ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 13ರಂದು ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆ : ಸ್ಪೀಕರ್ ಸ್ಪಷ್ಟನೆ

|
Google Oneindia Kannada News

ಕೊಲಂಬೊ, ಜುಲೈ 10: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗಿದೆ. ಪ್ರತಿಭಟನಾಕಾರರು ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಜುಲೈ 13ರಂದು ರಾಜಪಕ್ಸೆ ರಾಜೀನಾಮೆ ನೀಡುತ್ತಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ಧನ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಜುಲೈ 15ರವರೆಗೂ ಶಾಲೆಗಳು ಬಂದ್, 4 ವಿವಿ ಕಥೆ ಕ್ಲೋಸ್!ಶ್ರೀಲಂಕಾದಲ್ಲಿ ಜುಲೈ 15ರವರೆಗೂ ಶಾಲೆಗಳು ಬಂದ್, 4 ವಿವಿ ಕಥೆ ಕ್ಲೋಸ್!

ಶನಿವಾರ ಸಂಜೆ ನಡೆದ ಸರ್ವಪಕ್ಷ ನಾಯಕರ ಸಭೆಯ ನಂತರ ರಾಜೀನಾಮೆ ನೀಡುವಂತೆ ಅಬೇವರ್ಧನ ಪತ್ರ ಬರೆದ ನಂತರ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆ ನೀಡುವ ನಿರ್ಧಾರವನ್ನು ಸ್ಪೀಕರ್‌ಗೆ ತಿಳಿಸಿದರು.

ಸಂಸತ್ತಿನ ಉತ್ತರಾಧಿಕಾರಿಯನ್ನು ನೇಮಿಸುವವರೆಗೆ ಅಬೇವರ್ಧನ ಅವರಿಗೆ ಹಂಗಾಮಿ ಅಧ್ಯಕ್ಷರಾಗಲು ಅನುಕೂಲವಾಗುವಂತೆ ಅಧ್ಯಕ್ಷ ರಾಜಪಕ್ಸೆ ಮತ್ತು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಪಕ್ಷದ ಮುಖಂಡರು ಒತ್ತಾಯಿಸಿದರು. 2020ರಲ್ಲಿ ಗೊಟಬಯ ರಾಜಪಕ್ಸೆ ಅವರು ಶ್ರೀಲಂಕಾ ಅಧ್ಯಕ್ಷರಾಗಿ ನೇಮಕವಾಗಿದ್ದರು.

ಶ್ರೀಲಂಕಾ ಪ್ರಧಾನಿ ವಿಕ್ರಮಸಿಂಘೆ ಕೂಡ ರಾಜೀನಾಮೆ ನೀಡಿದ್ದಾರೆ. ಆದರೂ ಸುಮ್ಮನಾಗದ ಉದ್ರಿಕ್ತಗೊಂಡ ಪ್ರತಿಭಟನಾಕಾರರ ಗುಂಪು ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ವಪಕ್ಷ ಸರ್ಕಾರ ರಚನೆಗೆ ಸಿದ್ಧತೆ

ಸರ್ವಪಕ್ಷ ಸರ್ಕಾರ ರಚನೆಗೆ ಸಿದ್ಧತೆ

ಅಭೂತಪೂರ್ವ ಆರ್ಥಿಕ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಅತಿದೊಡ್ಡ ಪ್ರತಿಭಟನೆಗಳು ನಡೆದ ನಂತರ, ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡಲು ಅಧ್ಯಕ್ಷ ರಾಜಪಕ್ಸೆ ಮತ್ತು ಪ್ರಧಾನ ಮಂತ್ರಿ ವಿಕ್ರಮಸಿಂಘೆ ರಾಜೀನಾಮೆ ಕೊಡಬೇಕು ಎಂದು ಸ್ಪೀಕರ್ ಅಬೇವರ್ಧನ ಕೇಳಿದ್ದರು.

ಸ್ಪೀಕರ್ ಅಬೇವರ್ಧನ ಅಧ್ಯಕ್ಷ ರಾಜಪಕ್ಸೆಗೆ ಬರೆದ ಪತ್ರದಲ್ಲಿ, ಪಕ್ಷದ ನಾಯಕರ ಸಭೆಯ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದಾರೆ. ನಂತರ ಪ್ರಧಾನಿ ವಿಕ್ರಮಸಿಂಘೆ ಕೂಡ ರಾಜೀನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದು, ಸರ್ವಪಕ್ಷಗಳನ್ನು ಒಳಗೊಂಡ ಸರ್ಕಾರ ರಚನೆಗೆ ಮುಂದಾಗಿದ್ದಾರೆ.

Sri Lanka crisis:ಪ್ರಮುಖ 10 ಅಂಶಗಳುSri Lanka crisis:ಪ್ರಮುಖ 10 ಅಂಶಗಳು

ನೂತನ ಪ್ರಧಾನಿ ನೇತೃತ್ವದಲ್ಲಿ ಸರ್ಕಾರ ರಚನೆ

ನೂತನ ಪ್ರಧಾನಿ ನೇತೃತ್ವದಲ್ಲಿ ಸರ್ಕಾರ ರಚನೆ

ಪಕ್ಷದ ನಾಯಕರು ರಾಜಪಕ್ಸೆ ಮತ್ತು ವಿಕ್ರಮಸಿಂಘೆ ತಕ್ಷಣವೇ ರಾಜೀನಾಮೆ ನೀಡಬೇಕು, ಹಾಲಿ ಅಧ್ಯಕ್ಷರನ್ನು ನೇಮಿಸಲು ಏಳು ದಿನಗಳಲ್ಲಿ ಸಂಸತ್ತನ್ನು ಕರೆಯಬೇಕು ಮತ್ತು ಸಂಸತ್ತಿನಲ್ಲಿ ಬಹುಮತವನ್ನು ಹೊಂದಿರುವ ಹೊಸ ಪ್ರಧಾನಿ ನೇತೃತ್ವದಲ್ಲಿ ಮಧ್ಯಂತರ ಸರ್ವಪಕ್ಷ ಸರ್ಕಾರವನ್ನು ನೇಮಿಸಬೇಕೆಂದು ವಿವಿಧ ಪಕ್ಷದ ನಾಯಕರು ಒತ್ತಾಯಿಸಿದ್ದಾರೆ.

ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

ಕಡಿಮೆ ಅವಧಿಯೊಳಗೆ ಚುನಾವಣೆ ನಡೆಸಿ ಹೊಸ ಸರ್ಕಾರ ಸ್ಥಾಪಿಸಲು ನಿರ್ಧರಿಸಲಾಗಿದೆ. 1948 ರಲ್ಲಿ ದೇಶವು ಸ್ವತಂತ್ರವಾದಾಗಿನಿಂದ ತೀವ್ರ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಭಾರಿ ಸಾರ್ವಜನಿಕ ಪ್ರತಿಭಟನೆ ನಂತರ ಅಧ್ಯಕ್ಷ ಗೊಟಬಯ ರಾಜಪಕ್ಸೆ ಭೂಗತರಾಗಿದ್ದಾರೆ. ಶನಿವಾರ ಸಾವಿರಾರು ಪ್ರತಿಭಟನಾಕಾರರು ಅಧ್ಯಕ್ಷ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ್ದರು. ಬೃಹತ್ ಪ್ರಮಾಣದ ಪ್ರತಿಭಟನಾಕಾರರು ನಿವಾಸಕ್ಕೆ ಮುತ್ತಿಗೆ ಹಾಕುವ ಮುನ್ನವೇ, ಅಧ್ಯಕ್ಷ ರಾಜಪಕ್ಸೆ ಮನೆಯಿಂದ ನಿರ್ಗಮಿಸಿದ್ದಾರೆ ಎಂದು ಹೇಳಲಾಗಿದೆ.

ಭದ್ರತಾ ಪಡೆ-ಪ್ರತಿಭಟನಾಕಾರರ ನಡುವೆ ಘರ್ಷಣೆ

ಭದ್ರತಾ ಪಡೆ-ಪ್ರತಿಭಟನಾಕಾರರ ನಡುವೆ ಘರ್ಷಣೆ

ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಏಳು ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 45 ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರಲ್ಲಿ ಕೆಲವರು ಶ್ರೀಲಂಕಾದ ಧ್ವಜಗಳು ಮತ್ತು ಹೆಲ್ಮೆಟ್‌ಗಳನ್ನು ಹಿಡಿದಿದ್ದರು. ಅಧ್ಯಕ್ಷ ರಾಜಪಕ್ಸೆ ಅವರ ರಾಜೀನಾಮೆಗೆ ಒತ್ತಾಯಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದರು.

2.2 ಕೋಟಿ ಜನರಿರುವ ದ್ವೀಪರಾಷ್ಟ್ರ ಶ್ರೀಲಂಕಾ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನಲುಗಿದೆ. ಏಳು ದಶಕಗಳಲ್ಲೇ ದೇಶದ ಸ್ಥಿತಿ ಅತ್ಯಂತ ಕೆಟ್ಟದಾಗಿದೆ. ವಿದೇಶಿ ವಿನಿಮಯದ ತೀವ್ರ ಕೊರತೆಯಿಂದ ಆರ್ಥಿಕ ಸ್ಥಿತಿ ದುರ್ಬಲಗೊಂಡಿದೆ, ಇದು ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಅಗತ್ಯ ಆಮದುಗಳಿಗೆ ಪಾವತಿಸಲು ಪರದಾಡುತ್ತಿದೆ.

Recommended Video

Virat Kohli West Indies ಸರಣಿಯಿಂದ ಖುದ್ದಾಗಿ ಹೊರಹೋಗುತ್ತಿದ್ದಾರೆ | *Cricket | Oneindia Kannada

English summary
Sri Lanka's embattled President Gotabaya Rajapaksa would resign on Wednesday, Parliament Speaker Mahinda Yapa Abeywardena said late Saturday night. the all-party government will form under a new Prime Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X