Breaking: ಉಕ್ರೇನ್‌ನಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಸಾವು
ಕೀವ್, ಮಾರ್ಚ್ 1: ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಹಾವೇರಿ ಜಿಲ್ಲೆಯ ನವೀನ್ ಎಂಬ ವಿದ್ಯಾರ್ಥಿ ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ವಾಸವಾಗಿದ್ದರು. ಮಂಗಳವಾರ ಬೆಳಗ್ಗೆ ತಿಂಡಿ ತರುವುದಕ್ಕಾಗಿ ಹೊರಗೆ ಹೋಗಿದ್ದ ವೇಳೆ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Recommended Video
With profound sorrow we confirm that an Indian student lost his life in shelling in Kharkiv this morning. The Ministry is in touch with his family.
— Arindam Bagchi (@MEAIndia) March 1, 2022
We convey our deepest condolences to the family.
ನವೀನ್ ಜೊತೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ರಾಣೆಬೆನ್ನೂರು ತಾಲೂಕಿನ ಸ್ನೇಹಿತ ಪ್ರವೀಣ್ ಎಂಬಾತನು ಈ ಸಾವಿನ ಬಗ್ಗೆ ಪೋಷಕರಿಗೆ ಮೊಬೈಲ್ ಮೂಲಕ ಸಂದೇಶ ರವಾನಿಸಿದ್ದಾನೆ. ಸ್ನೇಹಿತನ ಸಂದೇಶದ ನಡುವೆ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಕೂಡ ಭಾರತೀಯ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಭಾರತೀಯ ವಿದೇಶಾಂಗ ಸಚಿವಾಲಯದ ಟ್ವೀಟ್:
ಇಂದು ಬೆಳಿಗ್ಗೆ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾವು ತೀವ್ರ ದುಃಖದಿಂದ ದೃಢಪಡಿಸುತ್ತೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ. ಕುಟುಂಬಕ್ಕೆ ನಾವು ಸಂತಾಪವನ್ನು ತಿಳಿಸುತ್ತೇವೆ.
ಖಾರ್ಕಿವ್‌ನಲ್ಲಿರುವ ಭಾರತೀಯ ಪ್ರಜೆಗಳು ಸೇರಿದಂತೆ ಇತರ ಸಂಘರ್ಷ ವಲಯಗಳಲ್ಲಿರುವ ನಗರಗಳಿಂದ ಸುರಕ್ಷಿತವಾಗಿ ಭಾರತೀಯ ಪ್ರಜೆಗಳನ್ನು ಕಳುಹಿಸಿಕೊಡುವಂತೆ ವಿದೇಶಾಂಗ ಕಾರ್ಯದರ್ಶಿ ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳನ್ನು ಸಂಪರ್ಕಿಸಿದ್ದಾರೆ.












Click it and Unblock the Notifications