Morocco Earthquake: ಮೊರಾಕೊದಲ್ಲಿ ಪ್ರಬಲ ಭೂಕಂಪ: 2,000 ಜನ ಸಾವು!

ಮೊರಾಕೊದಲ್ಲಿ ಶುಕ್ರವಾರ ಸಂಭವಿಸಿದ ಭಾರೀ ಭೂಕಂಪದಲ್ಲಿ ಇಲ್ಲಿಯವರೆಗೆ 2 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೊರಾಕೊದ ಆಂತರಿಕ ಸಚಿವಾಲಯವು ಈ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇದು ಅತ್ಯಂತ ಪ್ರಬಲವಾದ ಭೂಕಂಪವಾಗಿದ್ದು ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಈ ಪ್ರಬಲ 2,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದು ಕನಿಷ್ಠ 2,000 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ. ಮೊರಾಕೊದ ಆಂತರಿಕ ಸಚಿವಾಲಯ 2,012 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದೆ. ಇದರಲ್ಲಿ 2,059 ಮಂದಿ ಗಾಯಗೊಂಡಿದ್ದು ಅವರಲ್ಲಿ 1,404 ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ.

strong-earthquake-in-morocco

6.8 ತೀವ್ರತೆಯ ಭೂಕಂಪ

ಕಾಸಾಬ್ಲಾಂಕಾದಿಂದ ಮರ್ರಾಕೇಶ್‌ವರೆಗೆ ದೇಶದ ಹಲವು ಪ್ರದೇಶಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದರಿಂದಾಗಿ ಅನೇಕ ಕಟ್ಟಡಗಳು ನೆಲಕ್ಕಚ್ಚಿವೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 6.8 ಎಂದು ಅಳೆಯಲಾಗಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ, ಭೂಕಂಪ ಸ್ಥಳೀಯ ಸಮಯ ಶುಕ್ರವಾರ (6 p.m. ET) ಸಂಭವಿಸಿದೆ ಮತ್ತು 18.5 ಕಿಲೋಮೀಟರ್ (11.4 ಮೈಲುಗಳು) ಆಳವನ್ನು ಹೊಂದಿದೆ. ಮಾರಾಕೇಶ್‌ನ ನೈಋತ್ಯಕ್ಕೆ 71 ಕಿಮೀ (44 ಮೈಲಿ) ಎತ್ತರದ ಅಟ್ಲಾಸ್ ಪರ್ವತಗಳಲ್ಲಿ ಭೂಕಂಪನದ ಕೇಂದ್ರಬಿಂದುವಿದೆ.

ಮುಂದುವರಿದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ

ಭೂಕಂಪನದ ಬಳಿಕ ಹಲವಾರು ಜನ ಕಾಣೆಯಾಗಿದ್ದಾರೆ. ಅವಶೇಷಗಳ ಅಡಿಯಲ್ಲಿ ಇನ್ನೂ ಅನೇಕ ಜನರು ಹೂತು ಹೋಗಿದ್ದಾರೆ. ಹೀಗಾಗಿ ಸ್ಥಳದಲ್ಲಿ ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಈಗಾಗಲೇ ಹಲವು ಮೃತದೇಹಗಳು ಪತ್ತೆಯಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ಘಟನೆಯಿಂದಾಗಿ ದೇಶದ ರಾಜಮನೆತನವು ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಪೀಡಿತ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು, ಆಹಾರ ಸರಬರಾಜು, ಟೆಂಟ್‌ಗಳು ಮತ್ತು ಹೊದಿಕೆಗಳನ್ನು ಒದಗಿಸಲು ಸಶಸ್ತ್ರ ಪಡೆಗಳು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ.

ಸಾಧ್ಯವಿರುವ ಎಲ್ಲ ನೆರವಿಗೆ ಭಾರತ ಸಿದ್ಧ: ಪ್ರಧಾನಿ ಮೋದಿ

ಮೊರಾಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರು ಟ್ವೀಟ್ ಮಾಡಿ, "ಮೊರಾಕೊದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಜೀವ ಮತ್ತು ಆಸ್ತಿ ನಷ್ಟದಿಂದ ತುಂಬಾ ದುಃಖವಾಗಿದೆ. ಈ ದುಃಖದ ಕ್ಷಣದಲ್ಲಿ, ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಮೊರಾಕೊದ ಜನರೊಂದಿಗೆ ಇವೆ. ಈ ಕಷ್ಟದ ಸಮಯದಲ್ಲಿ ಭಾರತ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ಒದಗಿಸಲು ಸಿದ್ಧ'' ಎಂದು ಬರೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+