ಆಸ್ಟ್ರಿಯಾ; ರಸ್ತೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, 7 ಸಾವು
ವಿಯೆನ್ನಾ, ನವೆಂಬರ್ 03 : ಆಸ್ಟ್ರಿಯಾದಲ್ಲಿ ಉಗ್ರರ ದಾಳಿ ನಡೆದಿದೆ. ಈ ದಾಳಿಯಲ್ಲಿ 7 ಜನರು ಮೃತಪಟ್ಟಿದ್ದು, ದಾಳಿ ನಡೆಸಿದ ಉಗ್ರರ ಪೈಕಿ ಒಬ್ಬನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
Viennaದ ಮಧ್ಯಪ್ರದೇಶದಲ್ಲಿರುವ Synagogue ಎಂಬಲ್ಲಿ ಸೋಮವಾರ ರಾತ್ರಿ ಗುಂಡಿನ ದಾಳಿ ನಡೆದಿದೆ. ಉಗ್ರರು ಈ ದಾಳಿಯನ್ನು ನಡೆಸಿದ್ದು, ಒಟ್ಟು ಏಳು ಜನರು ಮೃತಪಟ್ಟಿದ್ದಾರೆ.
ಗುಂಡಿನ ದಾಳಿ ನಡೆಸಿದ ಉಗ್ರರ ಪೈಕಿ ಒಬ್ಬನನ್ನು ಹತ್ಯೆ ಮಾಡಲಾಗಿದೆ. ಆತನ ಜೊತೆ ಇನ್ನೂ ಕೆಲವು ಉಗ್ರರಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹಲವಾರು ಜನರು ಈ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಸ್ಥಳೀಯ ವಾಹಿನಿಗಳು ರಸ್ತೆಯಲ್ಲಿ ಉಗ್ರರು 50 ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿ ಮಾಡಿವೆ. ಗುಂಡಿನ ದಾಳಿ ಬಿಟ್ಟರೆ ಬೇರೆ ಯಾವುದೇ ಒತ್ತೆಯಾಳು ಇಟ್ಟುಕೊಳ್ಳುವಂತಹ ಘಟನೆ Synagogue ನಲ್ಲಿ ನಡೆದಿಲ್ಲ ಎಂದು ಪೊಲೀಸರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ಉಗ್ರರ ದಾಳಿಯನ್ನು ವಿಶ್ವದ ಅನೇಕ ದೇಶಗಳು ಖಂಡಿಸಿವೆ. ಭಯೋತ್ಪಾದನೆ ವಿರುದ್ಧದ ಆಸ್ಟ್ರಿಯಾದ ಹೋರಾಟದಲ್ಲಿ ಜೊತೆಗೆ ನಿಲ್ಲುವುದಾಗಿ ಭರವಸೆ ನೀಡಿವೆ. ಅಡಗಿಕೊಂಡಿರುವ ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯವನ್ನು ಮುಂದುವರೆಸಿವೆ.












Click it and Unblock the Notifications