ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುದ್ಧ ನಿಲ್ಲಿಸುವಂತೆ ವಿಶ್ವಸಂಸ್ಥೆಗೆ ಉಕ್ರೇನ್ ರಾಯಭಾರಿ ಒತ್ತಾಯ

|
Google Oneindia Kannada News

ವಾಶಿಂಗ್ಟನ್, ಫೆಬ್ರವರಿ 24: ಉಕ್ರೇನ್‌ನಲ್ಲಿ ಯುದ್ಧ ನಡೆಯದಂತೆ ತಡೆಯಲು ವಿಶ್ವಸಂಸ್ಥೆಯ ಉಕ್ರೇನಿಯನ್ ರಾಯಭಾರಿಯು ಯುಎನ್ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಒತ್ತಾಯಿಸಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ "ಯುದ್ಧವನ್ನು ನಿಲ್ಲಿಸಲು" ಇತರ ಸದಸ್ಯ ರಾಷ್ಟ್ರಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

"ಯುದ್ಧವನ್ನು ನಿಲ್ಲಿಸುವುದು ಈ ಭದ್ರತಾ ಮಂಡಳಿಯ ಜವಾಬ್ದಾರಿಯಾಗಿದೆ. ಹಾಗಾಗಿ ಯುದ್ಧವನ್ನು ನಿಲ್ಲಿಸಲು ಸಾಧ್ಯವಿರುವ ಎಲ್ಲ ರೀತಿ ಕ್ರಮಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುವಂತೆ ನಿಮ್ಮನ್ನು ಆಹ್ವಾನಿಸುತ್ತೇನೆ," ಎಂದು ಸೆರ್ಗಿ ಕಿಸ್ಲಿಟ್ಯಾ ಹೇಳಿದ್ದಾರೆ. ವಿಶ್ವಸಂಸ್ಥೆಯು ರಷ್ಯಾದ ರಾಯಭಾರಿಯನ್ನು ಕೇಳುತ್ತದೆಯೇ ಅಥವಾ ಅದಕ್ಕೂ ಮೊದಲು "ನಾನು ನಿಮ್ಮ ಅಧ್ಯಕ್ಷರು ಯುದ್ಧವನ್ನು ಘೋಷಿಸುವ ವೀಡಿಯೊವನ್ನು ಪ್ಲೇ ಮಾಡಬೇಕೇ?" ಎಂದು ಪ್ರಶ್ನೆ ಮಾಡಿದ್ದಾರೆ.

Breaking: ಉಕ್ರೇನ್‌ ಮೇಲೆ ಯುದ್ಧ ಘೋಷಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್Breaking: ಉಕ್ರೇನ್‌ ಮೇಲೆ ಯುದ್ಧ ಘೋಷಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಉಕ್ರೇನ್ ರಾಯಭಾರಿಯ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ರಷ್ಯಾದ ರಾಯಭಾರಿ, "ಇದನ್ನು ಯುದ್ಧ ಎಂದು ಕರೆಯಲಾಗುವುದಿಲ್ಲ, ಇದನ್ನು ಡಾನ್ಬಾಸ್ನಲ್ಲಿ ವಿಶೇಷ ಮಿಲಿಟರಿ ಕಾರ್ಯಾಚರಣೆ ಎಂದು ಕರೆಯಲಾಗುತ್ತದೆ," ಎಂದು ಹೇಳಿದರು.

Russia-Ukraine War: Ukrainian ambassador to the UN urges Security Council to stop the war

ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ರಷ್ಯಾ:

ಉಕ್ರೇನ್‌ನಲ್ಲಿ ಯುದ್ಧಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕರೆ ನೀಡಿದ್ದಾರೆ. ನಿರೀಕ್ಷೆಯಂತೆಯೇ ಎರಡೂ ದೇಶಗಳ ಮಧ್ಯೆ ಯುದ್ಧ ನಡೆಯಲಿದೆ. ಉಕ್ರೇನ್ ಸೇನೆಗೆ ಶರಣಾಗುವಂತೆ ಅವರು ಆಗ್ರಹಿಸಿದ್ದಾರೆ. ಇದರಿಂದ ಜಾಗತಿಕ ಮಟ್ಟದಲ್ಲಿ ಭಾರಿ ತಲ್ಲಣ ಉಂಟಾಗಿದೆ. ಈ ಯುದ್ಧವು ಜಗತ್ತಿನಾದ್ಯಂತ ದೇಶಗಳ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ರಷ್ಯಾದೊಂದಿಗಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಕ್ರೇನ್ ಸರ್ಕಾರವು ಮಧ್ಯ ರಾತ್ರಿಯಿಂದ ಬೆಳಗ್ಗೆ 7 ಗಂಟೆವರೆಗೆ ಪೂರ್ವ ಉಕ್ರೇನ್‌ನ ವಿಮಾನ ನಿಲ್ದಾಣಗಳನ್ನು ಮುಚ್ಚಲು ಆದೇಶಿಸಿದೆ.

ನ್ಯಾಟೋ ರಾಷ್ಟ್ರಗಳಿಗೆ ಪುಟಿನ್ ಸಂದೇಶ:

ತಮ್ಮ ಉದ್ದೇಶಗಳನ್ನು ಘೋಷಿಸಲು ಪುಟಿನ್ ಅವರು ಟಿವಿಯಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. "ನಾನು ಸೇನಾ ಕಾರ್ಯಾಚರಣೆ ನಡೆಸಲು ನಿರ್ಧಾರ ತೆಗೆದುಕೊಂಡಿದ್ದೇನೆ" ಎಂದು ಅವರು ಮಾಸ್ಕೋದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಪ್ರಕಟಣೆ ಹೊರಡಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಯಾರಾದರೂ ಮಧ್ಯಪ್ರವೇಶ ಮಾಡಿದರೆ, ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದು ಅಮೆರಿಕ ನೇತೃತ್ವದ ನ್ಯಾಟೋ ಮಿತ್ರಕೂಟದ ದೇಶಗಳಿಗೆ ಅವರು ರವಾನಿಸುವ ಎಚ್ಚರಿಕೆಯ ಸಂದೇಶವಾಗಿದೆ.

Recommended Video

ರಷ್ಯಾ- ಉಕ್ರೇನ್ ಬಿಕ್ಕಟ್ಟು:ಕೇವಲ ಒಂದು ಗಂಟೆಯಲ್ಲೇ 8 ಲಕ್ಷ ಕೋಟಿ ರೂ.ಅಧಿಕ ಕುಸಿತ | Oneindia Kannada

English summary
Russia-Ukraine crisis: Ukrainian ambassador to the UN urges Security Council to stop the war.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X