• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತಕ್ಕೆ ತೆರಳುವ ವಿಮಾನಗಳಿಗೆ ಸೌದಿ ಅರೇಬಿಯಾ ಅನುಮತಿ

|

ನವದೆಹಲಿ, ಸೆಪ್ಟೆಂಬರ್ 24: ಭಾರತಕ್ಕೆ ತೆರಳುವ ವಿಮಾನಗಳಿಗೆ ಸೌದಿ ಅರೇಬಿಯಾ ಅನುಮತಿ ನೀಡಿದೆ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೊರೊನಾ ಪ್ರಕರಣ ಹೆಚ್ಚುತ್ತಿರುವ ಕಾರಣ ಭಾರತ, ಬ್ರೆಜಿಲ್ ಹಾಗೂ ಅರ್ಜೆಂಟೀನಾದಿಂದ ಆಗಮಿಸುವ ವಿಮಾನಗಳ ಸಂಚಾರಕ್ಕೆ ಸೌದಿ ಅರೇಬಿಯಾ ನಿರ್ಬಂಧ ವಿಧಿಸಿತ್ತು.

ಭಾರತದಿಂದ ಬರುವಂತಿಲ್ಲ, ಹೋಗುವಂತಿಲ್ಲ: ಪ್ರಯಾಣಕ್ಕೆ ಸೌದಿ ಅರೇಬಿಯಾ ನಿರ್ಬಂಧ

ಕಳೆದ 14 ದಿನಗಳಲ್ಲಿ ಭಾರತ, ಬ್ರೆಜಿಲ್‌‌ ಹಾಗೂ ಅರ್ಜೆಂಟೀನಾದಿಂದ ಸೌದಿ ಅರೇಬಿಯಾಕ್ಕೆ ಬರುವ ಮೊದಲು ಈ ದೇಶಗಳಿಗೆ ಸರ್ಕಾರದ ಆಹ್ವಾನವನ್ನು ಹೊರತುಪಡಿಸಿ, ಯಾವುದೇ ವ್ಯಕ್ತಿಗೆ ಒಳಗಡೆ ಪ್ರವೇಶಿಸಲು ಅವಕಾಶವಿಲ್ಲ ಎಂದು ಹೇಳಿತ್ತು.

ಸೌದಿ ಅರೇಬಿಯಾಕ್ಕೆ ಭಾರತೀಯ ವಿಮಾನಯಾನ ಸಂಸ್ಥೆಗಳು ಯಾವುದೇ ವಿಮಾನ ಹಾರಾಟಕ್ಕೆ ಅನುಮತಿ ನೀಡುವುದಿಲ್ಲ. ಸೆಪ್ಟೆಂಬರ್ 24ರಿಂದ ಕೊಲ್ಲಿ ರಾಷ್ಟ್ರದಿಂದ ಯಾವುದೇ ವಿಮಾನಗಳನ್ನು ಭಾರತಕ್ಕೆ ಹಾರಲು ಅವಕಾಶ ಕಲ್ಪಿಸುವುದಿಲ್ಲ ಎಂದು ವಿಮಾನಯಾನ ಅಧಿಕಾರಿ ಮಾಹಿತಿ ನೀಡಿದ್ದರು.

   Dasara ಉದ್ಘಾಟನೆಯಲ್ಲಿ ಈ ಬಾರಿ 200 ಮಂದಿಗೆ ಮಾತ್ರ ಅವಕಾಶ | Oneindia Kannada

   ದುಬೈಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವೊಂದರಲ್ಲಿ, ಇಬ್ಬರು ಪ್ರಯಾಣಿಕರಲ್ಲಿ ಕೊರೊನಾ ಪಾಸಿಟಿವ್ ಆಗಿರುವುದು ಕಂಡುಬಂದಿದ್ದು, ಇದರ ಬೆನ್ನಲ್ಲೇ ಅಧಿಕಾರಿಗಳು ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 3 ರವರೆಗೆ ಭಾರತದಿಂದ ದುಬೈಗೆ ವಿಮಾನಗಳನ್ನು 15 ದಿನಗಳವರೆಗೆ ಸ್ಥಗಿತಗೊಳಿಸಿದ್ದಾರೆ.

   English summary
   Air India Express said Saudi Arabia has permitted outbound passenger flights to India under the Vande Bharat mission.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X