ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ

|
Google Oneindia Kannada News

ಕೊಲಂಬೊ ಮೇ 9: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದಾರೆ. ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಜನರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಆದರೂ ರಾಜಪಕ್ಸೆ ಸಹೋದರರಾದ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ರಾಜೀನಾಮೆಯ ಕರೆಗಳನ್ನು ಇಲ್ಲಿಯವರೆಗೆ ಧಿಕ್ಕರಿಸಿದ್ದರು. ಆದರೀಗ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೆ ರಾಷ್ಟ್ರವ್ಯಾಪಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರ ಕಚೇರಿಯ ಹೊರಗೆ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ 23 ಮಂದಿ ಗಾಯಗೊಂಡಿದ್ದಾರೆ. ಹೀಗಾಗಿ ತಕ್ಷಣವೇ ಜಾರಿಗೆ ಬರುವಂತೆ ಇಡೀ ಶ್ರೀಲಂಕಾದಲ್ಲಿ ಕರ್ಫ್ಯೂ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರದ ಪರ ಗುಂಪುಗಳು ಪ್ರಧಾನಿ ಕಚೇರಿಯ ಹೊರಗೆ ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ್ದು, ಕರ್ಫ್ಯೂಗೆ ಕಾರಣವಾಗಿದೆ. ದೇಶದಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ನಿವಾರಣೆಗೆ ಮಧ್ಯಂತರ ಆಡಳಿತವನ್ನು ರಚಿಸಲು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಮೇಲೆ ಒತ್ತಡ ಹೆಚ್ಚಾಗಿತ್ತು. ಆದರೂ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ನಿವಾರಿಸಲು ಸರ್ಕಾರ ವಿಫಲವಾದ ಕಾರಣ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಅಧಿಕಾರಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಹೀಗಾಗಿ ಸರ್ಕಾರದ ಪರ ಗುಂಪುಗಳು ಹಾಗೂ ಪ್ರತಿಭಟನೆಯ ಗುಂಪುಗಳ ನಡುವೆ ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಗಳು ಇವೆ.

ಶ್ರೀಲಂಕಾ ಬಿಕ್ಕಟ್ಟು: ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಣೆಶ್ರೀಲಂಕಾ ಬಿಕ್ಕಟ್ಟು: ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಣೆ

ಆಗಿದ್ದೇನು?

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಪರಿಹಾರಕ್ಕೆ ಒತ್ತಾಯಿಸಿ ಸ್ಥಳೀಯರು (ಮಾರ್ಚ್ 31) ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜಪಕ್ಸೆ ಅವರ ನಿವಾಸದ ಹೊರಗೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಕೊಲಂಬೊದ ಹಲವು ಭಾಗಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಜೊತೆಗೆ ಪೊಲೀಸರು ರಾಜಪಕ್ಸೆ ನಿವಾಸದ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಹಲವರನ್ನು ಬಂಧಿಸಿದ್ದಾರೆ.

Sri Lanka PM Mahinda Rajapaksa has resigned

ಮಾರ್ಚ್ 31ರಂದು ಅಧ್ಯಕ್ಷರ ಮನೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದರು. ಜೊತೆಗೆ ಪ್ರತಿಭಟನೆ ವೇಳೆ ಪೊಲೀಸರಿಗೂ ಹಾಗೂ ಪ್ರತಿಭಟನಾಕಾರರಿಗೂ ವಾಗ್ವಾದ ನಡೆದು ಗಲಾಟೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಉದ್ರಿಕ್ತ ಪ್ರತಿಭಟನಾಕಾರರು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು ಐವರು ಪೊಲೀಸರು ಗಾಯಗೊಂಡಿದ್ದಾರೆ.

ಲಂಕಾ ಪರಿಸ್ಥಿತಿ

ಶ್ರೀಲಂಕಾ ಪ್ರಸ್ತುತ ಇತಿಹಾಸದಲ್ಲಿ ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ಇಂಧನ, ಅಡುಗೆ ಅನಿಲ, ಅಗತ್ಯ ವಸ್ತುಗಳ ಕೊರತೆ ಹಾಗೂ ಹಲವು ಗಂಟೆಗಳ ಕಾಲ ವಿದ್ಯುತ್ ಕಡಿತದಿಂದ ಸಾರ್ವಜನಿಕರು ವಾರಗಟ್ಟಲೆ ತೊಂದರೆ ಅನುಭವಿಸುತ್ತಿದ್ದಾರೆ. ಆದರೂ ರಾಜಪಕ್ಸೆ ಅವರು ತಮ್ಮ ಸರ್ಕಾರದ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದಾರೆ. ವಿದೇಶಿ ವಿನಿಮಯ ಬಿಕ್ಕಟ್ಟು ಅವರ ತಯಾರಿಕೆಯಲ್ಲ ಮತ್ತು ಆರ್ಥಿಕ ಕುಸಿತವು ಹೆಚ್ಚಾಗಿ ಸಾಂಕ್ರಾಮಿಕ ರೋಗದಿಂದ ಉದ್ಭವಿಸಿದೆ ಎನ್ನಲಾಗುತ್ತಿದೆ. ಜೊತೆಗೆ ಶ್ರೀಲಂಕಾ ದ್ವೀಪದಲ್ಲಿ ಪ್ರವಾಸೋದ್ಯಮ ಆದಾಯ ಮತ್ತು ಆಂತರಿಕ ಹಣ ರವಾನೆ ಕ್ಷೀಣಿಸುತ್ತಿದೆ.

Sri Lanka PM Mahinda Rajapaksa has resigned

ಸಂವಿಧಾನದ 155 ನೇ ವಿಧಿಯ ಪ್ರಕಾರ, ತುರ್ತು ಪರಿಸ್ಥಿತಿಯನ್ನು ಘೋಷಿಸಲು ರಾಷ್ಟ್ರಪತಿಗಳಿಗೆ ಸಂಪೂರ್ಣ ವಿವೇಚನೆ ಇದೆ ಮತ್ತು ಅವರ ಘೋಷಣೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದಿಲ್ಲ. ರಾಷ್ಟ್ರಪತಿ ಹೊರಡಿಸಿದ ಘೋಷಣೆಯು ಒಂದು ತಿಂಗಳವರೆಗೆ ಮಾನ್ಯವಾಗಿರುತ್ತದೆ. ಸಂಸತ್ತು 14 ದಿನಗಳೊಳಗೆ ಅದನ್ನು ಅಂಗೀಕರಿಸಬೇಕು. ಅನುಮೋದಿಸದಿದ್ದರೆ, ಘೋಷಣೆಯ ಅವಧಿ ಮುಗಿಯುತ್ತದೆ.

English summary
Sri Lankan Prime Minister Mahinda Rajapaksa resigned from his post as per local media reports. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X