ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆ ಶೇ.95ರಷ್ಟು ಪರಿಣಾಮಕಾರಿ

|
Google Oneindia Kannada News

ಮಾಸ್ಕೋ, ನವೆಂಬರ್ 24: ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆ ಶೇ.95ರಷ್ಟು ಪರಿಣಾಮಕಾರಿ ಎಂದು ರಷ್ಯಾ ಹೇಳಿದೆ.

ಲಸಿಕೆ ಕುರಿತು ಎರಡನೇ ಮಧ್ಯಂತರ ವರದಿ ಹೊರಬಿದ್ದಿದ್ದು, ಅದರಲ್ಲಿ ಕೊರೊನಾ ಲಸಿಕೆ ಹೆಚ್ಚು ಪರಿಣಾಮಕಾರಿ ಎಂದು ಹೇಳಲಾಗಿದೆ.

ಭಾರತಕ್ಕೆ ಪಿಫೈಜರ್ ಕೊರೊನಾ ಲಸಿಕೆಯ ಅಗತ್ಯವಿಲ್ಲ: ಹರ್ಷವರ್ಧನ್ಭಾರತಕ್ಕೆ ಪಿಫೈಜರ್ ಕೊರೊನಾ ಲಸಿಕೆಯ ಅಗತ್ಯವಿಲ್ಲ: ಹರ್ಷವರ್ಧನ್

8.40 ಯೂರೋಗಳಿಗಿಂತಲೂ ಕಡಿಮೆ ಬೆಲೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಸಿಕೆ ಲಭ್ಯವಿದೆ. ಇದನ್ನು ಎರಡರಿಂದ ಎಂಟು ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಶೇಖರಿಸಿಡಬೇಕು.

Sputnik V COVID-19 Vaccine 95 Percent Effective

ಮೊದಲ ಡೋಸ್ ನೀಡಿ 42 ದಿನಗಳು ಕಳೆದ ಬಳಿಕ ದತ್ತಾಂಶವನ್ನು ಪಡೆಯಲಾಗಿದೆ. ಲಸಿಕೆಯನ್ನು ನೀಡಿ ಮೊದಲ 28ದಿನಗಳ ಬಳಿಕ ಲಸಿಕೆ ಶೇ.91.4ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿತ್ತು. ಇದೀಗ ಶೇ.95ರಷ್ಟು ಪರಿಣಾಮಕಾರಿಯಾಗಿದೆ ಎಂದು ತಿಳಿದುಬಂದಿದೆ.

22 ಸಾವಿರ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಶೇ.90ರಷ್ಟು ಪರಿಣಾಮಕಾರಿ ಎಂದು ಸೆರಂ ಇನ್‌ಸ್ಟಿಟ್ಯೂಟ್ ಹೇಳಿದೆ.ಜೊತೆಗೆ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳೂ ಕಂಡು ಬಂದಿಲ್ಲ ಎಂದು ಕಂಪನಿ ತಿಳಿಸಿದೆ.

ಮೊದಲಿಗೆ ಒಂದು ಡೋಸ್‌ ನೀಡಿ ನಂತರ ಒಂದು ತಿಂಗಳ ಬಳಿಕ ಅರ್ಧ ಡೋಸ್‌ ನೀಡಿದಾಗ ಕೊರೊನಾ ವೈರಸ್‌ ತಡೆಗಟ್ಟುವಲ್ಲಿ ಲಸಿಕೆಯು ಶೇ. 90ರಷ್ಟು ಯಶಸ್ವಿಯಾಗಿದೆ.

ಲಸಿಕೆಯ ಮಾನವರ ಮೇಲಿನ ಪರೀಕ್ಷೆಯ ಮಧ್ಯಂತರ ದತ್ತಾಂಶಗಳನ್ನು ಸಂಸ್ಥೆಯ ಸೋಮವಾರ ಬಿಡುಗಡೆ ಮಾಡಿದೆ. ಬ್ರಿಟನ್‌ ಮತ್ತು ಬ್ರೆಜಿನ್‌ನಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಇದು ಋಜುವಾತಾಗಿದೆ ಎಂದು ಸಂಸ್ಥೆ ತಿಳಿಸಿದೆ. ಜೊತೆಗೆ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ಪರಿಣಾಮಗಳೂ ಕಾಣಿಸಿಕೊಂಡಿಲ್ಲ ಎಂದು ಹೇಳಿದೆ.

ಕೊರೊನಾದ ವಿರುದ್ಧ ಲಸಿಕೆಯು ತುಂಬಾ ಪರಿಣಾಮಕಾರಿಯಾಗಿದ್ದು, ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಆಸ್ಟ್ರಾಝೆನಿಕಾ ಸಿಇಒ ಪಾಸ್ಕಲ್‌ ಸಾರಿಯಟ್‌ ಹೇಳಿದ್ದಾರೆ.

English summary
Russia's Sputnik V coronavirus vaccine is 95 percent effective according to a second interim analysis of clinical trial data, its developers said on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X