ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ದಯವಿಟ್ಟು ಮನೆಯಿಂದ ಹೊರ ಬರಬೇಡಿ': ಸಿಡ್ನಿಯಲ್ಲಿ ಇದೆಂಥಾ ಪರಿಸ್ಥಿತಿ?

|
Google Oneindia Kannada News

ಸಿಡ್ನಿ, ಜುಲೈ 09: ಸಿಡ್ನಿಯಲ್ಲಿ ಕೊವಿಡ್-19 ಸೋಂಕಿನ ಡೆಲ್ಟಾ ರೂಪಾಂತರದ ಮೇಲಿನ ಹಿಡಿತ ಕಳೆದುಕೊಳ್ಳಲಾಗಿದೆ. ಆಸ್ಟ್ರೇಲಿಯಾದ ಅತಿದೊಡ್ಡ ನಗರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹೆಚ್ಚುತ್ತಿರುವ ಹಿನ್ನೆಲೆ ಶುಕ್ರವಾರ ನಿರ್ಬಂಧಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ.

"ಸಿಡ್ನಿಯಲ್ಲಿ ಕಳೆದ 24 ಗಂಟೆಗಳಲ್ಲಿ 44 ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇಂಥ ಪರಿಸ್ಥಿತಿಯಲ್ಲಿ ಅನಗತ್ಯವಾಗಿ ಮನೆಗಳಿಂದ ಹೊರ ಬರಬೇಡಿ," ಎಂದು ಸಿಡ್ನಿಯ 50 ಲಕ್ಷ ನಿವಾಸಿಗಳಲ್ಲಿ ಗ್ಲಾಡಿಸ್ ಬೆರೆಜಿಕ್ಲಿಯನ್ ಮನವಿ ಮಾಡಿಕೊಂಡಿದ್ದಾರೆ.

ಮೊದಲು ಓದಿ: ಭಾರತದಲ್ಲಿ ಭಯ ಹುಟ್ಟಿಸಿದ ಕಪ್ಪಾ ರೂಪಾಂತರ ವೈರಸ್ ಬಗ್ಗೆ ತಿಳಿದುಕೊಳ್ಳಿಮೊದಲು ಓದಿ: ಭಾರತದಲ್ಲಿ ಭಯ ಹುಟ್ಟಿಸಿದ ಕಪ್ಪಾ ರೂಪಾಂತರ ವೈರಸ್ ಬಗ್ಗೆ ತಿಳಿದುಕೊಳ್ಳಿ

ಕಳೆದ ಮೂರು ವಾರಗಳಿಂದ ಸಿಡ್ನಿಯಲ್ಲಿ ಲಾಕ್‌ಡೌನ್‌ನನ್ನು ಮುಂದುವರಿಸಿದ ಹೊರತಾಗಿಯೂ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಏರುಮುಖವಾಗಿ ಸಾಗುತ್ತಿರುವುದು ಅಂಕಿ-ಅಂಶಗಳಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ.

Strict Rules Imposed Across Sydney To Control Coronavirus

ಸಿಡ್ನಿಯಲ್ಲಿ ಜೂನ್ ನಂತರದ ಕೊವಿಡ್-19 ಆಟ:

ಜೂನ್ ಮಧ್ಯಭಾಗದಿಂದ ಈವರೆಗೂ ಸಿಡ್ನಿಯಲ್ಲಿ 439 ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಜಾಗತಿಕ ಮಟ್ಟದಲ್ಲಿ ದೊಡ್ಡ ನಗರಗಳಲ್ಲಿ ವರದಿಯಾಗಿರುವ ಕೊರೊನಾವೈರಸ್ ಪ್ರಕರಣಗಳಿಗೆ ಹೋಲಿಸಿದರೆ ಇದು ತುಂಬ ಸಣ್ಣ ಸಂಖ್ಯೆ ಎನಿಸುತ್ತದೆ. ಆದರೆ ಆಸ್ಟ್ರೇಲಿಯಾದಲ್ಲಿ ಸೋಂಕು ಹರಡುವಿಕೆಗೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ದೇಶದ ಜನಸಂಖ್ಯೆಯಲ್ಲಿ ಶೇ.9ರಷ್ಟು ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ.

ಸಿಡ್ನಿಯಲ್ಲಿ ಹೊಸ ನಿರ್ಬಂಧಗಳು ಜಾರಿ:

Recommended Video

ಟೀಂ ಇಂಡಿಯಾದ 3 ಆಟಗಾರರಿಗೆ ಇದೆ ಕೊನೆ ಅವಕಾಶ | Oneindia Kannada

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೊಸ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಹೊಸ ನಿಯಮಗಳ ಪ್ರಕಾರ, ಬೆಳಗಿನ ವಾಕಿಂಗ್ ಸಂದರ್ಭದಲ್ಲಿ ಇಬ್ಬರಿಗಿಂತ ಹೆಚ್ಚು ಜನರು ಸೇರುವಂತಿಲ್ಲ. ಅನಗತ್ಯ ಪ್ರವಾಸವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.

English summary
Strict Rules Imposed Across Sydney To Control Coronavirus. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X