ಪೊಲೀಸರಿಗೆ ಗುಂಡು: ಶ್ರೀಲಂಕಾ ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ ಬಂಧನ

ಕೊಲಂಬೊ, ಅಕ್ಟೋಬರ್ 29: ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮತ್ತು ಹಾಲಿ ರಾಜಕಾರಿಣಿ ಅರ್ಜುನ ರಣತುಂಗ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮೇಲೆ ಗುಂಡು ಹಾರಿಸಿ ಒಬ್ಬರನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಶ್ರೀಲಂಕಾ ಪೊಲೀಸರು ಅರ್ಜುನ ರಣತುಂಗಾ ಅವರನ್ನು ಬಂಧಿಸಿದ್ದಾರೆ. ಅವರನ್ನು ಕೆಲವೇ ಗಂಟೆಗಳಲ್ಲಿ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

ಮಾಜಿ ಶ್ರೀಲಂಕಾ ಕ್ರಿಕೆಟ್‌ ತಂಡದ ನಾಯಕ ಆಗಿದ್ದ ರಣತುಂಗ ಅವರು ರಾಜಕಾರಣಿ ಸಹ ಆಗಿದ್ದು. ಶ್ರೀಲಂಕಾದಲ್ಲಿ ಉಂಟಾಗಿರುವ ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ಮೊನ್ನೆಯಷ್ಟೆ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಲಾಗಿತ್ತು.

Sri Lanka politician Arjun Rantunga has been arrested by Police

ಭಾನುವಾರ ಅವರು ತಮ್ಮ ಕಚೇರಿಗೆ ಹೋಗಲು ಯತ್ನಿಸಿದಾಗ ಅಲ್ಲಿನ ಪೊಲೀಸರು ಅವರನ್ನು ತಡೆದಿದ್ದಾರೆ. ಆಗ ರಣತುಂಗಾ ಅವರ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಮೂರು ಜನ ಪೊಲೀಸರಿಗೆ ಗುಂಡು ತಗುಲಿದ್ದು, ಒಬ್ಬರು ಮೃತಪಟ್ಟರೆ, ಇಬ್ಬರು ಗಾಯಗೊಂಡಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಸಿರಿಸೇನಾ ಅವರು ಏಕಾಏಕಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ ಹೊಸ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಸೆ ಅವರಿಗೆ ಪ್ರಮಾಣವಚನ ಬೋಧಿಸಿದರು ಅಲ್ಲದೆ ಹಳೆಯ ಮಂತ್ರಿಮಂಡಲವನ್ನು ಸಂಪೂರ್ಣ ವಜಾ ಮಾಡಿದರು. ಇದು ಶ್ರೀಲಂಕಾದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಉಲ್ಬಣಿಸಲು ಕಾರಣವಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+