Video: ಉಕ್ರೇನ್‌ನ ಶಾಪಿಂಗ್ ಮಾಲ್‌ಗೆ ಅಪ್ಪಳಿಸಿದ್ದು ಹೇಗೆ ಕ್ಷಿಪಣಿ?
ಕೀವ್, ಜೂನ್ 27: ಉಕ್ರೇನ್‌ನಲ್ಲಿ ಕಿಕ್ಕಿರಿದು ತುಂಬಿದ್ದ ಶಾಪಿಂಗ್ ಮಾಲ್‌ಗೆ ರಷ್ಯಾದ ಕ್ಷಿಪಣಿಯೊಂದು ಬಂದು ಅಪ್ಪಳಿಸಿದ್ದು, ಸ್ಥಳದಲ್ಲಿ ಇಬ್ಬರು ಪ್ರಾಣ ಬಿಟ್ಟಿದ್ದರೆ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪೂರ್ವ ಉಕ್ರೇನ್‌ನ "ಕಿಕ್ಕಿರಿದ" ಮಾಲ್‌ಗೆ ಕ್ಷಿಪಣಿ ಅಪ್ಪಳಿಸಿತು. ಈ ವೇಳೆ ಇಬ್ಬರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಬಗ್ಗೆ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ದಾಳಿ ನಡೆದಾಗ ಕ್ರೆಮೆನ್‌ಚುಕ್‌ನಲ್ಲಿರುವ ಶಾಪಿಂಗ್ ಸೆಂಟರ್‌ನಲ್ಲಿ ಸಾವಿರಕ್ಕೂ ಹೆಚ್ಚು ನಾಗರಿಕರು ಇದ್ದರು ಎಂದು ತಿಳಿಸಿದ್ದಾರೆ.
"ಶಾಪಿಂಗ್ ಮಾಲ್ ಮೇಲೆ ಆಕ್ರಮಣಕಾರರು ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿದರು. ಈ ವೇಳೆ ಮಾಲ್‌ನಲ್ಲಿ ಸಾವಿರಕ್ಕೂ ಹೆಚ್ಚು ನಾಗರಿಕರು ಇದ್ದರು. ಮಾಲ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಆದರೆ ಈವರೆಗೂ ಎಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂಬುದನ್ನು ಊಹಿಸುವುದಕ್ಕೆ ಸಾಧ್ಯವಾಗಿಲ್ಲ," ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟೆಲಿಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಕ್ಷಿಪಣಿ ದಾಳಿಯ ವಿಡಿಯೋ ವೈರಲ್: ಉಕ್ರೇನ್ ನೆಲದಲ್ಲಿ ರಷ್ಯಾ ನಡೆಸಿರುವ ಕ್ಷಿಪಣಿ ದಾಳಿಯ ವಿಡಿಯೋದಲ್ಲಿ ದಟ್ಟವಾದ ಹೊಗೆ ಆಕಾಶಕ್ಕೆ ಚಿಮ್ಮುತ್ತಿರುವುದು ಕಂಡು ಬಂದಿದೆ. ಬೆಂಕಿಯ ಬೃಹತ್ ಜ್ವಾಲೆಯಲ್ಲಿ ಮಾಲ್ ಸುಟ್ಟುಹೋಗುತ್ತಿರುವುದು ವಿಡಿಯೋದಲ್ಲಿ ಕಾಣುತ್ತಿದೆ. ಇದರ ಮಧ್ಯೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಯು ಬೆಂಕಿ ನಂದಿಸುವುದರ ಜೊತೆಗೆ ಗಾಯಗೊಂಡವರನ್ನು ರಕ್ಷಿಸುವ ಕಾರ್ಯಾಚರಣೆ ನಡೆಸಿದರು. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
⚡️ Volodymyr Zelenskyy published a video of a fire in a shopping center in Kremenchug
— NEXTA (@nexta_tv) June 27, 2022
"The occupiers launched a missile strike at shopping center. There were more than a thousand civilians. The mall is on fire, rescuers are extinguishing fire, number of victims is unimaginable." pic.twitter.com/Src2qh3Tdf
ಗಾಯಗೊಂಡವರು ಆಸ್ಪತ್ರೆಗೆ ಸ್ಥಳಾಂತರ: ಕ್ಷಿಪಣಿ ದಾಳಿಯಲ್ಲಿ ಗಾಯಗೊಂಡವರಿಗೆ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದರು. ಈ ವೇಳೆ ವೈದ್ಯರಿಗೆ ಸ್ಥಳೀಯರೇ ಸಹಾಯ ಮಾಡುತ್ತಿರುವುದು ಮತ್ತೊಂದು ವಿಡಿಯೋದಲ್ಲಿ ಕಂಡು ಬಂದಿತು. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಯಿತು.
ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಯುದ್ಧ: ಕಳೆದ ಫೆಬ್ರವರಿಯಲ್ಲಿ ಉಕ್ರೇನ್ ವಿರುದ್ಧ ಯುದ್ಧ ಆರಂಭಿಸಿದ ರಷ್ಯಾ ನಾಲ್ಕು ತಿಂಗಳಿನಿಂದಲೂ ಬಿಟ್ಟು ಬಿಟ್ಟು ದಾಳಿಗಳನ್ನು ನಡೆಸುತ್ತಲೇ ಇದೆ. ಡ್ನಿಪ್ರೊ ನದಿಯ ದಡದಲ್ಲಿರುವ ಪ್ರಮುಖ ಕೈಗಾರಿಕಾ ನಗರವಾಗಿ ಕ್ರೆಮೆನ್‌ಚುಕ್, ರಷ್ಯಾದ ಆಕ್ರಮಣದ ಮೊದಲು ಎರಡು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿತ್ತು, ಆದರೆ ಈಗ ನಗರದಲ್ಲಿನ ಜನಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications