ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀಲಂಕಾ ಬಾಂಬ್ ದಾಳಿ: ಭದ್ರತಾ ಕಾರ್ಯದರ್ಶಿ ರಾಜೀನಾಮೆ

|
Google Oneindia Kannada News

ಕೊಲಂಬೊ, ಏಪ್ರಿಲ್ 25: ಶ್ರೀಲಂಕಾ ಬಾಂಬ್ ದಾಳಿ ಹಿನ್ನೆಲೆಯಲ್ಲಿ ವೈಫಲ್ಯದ ನೈತಿಕ ಹೊಣೆ ಹೊತ್ತು ಶ್ರೀಲಂಕಾದ ಭದ್ರತಾ ಇಲಾಖೆ ಮುಖ್ಯ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೊ ಇಂದು ರಾಜೀನಾಮೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ವಿಶೇಷ ಪುಟ

ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, ಘಟನೆಯಲ್ಲಿ ನನ್ನದು ತಪ್ಪಿಲ್ಲ ಆದರೆ ನನ್ನ ಅಧೀನದಲ್ಲಿ ಬರುವ ಸಂಸ್ಥೆಗಳು ಸೂಕ್ತವಾಗಿ ಕರ್ತವ್ಯ ನಿರ್ವಹಿಸಿಲ್ಲವಾದ್ದರಿಂದ ಈ ನಿರ್ಣಯ ತೆಗೆದುಕೊಂಡಿದ್ದೇನೆ ಎಂದು ರಾಜೀನಾಮೆ ಬಗ್ಗೆ ಹೇಳಿದ್ದಾರೆ.

ಭಾರತ ನೀಡಿದ್ದ ಎಚ್ಚರಿಕೆಯನ್ನು ಲಂಕಾ ಗಂಭೀರವಾಗಿ ತೆಗೆದುಕೊಂಡಿದ್ದರೆ... ಭಾರತ ನೀಡಿದ್ದ ಎಚ್ಚರಿಕೆಯನ್ನು ಲಂಕಾ ಗಂಭೀರವಾಗಿ ತೆಗೆದುಕೊಂಡಿದ್ದರೆ...

ಶ್ರೀಲಂಕಾದಲ್ಲಿ ಬಾಂಬ್ ದಾಳಿ ಆಗುವ ಬಗ್ಗೆ ಮುಂಚೆಯೇ ಎಚ್ಚರಿಕೆ ನೀಡಲಾಗಿತ್ತು, ಆದರೂ ಭದ್ರತಾ ಇಲಾಖೆಯು ಸೂಕ್ತವಾಗಿ ಸ್ಪಂದಿಸಿ ಎಚ್ಚರವಹಿಸದ ಕಾರಣ ಈ ದೊಡ್ಡ ಸ್ಫೋಟ ಸಂಭವಿಸಿದೆ ಹಾಗಾಗಿ ಭದ್ರತಾ ಇಲಾಖೆಯು ಕರ್ತವ್ಯ ನಿರ್ವಹಿಸಲು ಸೋತಿದೆ ಎಂದು ಆರೋಪಿಸಲಾಗಿದೆ.

Sri Lanka bomb blast: Top security officilas resigns

ರಕ್ಷಣಾ ಇಲಾಖೆ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೊ ರಾಜೀನಾಮೆ ನೀಡುವ ಜೊತೆಗೆ, ಪೊಲೀಸ್ ಮುಖ್ಯಾಧಿಕಾರಿ ಹಾಗೂ ಇನ್ನೂ ಕೆಲವು ಭದ್ರತಾ ಇಲಾಖೆ ಸಂಬಂಧಿತ ಅಧಿಕಾರಿಗಳೂ ರಾಜೀನಾಮೆ ನೀಡಿದ್ದಾರೆ.

ಶ್ರೀಲಂಕಾ ಸರಣಿ ಆತ್ಮಹತ್ಯಾ ದಾಳಿಯ ರೂವಾರಿಗಳ ಬದುಕು ಹೇಗಿತ್ತು ಗೊತ್ತಾ? ಶ್ರೀಲಂಕಾ ಸರಣಿ ಆತ್ಮಹತ್ಯಾ ದಾಳಿಯ ರೂವಾರಿಗಳ ಬದುಕು ಹೇಗಿತ್ತು ಗೊತ್ತಾ?

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರಾದರೂ ಸಹ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರೇ ರಾಜೀನಾಮೆ ನೀಡುವಂತೆ ಇವರಿಗೆ ಸೂಚಿಸಿದ್ದರು ಎನ್ನಲಾಗಿದೆ.

ದಾಳಿ ಭೀತಿ: ಶ್ರೀಲಂಕಾದಲ್ಲಿ ಮುಸ್ಲಿಂ ನಿರಾಶ್ರಿತರಿಂದ ರಕ್ಷಣೆಗೆ ಮೊರೆ ದಾಳಿ ಭೀತಿ: ಶ್ರೀಲಂಕಾದಲ್ಲಿ ಮುಸ್ಲಿಂ ನಿರಾಶ್ರಿತರಿಂದ ರಕ್ಷಣೆಗೆ ಮೊರೆ

ಕಳೆದ ಭಾನುವಾರದಂದು ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ 359 ಮಂದಿ ಮೃತರಾಗಿದ್ದರು, 500 ಕ್ಕೂ ಹೆಚ್ಚು ಮಂದಿ ಗಾಯಾಳುಗಳಾಗಿದ್ದಾರೆ.

English summary
Top security officials of Sri Lanka resigns after Sri Lanka bomb blast. Last Sunday serial blast happen in Sri Lanka killed 359 people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X