ದುಬೈನಲ್ಲಿ ವಿಶ್ವಗುರು ಬಸವಣ್ಣನ ಪ್ರತಿಮೆ ಸ್ಥಾಪನೆ
ಬೆಂಗಳೂರು, ಜು. 06: ಲಂಡನ್‌ನ ಥೇಮ್ಸ್ ನದಿಯ ದಂಡೆ ಮೇಲೆ ವಿಶ್ವಗುರು ಬಸವಣ್ಣ ಪ್ರತಿಮೆ ಸ್ಥಾಪನೆಯಾಗಿದ್ದು ಇತಿಹಾಸ. ಇದೀಗ ಅರಬ್ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಬಸವಣ್ಣನರ ಪ್ರತಿಮೆ ಸ್ಥಾಪನೆಯಾಗುವ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಬಸವಣ್ಣನವರ ಚಿಂತನೆಗಳು ಹರಡುವಂತಾಗಿದೆ.
ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ದುಬೈ ಬಸವ ಸಮಿತಿ ವತಿಯಿಂದ ಬಸವಣ್ಣನವರ ಪಂಚಲೋಹದ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಅವರ ಸಹಾಯ ಮತ್ತು ಸಹಕಾರದಿಂದ ದುಬೈ ಬಸವ ಸಮಿತಿಯವರು ಬಸವಣ್ಣನ ಮೂರ್ತಿಯನ್ನು ಬೆಂಗಳೂರಿನ ಗಾಯತ್ರಿ ಶಿಲ್ಪಿ ಅವರಿಂದ ಕೆತ್ತನೆ ಮಾಡಿಸಿ ದುಬೈಗೆ ತೆಗೆದುಕೊಂಡು ಹೋಗಿದ್ದಾರೆ.
ಬಸವಣ್ಣನ ಮೂರ್ತಿಯನ್ನು ಬಸವ ಜಯಂತಿ ಸಂದರ್ಭದಲ್ಲಿ ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಪ್ರತಿಷ್ಠಾಪಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ, ಕೊರೊನಾ ವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಸವ ಜಯಂತಿ ಕಾರ್ಯಕ್ರಮ ಮಾಡಲು ಸಾಧ್ಯವಾಗದ್ದರಿಂದ ಶನಿವಾರ (ಜು. 4) ಸರಳವಾಗಿ ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಕಾರ್ಯಕ್ರಮ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ವಿಪುಲ್ ಶಾ ಸದ್ಯದ ಕೋವಿಡ್ ಪರಿಸ್ಥಿತಿಯಲ್ಲಿ ಈ ಕಾರ್ಯಕ್ರಮವನ್ನು ಅತ್ಯಂತ ಸರಳ ರೀತಿಯಲ್ಲಿ ಮಾಡಲಾಗಿದೆ, ಮುಂಬರುವ ದಿನಗಳಲ್ಲಿ ಕನ್ನಡಿಗರೆಲ್ಲರನ್ನೂ ಸೇರಿಸಿ ಅಧಿಕೃತವಾಗಿ ದೊಡ್ಡ ಪ್ರಮಾಣದ ಕಾರ್ಯಕ್ರಮವನ್ನು ನೆರವೇರಿಸಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಅನಾವರಣ ಗೊಳಿಸೋಣ ಎಂದು ಹೇಳಿದರು.
ಕರ್ನಾಟಕದ ಮಹಾನ್ ಸಮಾಜ ಸುಧಾರಕರಾದ ಬಸವಣ್ಣನವರ ವಚನಗಳಿಂದ ನಾವೆಲ್ಲರೂ ಪ್ರೇರೇಪಿತರಾಗಬೇಕೆಂದು ಹೇಳಿ ಬಸವ ಸಮಿತಿ ದುಬೈಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಯುಎಇ ಬಸವ ಸಮಿತಿ ದುಬೈ ಅಧ್ಯಕ್ಷರಾದ ಸತೀಶ್ ಹಿಂಡೇರ, ಸಲಹಾ ಹಾಗೂ ಸ್ಥಾಪಕ ಸಮಿತಿಯ ಸದಸ್ಯರಾದ ಚಂದ್ರಶೇಖರ ಲಿಂಗದಳ್ಳಿ, ಬಸವ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ ಮುಳ್ಳೂರ್, ಡಾ. ಮಮತಾ ರೆಡ್ಡೇರ ಹಾಜರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications