ಸೊಲೆಮನಿ ಹತ್ಯೆಗೆ ಡೊನಾಲ್ಡ್ ಟ್ರಂಪ್ ವಿರುದ್ಧ ಪ್ರತೀಕಾರ: ಇರಾನ್ ಎಚ್ಚರಿಕೆ
ಟೆಹರಾನ್, ಜನವರಿ 22: ತಮ್ಮ ಅಧಿಕಾರಾವಧಿಯುದ್ದಕ್ಕೂ ಇರಾನ್ ಜತೆ ಸಂಘರ್ಷ ನಡೆಸುತ್ತಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಇರಾನ್ ಎಚ್ಚರಿಕೆ ನೀಡಿದೆ.
ಡೊನಾಲ್ಡ್ ಟ್ರಂಪ್ ಅವರು ಯುದ್ಧ ವಿಮಾನದ ನೆರಳಿನ ಅಡಿ ಗಾಲ್ಫ್ ಆಡುತ್ತಿರುವ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಇರಾನ್ ಸರ್ವೋಚ್ಚ ಅಧಿಕಾರಿಯ ಕಚೇರಿ, 2020ರಲ್ಲಿ ನಡೆದ ಮಾರಕ ಡ್ರೋನ್ ದಾಳಿಗೆ ಆದೇಶ ನೀಡಿದ್ದಕ್ಕೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿದೆ.
ಆಯತೊಲ್ಲ ಅಲಿ ಖಮೆನಿಯ ಟ್ವಿಟ್ಟರ್ ಖಾತೆಯ ಮೂಲಕ ಗುರುವಾರ ಈ ಟ್ವೀಟ್ ಮಾಡಲಾಗಿದ್ದು, ಇರಾನ್‌ನ ವಿದೇಶಿ ಕಾರ್ಯಾಚರಣೆಯ ಮುಖ್ಯಸ್ಥರಾಗಿದ್ದ ಜನರಲ್ ಖಾಸಿಂ ಸೊಲೆಮನಿ ಮತ್ತು ಅವರ ಲೆಫ್ಟಿನೆಂಟ್ ಅವರನ್ನು ಬಾಗ್ದಾದ್ ವಿಮಾನ ನಿಲ್ದಾಣದ ಹೊರಭಾಗದಲ್ಲಿ ವೈಮಾನಿಕ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆಗೆ ತಕ್ಕ ಪ್ರತಿಫಲ ಎದುರಿಸುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಎಚ್ಚರಿಸಿದೆ.

'ಪ್ರತೀಕಾರ ತಪ್ಪಿಸಿಕೊಳ್ಳಲಾಗದು. ಸೊಲೆಮನಿ ಅವರ ಕೊಲೆಗಡುಕರು ಮತ್ತು ಅದಕ್ಕೆ ಆದೇಶ ನೀಡಿದ ವ್ಯಕ್ತಿ ಇಬ್ಬರೂ ಅದಕ್ಕೆ ತಕ್ಕ ಸೇಡು ಎದುರಿಸಲೇಬೇಕಾಗುತ್ತದೆ. ಪ್ರತೀಕಾರವನ್ನು ಯಾವ ಸಮಯದಲ್ಲಿ ಬೇಕಾದರೂ ತೀರಿಸಿಕೊಳ್ಳಬಹುದು' ಎಂದು ಅದು ತಿಳಿಸಿದೆ. ಈ ಟ್ವೀಟ್ ಅನ್ನು ಟ್ವಿಟ್ಟರ್ ಅಳಿಸಿ ಹಾಕಿದೆ.

2020ರ ಜನವರಿ 3ರಂದು ಡೊನಾಲ್ಡ್ ಟ್ರಂಪ್ ಆದೇಶದಂತೆ ಇರಾಕ್‌ನ ಬಾಗ್ದಾದ್ ವಿಮಾನ ನಿಲ್ದಾಣದ ಹೊರವಲಯದಲ್ಲಿ ವೈಮಾನಿಕ ದಾಳಿ ನಡೆಸಿದ್ದ ಅಮೆರಿಕದ ಪಡೆಗಳು, ಇರಾನ್‌ನ ಎರಡನೆಯ ಉನ್ನತ ದರ್ಕೆಯ ವ್ಯಕ್ತಿ ಎಂದೇ ಗೌರವಿಸಲ್ಪಡುತ್ತಿದ್ದ ಖಾಸಿಂ ಸೊಲೆಮನಿ ಅವರನ್ನು ಹತ್ಯೆ ಮಾಡಿದ್ದವು. ಅಮೆರಿಕದ ರಾಜತಾಂತ್ರಿಕರು ಹಾಗೂ ಇರಾಕ್‌ನಲ್ಲಿನ ಸೇನಾ ಪಡೆಗಳ ಮೇಲೆ ದಾಳಿ ನಡೆಸಲು ಸೊಲೆಮನಿ ಯೋಜನೆಗಳನ್ನು ರೂಪಿಸುತ್ತಿದ್ದರು ಎಂದು ಅಮೆರಿಕ ಆರೋಪಿಸಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications