ಏಕಕಾಲದಲ್ಲಿ 10 ಮಕ್ಕಳಿಗೆ ಜನ್ಮ ನೀಡಿ ದಾಖಲೆ ಬರೆದ ಮಹಿಳೆ
ದ. ಆಫ್ರಿಕಾ, ಜೂನ್ 9: ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ಏಕಕಾಲದಲ್ಲಿ ಹತ್ತು ಮಕ್ಕಳಿಗೆ ಜನ್ಮ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಅಷ್ಟೇ ಅಲ್ಲ, ಹಳೆಯ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.
ದಕ್ಷಿಣ ಆಫ್ರಿಕಾದ ಗೌಟೆಂಗ್ ನಿವಾಸಿ ಗೋಸಿಯಾಮ್ ತಾಮರಾ ಸಿತೋಲ್ ಎಂಬ 37 ವರ್ಷದ ಮಹಿಳೆ ಸೋಮವಾರ ಹತ್ತು ಮಕ್ಕಳಿಗೆ ಜನ್ಮ ನೀಡಿರುವುದಾಗಿ ವರದಿಯಾಗಿದೆ. ಎಲ್ಲಾ ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿರುವುದಾಗಿ ತಿಳಿದುಬಂದಿದೆ.
ತಮಗೆ ಎಂಟು ಮಕ್ಕಳಾಗುತ್ತವೆ ಎಂದು ತಿಳಿದುಕೊಂಡಿದ್ದೆವು. ಆದರೆ ಸೋಮವಾರ ಹತ್ತು ಮಕ್ಕಳಿಗೆ ಗೋಸಿಯಾಮ್ ಜನ್ಮ ನೀಡಿದ್ದಾರೆ. ಏಳು ಗಂಡು ಮಕ್ಕಳು ಹಾಗೂ ಮೂರು ಹೆಣ್ಣು ಮಕ್ಕಳು ಜನಿಸಿವೆ. ಗೋಸಿಯಾಮ್ಗೆ ಏಳು ತಿಂಗಳು, ಏಳು ದಿನಗಳಾಗಿದ್ದವು ಎಂದು ಮಹಿಳೆ ಪತಿ ಟೆಬೊಹೊ ಟ್ವಿಟ್ಟರ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಗೋಸಿಯಾಮ್ ಅವರಿಗೆ ಈ ಮುನ್ನವೇ ಅವಳಿ ಮಕ್ಕಳಿದ್ದು, ಆ ಮಕ್ಕಳಿಗೆ 6 ವರ್ಷ. ಇದೀಗ ಹತ್ತು ಮಕ್ಕಳು ಜನಿಸಿದ್ದು, ಒಟ್ಟು 12 ಮಕ್ಕಳ ತಾಯಿಯಾಗಿದ್ದಾರೆ ಗೋಸಿಯಾಮ್.
"ನಾವು ಅವಳಿ ಅಥವಾ ತ್ರಿವಳಿ ಮಕ್ಕಳಾಗಬಹುದು ಎಂದುಕೊಂಡಿದ್ದೆವು. ಆದರೆ ವೈದ್ಯರು ಇಷ್ಟು ಮಕ್ಕಳು ಎಂದು ಹೇಳಿದಾಗ ಆಶ್ಚರ್ಯವಾಯಿತು. ಯಾವುದೇ ತೊಂದರೆಯಿಲ್ಲದೇ ಮಕ್ಕಳು ಜನಿಸಿದವು. ಮಕ್ಕಳು ಆರೋಗ್ಯಕರವಾಗಿವೆ" ಎಂದು ತಿಳಿಸಿದ್ದಾರೆ.
ಮೊರೊಕ್ಕಾದ ಮಲಿಯಾನ್ ಹಲೀಮಾ ಎಂಬ ಮಹಿಳೆ ಒಂಬತ್ತು ಮಕ್ಕಳಿಗೆ ಜನ್ಮ ನೀಡಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಆ ದಾಖಲೆಯನ್ನು ಗೋಸಿಯಾಮ್ ಮುರಿದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications