ಪಾಕಿಸ್ತಾನದಲ್ಲಿ 9 ಪೊಲೀಸ್ ಅಧಿಕಾರಿಗಳನ್ನೇ ಕೊಂದ ಆತ್ಮಹತ್ಯಾ ಬಾಂಬರ್- ಪುಲ್ವಾಮಾ ನೆನಪಿಸಿದ ದಾಳಿ ಬಗ್ಗೆ ತಿಳಿಯಿರಿ
ಪಾಕಿಸ್ತಾನದ ಬೋಲನ್‌ನಲ್ಲಿ ಸೋಮವಾರ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ ಒಂಬತ್ತು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ.
ಇಸ್ಲಾಮಾಬಾದ್, ಮಾರ್ಚ್ 06: ಪಾಕಿಸ್ತಾನದ ಬೋಲನ್‌ನಲ್ಲಿ ಸೋಮವಾರ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ ಒಂಬತ್ತು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ. ನೈಋತ್ಯ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರದೇಶದಲ್ಲಿ ಬೋಲನ್ ಪಟ್ಟಣ ಬರುತ್ತದೆ. ಈ ಕುರಿತು ಡಾನ್ ಪತ್ರಿಕೆಗೆ ಮಾತನಾಡಿರುವ ಕಚ್ಚಿ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಮಹಮೂದ್ ನೋಟ್ಜೈ, ಸಿಬಿ ಮತ್ತು ಕಚ್ಚಿ ಗಡಿಗೆ ಹೊಂದಿಕೊಂಡಿರುವ ಪ್ರದೇಶವಾದ ಕಾಂಬ್ರಿ ಸೇತುವೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಿದ್ದಾರೆ.
An #explosion targeted the vehicle of security forces in #Balochistan’s Bolan area, leading to fears of several casualties into in the incident.
— Rahul Upadhyay (@rahulrajnews) March 6, 2023
9 personnel have died and 15 are wounded. pic.twitter.com/J4SGxUeWG5
ಇದು ಆತ್ಮಹತ್ಯಾ ಬಾಂಬ್ ದಾಳಿ ಎಂದು ಶಂಕಿಸಲಾಗುತ್ತಿದೆ. ಆದರೆ ಪೊಲೀಸ್ ಅಧಿಕಾರಿಗಳು ದಾಳಿಯ ನಿಖರ ಸ್ವರೂಪವನ್ನು ತನಿಖೆ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಮತ್ತು ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ನೋಟ್ಜೈ ತಿಳಿಸಿದ್ದಾರೆ. ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಮುಖವಾಗಿ, ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ಪೊಲೀಸರು ಬಲೂಚಿಸ್ತಾನ್ ಕಾನ್‌ಸ್ಟಾಬ್ಯುಲರಿ (ಬಿಸಿ) ಯ ಸದಸ್ಯರು. ಇದು ಪ್ರಾಂತೀಯ ಪೊಲೀಸ್ ಪಡೆಯ ವಿಭಾಗವಾಗಿದ್ದು, ಪ್ರಮುಖ ಸ್ಥಳಗಳು ಮತ್ತು ಜೈಲುಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ಹೊಂದಿದೆ ಎಂದು ಡಾನ್ ವರದಿ ಮಾಡಿದೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿ ಪ್ರದೇಶಗಳ ಮೇಲೆ ದಾಳಿಯನ್ನು ತೀವ್ರಗೊಳಿಸಿರುವ ಭಯೋತ್ಪಾದಕ ಸಂಘಟನೆ ತೆಹ್ರೀಕ್-ಇ-ತಾಲಿಬಾನ್ ಈ ಘಟನೆ ಎಸಗಿದೆ ಎಂದು ಶಂಕಿಸಲಾಗಿದೆ.

ಈ ಮಧ್ಯೆ, ಬಲೂಚಿಸ್ತಾನದ ಮುಖ್ಯಮಂತ್ರಿ ಮಿರ್ ಅಬ್ದುಲ್ ಖುಡೂಸ್ ಬಿಜೆಂಜೊ ಅವರು ದಾಳಿಯನ್ನು ಖಂಡಿಸಿದ್ದಾರೆ. ಪ್ರಾಂತ್ಯದ ಅಭಿವೃದ್ಧಿಯ ಕೊರತೆಗೆ ಭಯೋತ್ಪಾದಕರನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ.
ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಿಂದ ಪೂರ್ವಕ್ಕೆ 160 ಕಿಮೀ (100 ಮೈಲುಗಳು) ದೂರದಲ್ಲಿರುವ ನಗರದಲ್ಲಿ ದಾಳಿ ನಡೆದಿದೆ ಎಂದು ನೋಟಿಜೈ ಹೇಳಿದ್ದಾರೆ.
ಈ ದಾಳಿಯಲ್ಲಿ ಕನಿಷ್ಠ 11 ಜನರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆದಿರುವ ಸರಣಿ ದಾಳಿಗಳಲ್ಲಿ ಇದು ಒಂದಾಗಿದೆ.
#BREAKING 🚨
— 𝐙𝐞𝐧𝐫𝐚𝐥 Bazwa🇵🇰 (Parody) (@ZenralBazwa) March 6, 2023
Suicide Bomber on a motorcycle targeted a 🇵🇰 security Forces convoy in #Balochistan . 9 dead & 13 Injured. Security personnel were returning to Quetta after performing duty at Sibi festival. #Pakistan. pic.twitter.com/P3fqACbU1X
ಬಲೂಚಿಸ್ತಾನದ ಶ್ರೀಮಂತ ಅನಿಲ ಮತ್ತು ಖನಿಜ ಸಂಪನ್ಮೂಲಗಳನ್ನು ಪಾಕಿಸ್ತಾನ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಲಾಗಿದೆ. ಅಲ್ಲಿನ ಜನಾಂಗೀಯ ಬಲೂಚ್ ಗೆರಿಲ್ಲಾಗಳು ದಶಕಗಳಿಂದ ಸರ್ಕಾರದ ವಿರುದ್ಧ ಹೋರಾಡುತ್ತಿದ್ದಾರೆ. ಸೋಮವಾರದ ದಾಳಿಯ ಹೊಣೆಗಾರಿಕೆಯನ್ನು ಯಾವುದೇ ಗುಂಪು ವಹಿಸಿಕೊಂಡಿಲ್ಲ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications