• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

1 ಮಿಲಿಯನ್ ಕೊರೊನಾ ಲಸಿಕೆಗಳನ್ನು ಹಿಂಪಡೆಯುವಂತೆ ಭಾರತಕ್ಕೆ ಕೇಳಿದ ದಕ್ಷಿಣ ಆಫ್ರಿಕಾ

|
Google Oneindia Kannada News

ಫೆಬ್ರವರಿ ಆರಂಭದಲ್ಲಿ ಭಾರತ ಕಳುಹಿಸಿದ್ದ ಒಂದು ಮಿಲಿಯನ್ ಕೊರೊನಾ ಲಸಿಕೆಗಳನ್ನು ಹಿಂಪಡೆಯುವಂತೆ ಸೆರಂ ಇನ್‌ಸ್ಟಿಟ್ಯೂಟ್‌ಗೆ ದಕ್ಷಿಣ ಆಫ್ರಿಕಾ ಕೇಳಿದೆ. ಲಸಿಕಾ ವಿತರಣಾ ಕಾರ್ಯಕ್ರಮದಲ್ಲಿ ಅಸ್ಟ್ರಾಜೆನೆಕಾ ಲಸಿಕೆಯನ್ನು ತಡೆಹಿಡಿಯುವಂತೆ ಹೇಳಿರುವ ಕಾರಣ ಒಂದು ಮಿಲಿಯನ್ ಲಸಿಕೆಯನ್ನು ಹಿಂಪಡೆಯಿರಿ ಎಂದು ಹೇಳಿದೆ.

ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಅಸ್ಟ್ರಾಜೆನೆಕಾ ಕೊರೊನಾ ಲಸಿಕೆಯನ್ನು ತಯಾರಿಸುತ್ತಿದೆ. ಫೆಬ್ರವರಿ ಮೊದಲ ವಾರದಲ್ಲಿ ಒಂದು ಮಿಲಿಯನ್ ಕೊರೊನಾ ಲಸಿಕೆಯನ್ನು ಭಾರತದಿಂದ ದಕ್ಷಿಣ ಆಫ್ರಿಕಾಗೆ ಕಳುಹಿಸಲಾಗಿತ್ತು. ಮುಂದಿನ ವಾರಗಳಲ್ಲಿ ಮತ್ತೆ 5 ಲಕ್ಷ ಲಸಿಕೆಗಳನ್ನು ಕಳುಹಿಸಿಕೊಡುವುದಾಗಿ ಹೇಳಲಾಗಿತ್ತು.

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ತುರ್ತು ಬಳಕೆಗೆ WHO ಅನುಮತಿಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ತುರ್ತು ಬಳಕೆಗೆ WHO ಅನುಮತಿ

ಅಸ್ಟ್ರಾಜೆನೆಕಾ ಲಸಿಕೆಯನ್ನು ಮಾರಾಟ ಮಾಡಬಹುದು ಎಂದು ಸರ್ಕಾರ ಹೇಳಿತ್ತು, ಆದರೆ ಒಂದು ಸಣ್ಣ ಕ್ಲಿನಿಕಲ್ ಪ್ರಯೋಗದ ನಂತರ ಲಸಿಕೆಯನ್ನು ತಡೆಹಿಡಿಯಲಾಗಿದೆ.

ದಕ್ಷಿಣ ಆಫ್ರಿಕಾದ ವಿಟ್ವಾಟರ್ಸ್ ವಿಶ್ವವಿದ್ಯಾಲಯ ಹಾಗೂ ಆಕ್ಸ್‌ಫರ್ಡ್ ಅಧ್ಯಯನ ಪ್ರಕಾರ ದಕ್ಷಿಣ ಆಫ್ರಿಕಾದಲ್ಲಿ ಕಂಡುಬಂದಿರುವ ರೂಪಾಂತರಿ ವೈರಸ್ ವಿರುದ್ಧ ಸಾಧಾರಣ ರಕ್ಷಣೆ ನೀಡುತ್ತದೆ ಎಂಬುದು ತಿಳಿದುಬಂದಿದೆ.

ದಕ್ಷಿಣ ಆಫ್ರಿಕಾದಲ್ಲಿ ಇನ್ನೇನು ಲಸಿಕೆ ವಿತರಣಾ ಕಾರ್ಯಕ್ರಮ ಆರಂಭಗೊಳ್ಳಬೇಕಿತ್ತು, ಇದೀಗ ಜಾನ್ಸನ್ ಆಂಡ್ ಜಾನ್ಸ್ನ ಲಸಿಕೆಯನ್ನು ಮೊದಲು ಆರೋಗ್ಯ ಕಾರ್ಯಕರ್ತರಿಗೆ ನೀಡುವ ಮೂಲಕ ಲಸಿಕೆ ವಿತರಣ ಕಾರ್ಯಕ್ರಮ ಆರಂಭಿಸಲಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯು ಅಸ್ಟ್ರಾಜೆನೆಕಾ ಹಾಗೂ ಆಕ್ಸ್‌ಫರ್ಡ್ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಕೆ ಮಾಡಬಹುದು ಎಂದು ಹೇಳಿದೆ.

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಗೆ ಸೂಚಿಸಿದೆ.ಖ್ಯಾತ ಅಂತಾರಾಷ್ಟ್ರೀಯ ಔಷಧ ತಯಾರಿಕ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಜಂಟಿಯಾಗಿ ಈ ಲಸಿಕೆಯನ್ನು ತಯಾರಿಸಿದ್ದು, ಭಾರತದಲ್ಲಿ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ, ಕೊರಿಯಾದಲ್ಲಿ ಎಸ್‌ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ.

ಈ ಕುರಿತು ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ವರದಿ ಮಾಡಿದ್ದು, ಕೋವಿಡ್-19 ನಿಯಂತ್ರಣದ ನಿಟ್ಟಿನಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯನ್ನು ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ ಎನ್ನಲಾಗಿದೆ.

English summary
South Africa has asked the Serum Institute of India to take back the one million COVID-19 vaccine doses the company had sent in early February, The Economic Times reported on Tuesday, a week after the country said it will put on hold use of AstraZeneca's shot in its vaccination program.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X