ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ಹೇರಿದ ಶ್ರೀಲಂಕಾ

ಕೊಲೊಂಬೊ, ಮೇ 06: ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭಾರತದಿಂದ ಬರುವ ಪ್ರಯಾಣಿಕರಿಗೆ ಶ್ರೀಲಂಕಾ ನಿರ್ಬಂಧ ವಿಧಿಸಿದೆ. ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ, ಈಗಾಗಲೇ ಯುಕೆ, ಯುಎಇ, ಆಸ್ಟ್ರೇಲಿಯಾ, ಸಿಂಗಾಪುರ ದೇಶಗಳು ನಿರ್ಬಂಧ ಹೇರಿವೆ.

ಶ್ರೀಲಂಕಾ ಸಿವಿಲ್ ಏವಿಯೇಷನ್ ಅಥಾರಿಟಿ ಈ ಕುರಿತು ಮಾಹಿತಿ ನೀಡಿದ್ದು, ತಕ್ಷಣದಿಂದಲೇ ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಪ್ರಸನ್ನ ರಣತುಂಗಾ ಅಧ್ಯಕ್ಷ ರಾಜಪಕ್ಸ ಅವರ ಬಳಿ ಮಾತನಾಡಿ ಶ್ರೀಲಂಕಾ ವಲಸೆ ನೌಕರರಿಗೆ ಬರಲು ಅವಖಾಶ ಮಾಡಿಕೊಡುವ ಬಗ್ಗೆ ಚರ್ಚಿಸಿದ್ದಾರೆ.

Sri Lanka Bans Travellers From India With Immediate Effect Over COVID-19 Surge

ದೇಶದಲ್ಲಿ ಕೊರೊನಾ ಎರಡನೇ ಅಲೆ ತಾಂಡವವಾಡುತ್ತಿದ್ದು ಪ್ರತಿನಿತ್ಯವೂ ಲಕ್ಷಾಂತರ ಮಂದಿ ಸೋಂಕಿಗೆ ಒಳಗಾಗುತ್ತಿದ್ದಾರೆ, ಸಾವಿರಾರು ಮಂದಿ ಬಲಿಯಾಗುತ್ತಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ.

ನಿನ್ನೆ ಒಂದೇ ದಿನ 4 ಲಕ್ಷದ 12 ಸಾವಿರದ 262 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2 ಕೋಟಿಯ 10 ಲಕ್ಷದ 77 ಸಾವಿರದ 410ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 3 ಸಾವಿರದ 980 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 23 ಲಕ್ಷದ 01 ಸಾವಿರದ 68ಕ್ಕೇರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 35 ಲಕ್ಷದ 66 ಸಾವಿರದ 398ಕ್ಕೆ ಏರಿಕೆಯಾಗಿದೆ.

ಈ ಮಧ್ಯೆ, ಕಳೆದ 24 ಗಂಟೆಗಳಲ್ಲಿ 3 ಲಕ್ಷದ 29 ಸಾವಿರದ 113 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+