಪ್ಟೆಂಬರ್ ಅಂತ್ಯದಲ್ಲಿ ಲಸಿಕೆ ತಯಾರಿಕೆ

ಸೆಪ್ಟೆಂಬರ್ ಅಂತ್ಯದಲ್ಲಿ ಲಸಿಕೆ ತಯಾರಿಕೆ

ಸೆಪ್ಟೆಂಬರ್ ಅಂತ್ಯದಲ್ಲಿ ಲಸಿಕೆ ತಯಾರಿಕೆ ನಡೆಯಲಿದೆ. 20 ದೇಶಗಳಿಂದ ಬೇಡಿಕೆ ಬಂದಿದೆ. ಈ ಎಲ್ಲಾ ರಾಷ್ಟ್ರಗಳು ಕೊರೊನಾ ಲಸಿಕೆ ಪಡೆಯಲು ಆಸಕ್ತಿ ತೋರಿಸಿದ್ದಾರೆ. ಯುಎಇ, ಸೌದಿ ಅರೇಬಿಯಾ, ಇಂಡೋನೇಷ್ಯಾ, ಫಿಲಿಪೈನ್ಸ್, ಬ್ರೆಜಿಲ್, ಮೆಕ್ಸಿಕೋ ಲಸಿಕೆ ಪಡೆಯಲು ಮುಂದಾಗಿವೆ.

 ಮೂರನೇ ಹಂತದ ಪ್ರಯೋಗದಲ್ಲಿ 40 ಸಾವಿರ ಮಂದಿ ಭಾಗಿ

ಮೂರನೇ ಹಂತದ ಪ್ರಯೋಗದಲ್ಲಿ 40 ಸಾವಿರ ಮಂದಿ ಭಾಗಿ

ಮೂರನೇ ಹಂತದ ಪ್ರಯೋಗದಲ್ಲಿ 40 ಸಾವಿರ ಮಂದಿ ಸ್ವಯಂ ಸೇವಕರು ಭಾಗಿಯಾಗಲಿದ್ದಾರೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ. ಪ್ರತಿಯೊಂದು ಸ್ವಯಂ ಸೇವಕರಿಗೂ ಕ್ಯೂ ಆರ್ ಕೋಡ್ ನೀಡಲಾಗಿದೆ.

English summary
Even as Lancet published the results of Phase-1 and Phase-2 clinical trial data of the Sputnik V vaccine cleared by Moscow regulators for public use the Russian research institute has now submitted “comprehensive data” on the vaccine’s safety and efficacy to Indian authorities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X